ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿಯಮಿತವು 2022-23ನೇ ಆರ್ಥಿಕ ವರ್ಷದಲ್ಲಿ ತಾನು ಗಳಿಸಿರುವ ನಿವ್ವಳ ಲಾಭಾಂಶದಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸಿದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಲಾಭಾಂಶದ ಈ ಬಾಬ್ತಿನ ₹19.84 ಕೋಟಿ ರೂ.ಗಳನ್ನು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಚೆಕ್ ರೂಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸೌಧದಲ್ಲಿ ಹಸ್ತಾಂತರಿಸಿದರು.
ಇದನ್ನೂ ಓದಿ- EPFO UAN ಪ್ರೊಫೈಲ್ ಅಪ್ಡೇಟ್ ಮಾಡಲು ಏನು ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ
ನಿಗಮದಲ್ಲಿ ಸರಕಾರವು 10 ರೂ. ಮುಖಬೆಲೆಯ 69.47 ಕೋಟಿಗೂ ಹೆಚ್ಚು ಷೇರುಗಳನ್ನು ಹೊಂದಿದ್ದು, 2022-23ರಲ್ಲಿ ಇವುಗಳ ಮೌಲ್ಯ 694.70 ಕೋಟಿ ರೂ.ಗಳಿಗೂ ಹೆಚ್ಚಾಗಿತ್ತು. ಫೆ.20ರಂದು ನಡೆದ ನಿಗಮದ ಆಡಳಿತ ಮಂಡಳಿಯ ಸಭೆಯಲ್ಲಿ ಇದರಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸುವ ನಿರ್ಣಯವನ್ನು ಮಾಡಲಾಗಿತ್ತು. ಅದರಂತೆ, ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗುತ್ತಿದೆ’ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಇದನ್ನೂ ಓದಿ- Aadhaar Card Update: ಆಧಾರ್ ಗೆ ಸಬಂಧಿಸಿದ ಬಿಗ್ ಅಪ್ಡೇಟ್ : ಮೂರು ತಿಂಗಳವರೆಗೆ ಈ ಸೇವೆ ಉಚಿತ !
ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ ಸಿ ಸತೀಶ್, ಕಾರ್ಯನಿರ್ವಾಹಕ ನಿರ್ದೇಶಕ ಡಿ ಪಿ ಪ್ರಕಾಶ ಮುಂತಾದವರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.