ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿಯಮಿತವು 2022-23ನೇ ಆರ್ಥಿಕ ವರ್ಷದಲ್ಲಿ ತಾನು ಗಳಿಸಿರುವ ನಿವ್ವಳ ಲಾಭಾಂಶದಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸಿದೆ. 


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಲಾಭಾಂಶದ ಈ ಬಾಬ್ತಿನ ₹19.84 ಕೋಟಿ ರೂ.ಗಳನ್ನು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಚೆಕ್ ರೂಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸೌಧದಲ್ಲಿ ಹಸ್ತಾಂತರಿಸಿದರು.


ಇದನ್ನೂ ಓದಿ- EPFO UAN ಪ್ರೊಫೈಲ್ ಅಪ್ಡೇಟ್ ಮಾಡಲು ಏನು ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ


ನಿಗಮದಲ್ಲಿ ಸರಕಾರವು 10 ರೂ. ಮುಖಬೆಲೆಯ 69.47 ಕೋಟಿಗೂ ಹೆಚ್ಚು ಷೇರುಗಳನ್ನು ಹೊಂದಿದ್ದು, 2022-23ರಲ್ಲಿ ಇವುಗಳ ಮೌಲ್ಯ 694.70 ಕೋಟಿ ರೂ.ಗಳಿಗೂ ಹೆಚ್ಚಾಗಿತ್ತು. ಫೆ.20ರಂದು ನಡೆದ ನಿಗಮದ ಆಡಳಿತ ಮಂಡಳಿಯ ಸಭೆಯಲ್ಲಿ ಇದರಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸುವ ನಿರ್ಣಯವನ್ನು ಮಾಡಲಾಗಿತ್ತು. ಅದರಂತೆ, ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗುತ್ತಿದೆ’ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.


ಇದನ್ನೂ ಓದಿ- Aadhaar Card Update: ಆಧಾರ್ ಗೆ ಸಬಂಧಿಸಿದ ಬಿಗ್ ಅಪ್ಡೇಟ್ : ಮೂರು ತಿಂಗಳವರೆಗೆ ಈ ಸೇವೆ ಉಚಿತ !


ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ ಸಿ ಸತೀಶ್, ಕಾರ್ಯನಿರ್ವಾಹಕ ನಿರ್ದೇಶಕ ಡಿ ಪಿ ಪ್ರಕಾಶ ಮುಂತಾದವರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.