Karnataka Budget 2023 : ಸುದೀರ್ಘ 3 ಗಂಟೆಗಳ ಕಾಲ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಇಲ್ಲಿದೆ ಹೈಲೈಟ್ಸ್‌

Karnataka Budget 2023 Live Update: 2023-24 ರ ಹಣಕಾಸು ವರ್ಷದ ಎರಡನೇ ಬಜೆಟ್ ಇದಾಗಿದೆ. ಕಾಂಗ್ರೆಸ್‌ನ ಐದು ಚುನಾವಣಾ ಪೂರ್ವ ಖಾತರಿಗಳನ್ನು ಬಜೆಟ್‌ ಒಳಗೊಂಡಿದೆ. 

Written by - Chetana Devarmani | Last Updated : Jul 7, 2023, 03:01 PM IST
Karnataka Budget 2023 : ಸುದೀರ್ಘ 3 ಗಂಟೆಗಳ ಕಾಲ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಇಲ್ಲಿದೆ ಹೈಲೈಟ್ಸ್‌
Live Blog

Karnataka Budget 2023 Live: ಮೇ 10 ರಂದು ನಡೆದ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದಾರೆ.  ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳಿಗೆ 59,000 ಕೋಟಿ ರೂಪಾಯಿ ವೆಚ್ಚ ಮತ್ತು ಪ್ರಸ್ತುತ ಬಜೆಟ್‌ನ ವೆಚ್ಚ 3.39 ಲಕ್ಷ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಈ ಹಿಂದೆಯೇ ಬಹಿರಂಗ ಪಡಿಸಿದ್ದರು. ಮಾಜಿ ಸಿಎಂ ಬೊಮ್ಮಾಯಿ ಈ ವರ್ಷದ ಫೆಬ್ರವರಿಯಲ್ಲಿ 3.09 ಲಕ್ಷ ಕೋಟಿ ರೂಪಾಯಿಗಳ ಪೂರಕ ಬಜೆಟ್ ಮಂಡಿಸಿದ್ದರು. 2023-24 ರ ಹಣಕಾಸು ವರ್ಷದ ಎರಡನೇ ಬಜೆಟ್ ಇದಾಗಿದೆ. ಸುದೀರ್ಘ 3 ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸಿದ್ದಾರೆ.

7 July, 2023

  • 14:55 PM

    Karnataka Budget 2023 LIVE: ಡೆಲಿವರಿ ಬಾಯ್‌ಗಳಿಗೆ ಬಂಪರ್

    - ಜೊಮಾಟೊ, ಸ್ವಿಗ್ಗಿ, ಅಮೆಜಾನ್ ಮುಂತಾದ ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ  ಡೆಲಿವರಿ ಬಾಯ್‌ಗಳಿಗೆ ಬಂಪರ್‌

    - ಪೂರ್ಣ ಸಮಯ ಅಥವಾ ಅರೆಕಾಲಿಕ ಡೆಲಿವರಿ ಬಾಯ್‌ಗಳಿಗೆ ಸಾಮಾಜಿಕ ಭದ್ರತೆ

    - ಈ ನಿಟ್ಟಿನಲ್ಲಿ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆ ಘೋಷಿಸಿದ ಸಿಎಂ ಸಿದ್ದರಾಮಯ್ಯ 

  • 14:53 PM

    Karnataka Budget 2023 LIVE: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕೆ-ಜಿ.ಐ.ಎಸ್. (KGIS) ತಂತ್ರಜ್ಞಾನ

    - ಸಕಾಲದಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪರ್ಕಿತ ಡೇಟಾಬೇಸ್‌ (Connected database) ವಿಧಾನ ಬಳಸಿ ಕಡಿಮೆ ಅವಧಿಯಲ್ಲಿ ಸೇವೆಗಳನ್ನು ನೀಡಲು ಬ್ಯಾಕ್‌ ಎಂಡ್‌ ಪ್ರಕ್ರಿಯೆಗಳಲ್ಲಿ (backend processes) ಪಾರದರ್ಶಕತೆ ತರಲಾಗುವುದು. 

    - 100 ಪ್ರಮುಖ ಸೇವಾಸಿಂಧು ಸೇವೆಗಳನ್ನು ಸಕಾಲ ವಿನ್ಯಾಸಕ್ಕೆ ಅನುಗುಣವಾಗಿ ಪರಿವರ್ತಿಸಲು Business Process Re-engineering ಕೋಶವನ್ನು ಸ್ಥಾಪಿಸಲಾಗುವುದು

    - ಇದರಲ್ಲಿ ಪ್ರಮುಖವಾಗಿ ಆದಾಯ ಪ್ರಮಾಣ ಪತ್ರಕ್ಕಾಗಿ ಕುಟುಂಬ ಆದಾಯವನ್ನು ವಸ್ತುನಿಷ್ಠ ನಿರ್ಣಯ ರೂಪದಲ್ಲಿ ಪರಿವರ್ತಿಸಲಾಗುವುದು

    - ಈ ಯೋಜನೆಗಾಗಿ ಮೂರು ಕೋಟಿ ರೂ.ಗಳನ್ನು ಒದಗಿಸಲಾಗುವುದು.   

    - ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕೆ-ಜಿ.ಐ.ಎಸ್. (KGIS) ತಂತ್ರಜ್ಞಾನವನ್ನು ಆಧರಿಸಿ ವೈಜ್ಞಾನಿಕ ಮತ್ತು ತರ್ಕಬದ್ದ ಮಾರ್ಗಸೂಚಿ ದರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು

    - ಎಲ್ಲಾ ರಸ್ತೆಗಳು ಮತ್ತು ಬೀದಿಗಳಿಗೆ ಹೊಂದಿಕೊಂಡಿರುವ ಆಸ್ತಿಗಳ ಮಾರ್ಗಸೂಚಿ ಮೌಲ್ಯವನ್ನು ಹಾಗೂ ಅದರ ನಿಖರ ಮುದ್ರಾಂಕ ಶುಲ್ಕವನ್ನು ಆನ್‌ಲೈನ್‌ ನಲ್ಲಿ ಪಡೆಯಲು ಅನುಕೂಲವಾಗಲಿದೆ

    - ಪ್ರಾಯೋಗಿಕವಾಗಿ ಈ ಯೋಜನೆಯನ್ನು ಒಂದು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ರಾಜ್ಯದೆಲ್ಲೆಡೆ ಜಾರಿಗೊಳಿಸಲಾಗುವುದು.    
     

  • 14:49 PM

    Karnataka Budget 2023 LIVE: ಇ-ಆಡಳಿತ ವ್ಯವಸ್ಥೆ 
     
    - ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ FRUITS, Kutumba, GIS ಗಳನ್ನು ಬಳಸಿಕೊಂಡು ತಾಲ್ಲೂಕು ಹಂತದ ಕಛೇರಿಗಳಲ್ಲಿನ ಶಾಸನಬದ್ಧ ಕಾಲಮಿತಿ ಇರುವಂತಹ ಸೇವೆಗಳನ್ನು ಹೊರತುಪಡಿಸಿ, ಉಳಿದ ಸೇವೆಗಳನ್ನು ತತ್‌ಕ್ಷಣವೇ ಅಥವಾ ಅದೇ ದಿನದಂದು ಅಥವಾ ಅತ್ಯಂತ ಸಂಕೀರ್ಣ ಪ್ರಕರಣಗಳಲ್ಲಿ ಒಂದು ವಾರದೊಳಗೆ ಸಾರ್ವಜನಿಕರಿಗೆ ಒದಗಿಸಲು ಯತ್ನಿಸಲಾಗುವುದು. 

    - ಪ್ರಾಯೋಗಿಕವಾಗಿ ಒಂಬತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಈ ವಿಧಾನವನ್ನು ಜಾರಿಗೆ ತರಲು ಚಿಕ್ಕಬಳ್ಳಾಪುರ, ಕೊರಟಗೆರೆ, ಚಾಮರಾಜನಗರ, ರಾಯಚೂರು, ಧಾರವಾಡ ಮತ್ತು ಬಂಟ್ವಾಳ ತಾಲ್ಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.  

  • 14:43 PM

    Karnataka Budget 2023 LIVE: ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ

    - ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ 2.0 ಯೋಜನೆಯನ್ನು ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೊಳಿಸಿದೆ

    - ಬಿ.ಬಿ.ಎಂ.ಪಿ. ಸೇರಿದಂತೆ ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ

    - ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,900 ಕೋಟಿ ರೂ. ಮತ್ತು ರಾಜ್ಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 2,600 ಕೋಟಿ ರೂ. ಗಳಾಗಿವೆ

    - ಈ ಯೋಜನೆಯಡಿಯಲ್ಲಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರಿನ ನಿರ್ವಹಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು  
     

  • 14:25 PM

    Karnataka Vijayapura Budget 2023 LIVE: ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ  

    - ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆ

    - ಹೊಸ ವಿಮಾನ ನಿಲ್ದಾಣ ಯೋಜನೆಗೆ ಬಜೆಟ್‌ನಲ್ಲಿ ಅನುಮೋದನೆ

    - ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅನುದಾನ

    - ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೆಂಟರ್‌ ನಿರ್ಮಾಣ  

  • 14:21 PM

    Karnataka Agriculture Budget 2023 LIVE: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಅನುದಾನ

    - ರಾಜ್ಯದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಅನುದಾನ

    - ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ಸ್ಟಾರ್ಟ ಅಪ್, ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು 5 ಕೋಟಿ ರೂ. ಅನುದಾನ 

  • 14:13 PM

    Karnataka Budget 2023 LIVE: ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್‌ ವ್ಯವಸ್ಥೆ

    - ಕೃಷಿ ಭಾಗ್ಯ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿ

    - ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ಕ್ರಮ

    - ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.

    - ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲ

    - ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್‌ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು 
     

  • 14:08 PM

    Karnataka Budget 2023 LIVE: 5 ಗ್ಯಾರಂಟಿ ಯೋಜನೆ 52 ಸಾವಿರ ಕೋಟಿ

    - ಗೃಹಲಕ್ಷ್ಮೀ ಯೋಜನೆಗೆ 30 ಸಾವಿರ ಕೋಟಿ

    - ಗೃಹಜ್ಯೋತಿ ಯೋಜನೆಗೆ 13,910 ಕೋಟಿ

    - ಬೆಂಗಳೂರಿಗೆ 45 ಸಾವಿರ ಕೋಟಿ

    - ವೈಟ್ ಟಾಪಿಂಗ್ ಯೋಜನೆಗೆ 800  ಕೋಟಿ

    - ನಮ್ಮ ಮೆಟ್ರೋಗೆ 45 ಸಾವಿರ ಕೋಟಿ

    - ಇಂದಿರಾ ಕ್ಯಾಂಟೀನ್‍ಗೆ 100 ಕೋಟಿ

    - ಸಮಾಜ ಕಲ್ಯಾಣ ಇಲಾಖೆಗೆ 11,173 ಕೋಟಿ

    - ಆಹಾರ ಇಲಾಖೆಗೆ 10,460 ಕೋಟಿ

  • 14:04 PM

    Karnataka Health Budget 2023 LIVE: ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕ್ರಮ 

    - ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು

    - ಇದೀಗ ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು

    - ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು

    - ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು

    - ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 PHC ಗಳನ್ನು CHC ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ

    - ಈ CHC ಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು.  
     

  • 13:58 PM

    Kalyana Karnataka Budget 2023 LIVE: 1696 ಕೋಟಿ ವೆಚ್ಚದಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿ ರಸ್ತೆ

    - ಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಅನುದಾನ

    - ರಾಯಚೂರಿನ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ ಮಾದರಿಯ ರಸ್ತೆ ನಿರ್ಮಾಣ

    - 1696 ಕೋಟಿ ವೆಚ್ಚದಲ್ಲಿ 78 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಅನುದಾನ

    - 4,083 ಕೋಟಿ ವೆಚ್ಚದಲ್ಲಿ ಅಂತರ್ ಜಿಲ್ಲಾ ಸಂಪರ್ಕ ಕಲ್ಪಿಸಲು 2400 ಕಿ.ಮೀ ಜಿಲ್ಲಾ ರಸ್ತೆಗಳ ಅಭಿವೃದ್ಧಿ

  • 13:55 PM

    Karnataka Budget 2023 LIVE: ಆಸಿಡ್‍‍ ದಾಳಿ ಸಂತ್ರಸ್ತರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ 

    - ರಾಜ್ಯದಲ್ಲಿನ ಆಸಿಡ್‍‍ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಕ್ರಮ 

    - ಇವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ 

    - ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು

    - ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿ

    - ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ  

  • 13:51 PM

    ಕರ್ನಾಟಕ ಬಜೆಟ್ 2023 ಲೈವ್ : ಹಜ್ ಭವನದಲ್ಲಿ‌ ಅಲ್ಪಸಂಖ್ಯಾತ ಯುವಕರಿಗೆ ಐಎಎಸ್, ಕೆಎಎಸ್ ತರಬೇತಿ
     
    - ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು 4 ಕೋಟಿ ವೆಚ್ಚದಲ್ಲಿ ಪ್ರಾರಂಭ

    - ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಅನುದಾನ

    - ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100ಕೋಟಿ ಅನುದಾನ

    - ಹಜ್ ಭವನದಲ್ಲಿ‌ ಅಲ್ಪಸಂಖ್ಯಾತ ಯುವಕರಿಗೆ 10 ತಿಂಗಳ ಕಾಲ ವಸತಿ ಸಹಿತ ಐಎಎಸ್, ಕೆಎಎಸ್ ತರಬೇತಿಗಳನ್ನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಪ್ರಾರಂಭ

    - ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿ ಗೆ 25 ಕೋಟಿ ಅನುದಾನ
     

  • 13:48 PM

    Karnataka Budget 2023 LIVE: ಸ್ವಾವಲಂಬಿ ಸಾರಥಿ ಯೋಜನೆ ಮತ್ತೆ ಜಾರಿ

    - ಈ ಹಿಂದೆ ಜಾರಿಗೊಳಿಸಿದ್ದ ಸ್ವಾವಲಂಬಿ ಸಾರಥಿ ಯೋಜನೆ ಮರು ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ

    - ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಮಾಡಿರುವ ಯೋಜನೆ

    - ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇಕಡಾ 75 ರಷ್ಟು, ಗರಿಷ್ಠ ನಾಲ್ಕೂ ಲಕ್ಷ ರೂ. ಸಹಾಯಧನ 
     

  • 13:44 PM

    Karnataka Green Bangalore Budget 2023 Live: ಹಸಿರು ಬೆಂಗಳೂರಿಗಾಗಿ ಹಲವಾರು ಘೋಷಣೆ 

    - NGEF ನ105 ಎಕರೆ ಪ್ರದೇಶಲ್ಲಿ ಸಿಂಗಾಪುರ್ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣ

    - ಯಲಹಂಕ ಬಳಿಯ ಹಾರಕಬಂಡೆ ಕಾವಲ್‌ನಲ್ಲಿ 350 ಎಕರೆ ವಿಸ್ತೀರ್ಣದಲ್ಲ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಭಿವೃದ್ಧಿ

  • 13:39 PM

    Karnataka Mid Day meal Budget 2023 Live : ಬಿಸಿಯೂಟ ಯೋಜನೆಗೆ 280 ಕೋಟಿ 

    - ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆ

    - ವಾರದಲ್ಲಿ 2 ಬಾರಿ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲು ನಿರ್ಧಾರ

    - ಬಿಸಿಯೂಟ ಯೋಜನೆಗೆ 280 ಕೋಟಿ ಅನುದಾನ 

    - ಈ ಯೋಜನೆಯನ್ನು 9 ಮತ್ತು 10ನೇ ತರಗತಿಗೂ ವಿಸ್ತರಣೆ 

  • 13:35 PM

    Karnataka Education Budget 2023 Live : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ

    - ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಮುಂದುವರಿಸಲು ನಿರ್ಧಾರ

    - ಈ ಯೋಜನೆಗೆ 60 ಕೋಟಿ ಅನುದಾನ ಮೀಸಲು 

    -ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ 

    - ಐದು ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ  ಸ್ಥಾಪನೆ 

    - ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ 

    - ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ  ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ

  • 13:30 PM

    Karnataka Budget 2023 Live Department wise grant : ಇಲಾಖಾವಾರು ಅನುದಾನ ಹಂಚಿಕೆ ವಿವರ

    -  ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು

    - ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ 

    - ಇಂಧನ ಇಲಾಖೆ 22,000 ಕೋಟಿ

    - ನೀರಾವರಿ ಇಲಾಖೆ 19,000 ಕೋಟಿ  

    - ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,000 ಕೋಟಿ

    - ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ

    - ಕಂದಾಯ ಇಲಾಖೆ 16,000 ಕೋಟಿ

    - ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ

    - ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು

    - ಲೋಕೋಪಯೋಗಿ ಇಲಾಖೆ 10,000 ಕೋಟಿ 

    - ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ 

    - ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ  

  • 13:28 PM

    Karnataka Budget 2023 Live, R Ashok Statement : "ಅವರು ಮಂಡನೆ ಮಾಡಿದ್ದು ನಾಲಾಯಕ್ ಬಜೆಟ್"

    - ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್ ನಾಲಾಯಕ್ ಬಜೆಟ್ 

    - ಸುಳ್ಳು ಮೋಸ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದು ಮಾತ್ರ ಬಜೆಟ್ ಪುಸ್ತಕದಲ್ಲಿದೆ 

    - ಘೋಷಣೆ ಮಾಡಿದ ಯೋಜನೆಗಳಿಗೆ ಬಜೆಟ್ ನಲ್ಲಿ ಅನುದಾನ ಇಟ್ಟಿಲ್ಲ 

    - ಸಿದ್ದರಾಮಯ್ಯ ಮಂಡಿಸಿದ ಪೂರ್ಣ ಬಜೆಟ್ ನಲ್ಲಿ ಕೇಂದ್ರ ಸರ್ಕಾರ‌ ಹಾಗೂ ಪ್ರಧಾನ ಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ 

    - ಮಾಜಿ ಸಚಿವ ಆರ್. ಅಶೋಕ್ ಹೇಳಿಕೆ 

  • 13:25 PM

    Karnataka women and children Budget 2023 Live : ಮಹಿಳಾ ಉದ್ಯಮಿಗಳಿಗೆ ಸಾಲದ ಮಿತಿ ಹೆಚ್ಚಳ 

    - ವಿಶೇಷಚೇತನರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢತೆಯನ್ನು ಒದಗಿಸಲು ಕ್ರಮ

    - ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಒದಗಿಸಲಾಗುವುದು

    - ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ 

    - ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿ 2 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಳ 
     

  • 13:21 PM

    Karnataka women and children Budget 2023 Live : ಕುಟುಂಬದ ಯಜಮಾನಿಗೆ 2000 ರೂ.ಗಳ ನೆರವು

    - ಸಂವಿಧಾನದ ಮುಂದೆ ಎಲ್ಲರೂ ಸಮಾನರು, ಗಂಡು-ಹೆಣ್ಣು, ಮೇಲು-ಕೀಳು ಎಂಬ ತಾರತಮ್ಯ ಸಮಾಜದಲ್ಲಿ ಹಾಸುಹೊಕ್ಕಾಗಿ ಬೆಳೆದಿರುವುದು ಸುಳ್ಳಲ್ಲ

    - ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಈ ತಾರತಮ್ಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಕುಟುಂಬದ ಯಜಮಾನಿಗೆ 2000 ರೂ.ಗಳ ನೆರವು

    - ನೇರ ನಗದು ವರ್ಗಾವಣೆ ಮೂಲಕ ನೀಡಿ ನಮ್ಮ ಸರ್ಕಾರ ಮಹಿಳೆಯರನ್ನು ನಿಜವಾದ ಅರ್ಥದಲ್ಲಿ ʻಗೃಹಲಕ್ಷ್ಮಿʼಯಾಗಿಸಿದೆ

    - ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರೂ ಸಹ ಈ ಯೋಜನೆಯ ವ್ಯಾಪ್ತಿಗೆ ಸೇರುತ್ತಾರೆ
     

  • 13:18 PM

    Karnataka Higher Education Budget 2023 Live :ವೃತ್ತಿ ಚೈತನ್ಯ ಯೋಜನೆ

    - ವೃತ್ತಿ ಚೈತನ್ಯ ಯೋಜನೆಯಡಿ ಇಲಾಖೆಯ ಸುಮಾರು 7,800 ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಕಾರ್ಯಕ್ರಮ

    - ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ತರಬೇತಿ ಕಾರ್ಯಕ್ರಮ ಆಯೋಜನೆ 

    - ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ Ph.D. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆ

    - ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ Ph.D. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸೆಲಿಂಗ್ 

    - ಬೆಂಗಳೂರಿನ ಎಸ್‌.ಕೆ.ಎಸ್‌.ಜೆ.ಟಿ.ಐ ಎಂಜಿನಿಯರಿಂಗ್‌ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ Technical Textile ಅಭಿಯಾನ ಮತ್ತು ಪಿಎಂ-ಮಿತ್ರ ಯೋಜನೆಗಳಡಿ Smart and Technical Textile Centre ಆಗಿ ಉನ್ನತೀಕರಣ 

    - ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್‌ ಕೌನ್ಸಿಲ್‌ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಆಂಗ್ಲ ತರಗತಿ ಪ್ರಾರಂಭ

    - ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗಲು ರೆಫರೆನ್ಸ್‌ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ
     

  • 13:14 PM

    Karnataka Higher Education Budget 2023 Live : ಏಕ ಶಿಷ್ಯ ವೇತನ ಕಾರ್ಯಕ್ರಮ

    - ಉನ್ನತ ಶಿಕ್ಷಣ ಇಲಾಖೆಯಡಿ ಎಲ್ಲಾ ಶಿಷ್ಯ ವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯ ವೇತನ ಕಾರ್ಯಕ್ರಮದಡಿ ನಿರ್ವಹಿಸಲು ಕ್ರಮ

    - ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು (Good Governance Indicators) ರಚನೆ

    - ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ 

  • 13:11 PM

    Karnataka Budget 2023 Live, Puneeth Rajkumar: ಪುನೀತ್ ರಾಜ್‌ಕುಮಾರ್‌ ಹೆಸರಲ್ಲಿ ಹೃದ್ರೋಗ ಆಸ್ಪತ್ರೆ

    - ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಹೃದ್ರೋಗ ಆಸ್ಪತ್ರೆ

    - ಹಠಾತ್‌ ಹೃದಯ ಸಂಬಂಧ ಸಾವುಗಳನ್ನು ತಡೆಗಟ್ಟಲು ಯೋಜನೆ

    - ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಅಥವಾ Automated External Defibrillator ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ 

  • 13:07 PM

    Karnataka Budget 2023 Live: ಆನ್ ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ

    - ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ

    - ಗ್ರಾಮ ಪಂಚಾಯಿತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 ನಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ 

    - ಇದುವರೆಗೆ ಉಪ ನೊಂದಣಿ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿ ಮಾಡಲಾಗುತ್ತಿತ್ತು. 
     

  • 13:03 PM

    Karnataka Education Budget 2023 Live: 'ಮರುಸಿಂಚನ' ಎಂಬ ಹೊಸ ಯೋಜನೆ 

    - ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮ

    - 'ಮರುಸಿಂಚನ' ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ಯೋಜನೆ 

  • 13:01 PM

    Karnataka Education Budget 2023 Live: ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? 

    - ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ ದಿಂದ 45,000 ರೂ. ಗಳವರೆಗೆ ಹೆಚ್ಚಳ

    - 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆ 153 ಕೋಟಿ ರೂ. ಅನುದಾನ  

    - ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. 

    - ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ. ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.

  • 12:53 PM

    Karnataka Budget 2023 Live: ಎಪಿಎಂಸಿ ಕಾಯಿದೆ ವಾಪಸ್ 

    - ಎಪಿಎಂಸಿ ಕಾಯಿದೆ ವಾಪಸ್ ತೆಗೆದುಕೊಳ್ಳುವುದಾಗಿ ಸಿಎಂ ಘೋಷಣೆ 

    - ಸಿಎಂ ಘೋಷಣೆ ಮಾಡ್ತಿದ್ದಂತೆ ಮೇಜು ತಟ್ಟಿದ ಆಡಳಿತ ಪಕ್ಷದ ಸದಸ್ಯರು

    - ಮೇಜು ತಟ್ಟಿ ಸರ್ಕಾರದ‌ ನಿರ್ಧಾರ ಸ್ವಾಗತಿಸಿದ ಆಡಳಿತ ಪಕ್ಷದ ಸದಸ್ಯರು 

  • 12:50 PM

    Karnataka Budget 2023 Shakti Scheme : ಶಕ್ತಿ ಯೋಜನೆಗೆ ಅನುದಾನ 

    - ಶಕ್ತಿ ಯೋಜನೆಗೆ ವಾರ್ಷಿಕ 4 ಸಾವಿರ ಕೋಟಿ

    - ಗೃಹಜ್ಯೋತಿ ಯೋಜನೆಗೆ 13,910 ಕೋಟಿ ಅನುದಾನ 

  • 12:47 PM

    Karnataka Budget 2023 Anugraha scheme : ಮತ್ತೊಮ್ಮೆ ಅನುಗ್ರಹ ಯೋಜನೆ ಜಾರಿ

    - ಅನುಗ್ರಹ ಯೋಜನೆಯನ್ನು ಮರುಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ

    - ಕುರಿ ಮತ್ತು ಮೇಕೆಗಳು ಮೃತಪಟ್ಟರೆ 5000 ರೂ ಪರಿಹಾರ

    - ಹಸು, ಎಮ್ಮೆ, ಎತ್ತುಗಳಿಗೆ 10000 ರೂ ಪರಿಹಾರ  

    - ಹಿಂದಿನ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ್ದ ಅನುಗ್ರಹ ಯೋಜನೆ

  • 12:44 PM

    Karnataka Budget 2023 Health sector Live: ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ

    - ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ

    - ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ

    - ಮೈಸೂರು ಮತ್ತು ಕಲಬುರಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್‌ ಸೆಂಟರ್ 

    - ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ

    - ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ 

  • 12:41 PM

    Brand Bengaluru Budget 2023 : ಬೆಂಗಳೂರಿಗೆ ಬಂಪರ್ ಕೊಡುಗೆ

    - ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಣೆ

    - ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆಗೆ ಮೀಸಲು

    - ರಾಜಕಾಲುವೆ ತೆರವು & ದುರಸ್ತಿಗೆ ಅನುದಾನಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ 

    - ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ ನೀಡಲು 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.
     

  • 12:37 PM

    Karnataka Budget 2023 Ettinahole Project : ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 

    - ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ನಿರ್ಧಾರ

    - 19 ಕೆರೆ ತುಂಬಿಸು ಯೋಜನೆಗೆ ಬರೋಬ್ಬರಿ 770 ಕೋಟಿ ರೂಪಾಯಿ ಮೀಸಲು

    - ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ

    - ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಅನುದಾನ

    - ಮೇಕೆದಾಟು ಯೋಜನೆಯ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ 

  • 12:34 PM

    ಕರ್ನಾಟಕ ಬಜೆಟ್ 2023 ಲೈವ್:  ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ ಹೆಚ್ಚಳ 

    - ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ 

    - ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿ 10 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಳ

    - ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ 

  • 12:32 PM

    2023 - 24 ನೇ ಸಾಲಿನ ರಾಜ್ಯ ಬಜೆಟ್‌ ಲೈವ್: ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. 

    - ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. 

    - ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ್ಯಾಂಡಿಗ್‌ಗೆ  10 ಕೋಟಿ ರೂ. 

    - ಕಿರು ಆಹಾರ ಸಂಸ್ಕರಣಾ ಉದ್ದಿಮಿದಾರರಿಗೆ 5 ಕೋಟಿ ರೂ.

  • 12:28 PM

    ಕರ್ನಾಟಕ ಬಜೆಟ್ ಲೈವ್: ಐದು ಗ್ಯಾರಂಟಿ ಯೋಜನೆಗಳಿಗೆ ಸುಮಾರು 52,000 ಕೋಟಿ  

    - ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ. 

    - ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು. 

    - ಈ ಯೋಜನೆಗಳು ಅರ್ಹರಿಗೆ ನೇರವಾಗಿ ತಲುಪುವುದರಿಂದ ಹಾಗೂ ಬವಣೆಗಳ ಭಾರದಿಂದ ಏದುಸಿರು ಬಿಡುತ್ತಿರುವ ಬಡವರ ಬದುಕಿನಲ್ಲಿ ಪ್ರಾಣವಾಯುವಿನಂತೆ ಕೆಲಸ ಮಾಡುವುದೆಂಬ ಆಶಯದೊಂದಿಗೆ ಇವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

  • 12:25 PM

    Karnataka Budget 2023 LIVE : ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ 

    - ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ 

    - ನಮ್ಮ ಮೆಟ್ರೋಗೆ 30,000 ಕೋಟಿ 

    - ಕೃಷಿ ಉದ್ಯಮ ಉತ್ತೇಜನಕ್ಕೆ ನವೋದ್ಯಮ ಯೋಜನೆಗೆ 10 ಕೋಟಿ 

    - ಕೃಷಿ ಭಾಗ್ಯ ಯೋಜನೆಗೆ ಮನ್ರೇಗಾ ಅಡಿಯಲ್ಲಿ 100 ಕೋಟಿ 

    - ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ 

    - ರೈತರಿಗೆ 3 ಲಕ್ಷದಿಂದ 5 ಲಕ್ಷದ ವರೆಗೆ ಅಲ್ಪಾವಧಿ ಸಾಲ 

  • 12:21 PM

    2023 - 24 ನೇ ಸಾಲಿನ ರಾಜ್ಯ ಬಜೆಟ್‌ ಲೈವ್:  ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದೇವೆ 

    - ಜನರ ಕನಸಿಗೆ ರೆಕ್ಕೆ ಮೂಡಿಸುವ ಕೆಲಸ ಮಾಡುತ್ತೇವೆ

    - ಆಗಸ್ಟ್‌ನಲ್ಲಿ ಗೃಹ ಜ್ಯೋತಿ ಯೋಜನೆ ಜಾರಿ 

    - ಗೃಹ ಲಕ್ಷ್ಮಿ ಹಾಗೂ ಗೃಹ ಜ್ಯೋತಿ ಬೆಲೆ ಏರಿಕೆಯಿಂದ ಕಂಗಾಲದ ಜನರಿಗೆ ನಿರಾಳತೆ ತಂದುಕೊಡುತ್ತವೆ

    - ಯುವ ನಿಧಿ ಯುವಕರ ಆತ್ಮವಿಶ್ವಾಸ ಹೆಚ್ಚಿಸುತ್ತೆ 

  • 12:18 PM

    Karnataka Budget 2023 LIVE : 2023 - 24 ನೇ ಸಾಲಿನ ರಾಜ್ಯ ಬಜೆಟ್‌ 

    - 3 ಲಕ್ಷ 27 ಸಾವಿರ ಕೋಟಿ ಗಾತ್ರದ ಬಜೆಟ್‌ 

    - ಅಬಕಾರಿ ತೆರಿಗೆ ಶೇಕಡಾ 20 ರಷ್ಟು ಹೆಚ್ಚಳ

    - ಬಿಯರ್‌ ಮೇಲಿನ ಅಬಕಾರಿ ಸುಂಕ ಶೇಕಡಾ 10 ರಷ್ಟು ಹೆಚ್ಚಳ

  • 12:17 PM

    ಕರ್ನಾಟಕ ಬಜೆಟ್ ಲೈವ್: ಪರಿಸರ ರಕ್ಷಣೆಗೆ ಆದ್ಯತೆ

    - ಪರಿಸರ ರಕ್ಷಣೆಗೆ ಆದ್ಯತೆ

    - ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೇವೆ

  • 12:13 PM

    Karnataka Budget 2023 LIVE : 14 ನೇ ಬಾರಿ ಬಜೆಟ್‌ ಮಂಡಿಸುತ್ತಿರುವ ಸಿದ್ದರಾಮಯ್ಯ

    • ಸಿಎಂ ಸಿದ್ದರಾಮಯ್ಯ 2023-24 ರ ಆಯವ್ಯಯ ಮಂಡನೆ ಮಾಡುತ್ತಿದ್ದಾರೆ. 
    • ಅಭಿವೃದ್ಧಿ, ಸಾಮಾಜಿಕ ನ್ಯಾಯ, ಸಾರ್ವಜನಿಕ ಸೇವೆ, ಆರ್ಥಿಕ ಅಭಿವೃದ್ಧಿ, ಮೂಲಭೂತ ಸೌಕರ್ಯ ಅಭಿವೃದ್ಧಿ ನಮ್ಮ ಸರ್ಕಾರದ ಧೇಯೋದ್ದೇಶ ; ಸಿಎಂ
  • 11:50 AM

    Karnataka Budget 2023 LIVE Updates: ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ; ಸಿಎಂ ಟ್ವೀಟ್

    ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. 

     

     

  • 11:24 AM

    Karnataka Budget 2023 LIVE Updates: ಬಜೆಟ್‌ ಮಂಡನೆಗೆ ಕ್ಷಣಗಣನೆ 

    ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದರು. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಮುಖ್ಯಮಂತ್ರಿಯಾಗಿ ಇದು ಅವರ ಏಳನೇ ಬಜೆಟ್ ಆಗಿದೆ.

  • 11:16 AM

    Karnataka Budget 2023 LIVE Updates: "ಎಲ್ಲಾ ಐದು ಖಾತರಿಗಳನ್ನು ಜಾರಿಗೊಳಿಸಲಾಗುವುದು"

    ನಾವು ಈಗಾಗಲೇ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಜಾರಿಗೆ ತರಲು ಪ್ರಾರಂಭಿಸಿದ್ದೇವೆ. ನಾವು ಅದನ್ನು ಮಾಡುತ್ತೇವೆ. ಎಲ್ಲಾ ಐದು ಖಾತರಿಗಳನ್ನು ಜಾರಿಗೊಳಿಸಲಾಗುವುದು. ಈ ಬಜೆಟ್‌ನ ಬಹುದೊಡ್ಡ ನಿರೀಕ್ಷೆಯಾಗಿದ್ದು, ಎಲ್ಲಾ ಐದು ಭರವಸೆಗಳನ್ನು ಜಾರಿಗೊಳಿಸುತ್ತೇವೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

  • 10:39 AM

    ಕರ್ನಾಟಕ ಬಜೆಟ್ ಲೈವ್: 'ಬಜೆಟ್ ನಂತರ ಕರ್ನಾಟಕ ಜನರು ಸಂತೋಷವಾಗುತ್ತಾರೆ' 

    ಜನರು ನಿರೀಕ್ಷೆಗಳನ್ನು ಹೊಂದಿರುವುದು ಸಹಜ. ಅವರಿಗೂ ನಮ್ಮ ಮೇಲೆ ಅಪಾರ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಮತ್ತು ದೇಶದಲ್ಲಿ ತನ್ನ ವಿಶ್ವಾಸಾರ್ಹತೆಯನ್ನು ನಿರ್ಮಿಸಿದೆ. ಬಜೆಟ್‌ನ ನಂತರ ಜನರು ಸಂತೋಷವಾಗಿರುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ರಾಜ್ಯ ಸಚಿವ ಎಚ್‌ಕೆ ಪಾಟೀಲ್ ಹೇಳಿದರು.

  • 10:18 AM

    Karnataka Budget 2023 LIVE: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ  

    ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಭಾಗಿಯಾಗಿದ್ದಾರೆ.

  • 10:07 AM

    ಕರ್ನಾಟಕ ಬಜೆಟ್ 2023 ಲೈವ್: ಇಂದು ಮಧ್ಯಾಹ್ನ 12 ಗಂಟೆಗೆ ಸಿದ್ದರಾಮಯ್ಯ ಬಜೆಟ್ ಮಂಡನೆ

    ಕರ್ನಾಟಕ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ 12 ಗಂಟೆಗೆ 2023-24ನೇ ಸಾಲಿನ ಎರಡನೇ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. 

  • 09:39 AM

    ಕರ್ನಾಟಕ ಬಜೆಟ್ 2023 ಲೈವ್: ನಾಗರಿಕರಿಗೆ ಹೊರೆಯಾಗದಂತೆ ಬಜೆಟ್‌ ಮಂಡಿಸಲು ಬೊಮ್ಮಾಯಿ ಮನವಿ

    ಇಂದು ಮಂಡನೆಯಾಗಲಿರುವ 2023-24ನೇ ಸಾಲಿನ ಎರಡನೇ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಸಾಲವನ್ನು ಹೆಚ್ಚಿಸಿ ನಾಗರಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. "ಗ್ಯಾರಂಟಿಗಳಿಗಾಗಿ ನಿಮಗೆ 20,000-25,000 ಕೋಟಿ ರೂ.ಗಿಂತ ಹೆಚ್ಚು ಅಗತ್ಯವಿರುವುದಿಲ್ಲ. ನೀವು ಹೆಚ್ಚು ಸಾಲ ಮಾಡಬೇಕಾಗಿಲ್ಲ. ನಾನು ಹೆಚ್ಚುವರಿ ಬಜೆಟ್ ಮಂಡಿಸಿದಾಗ, ನಾನು ವಿತ್ತೀಯ ಕೊರತೆಯನ್ನು ಜಿಎಸ್‌ಡಿಪಿಯ 2.7% ನಲ್ಲಿ, 3% ಮಾರ್ಕ್‌ನೊಳಗೆ ಇಟ್ಟುಕೊಂಡಿದ್ದೇನೆ. ರಾಜ್ಯದ ಸಾಲವನ್ನು ಹೆಚ್ಚಿಸಿ ನಾಗರಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು" ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ. 
     

  • 09:27 AM

    Karnataka Budget 2023 LIVE: ಐದು ಚುನಾವಣಾ ಪೂರ್ವ ಖಾತ್ರಿ ಯೋಜನೆಗಳಿಗೆ ಅನುದಾನ 

    ಸಿದ್ದರಾಮಯ್ಯ ಸರ್ಕಾರವು ತನ್ನ ಐದು ಖಾತರಿ ಯೋಜನೆಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ ಮತ್ತು 'ಶಕ್ತಿ'ಗೆ ಬಜೆಟ್ ನಿಬಂಧನೆಗಳನ್ನು ಮಾಡಲು ನಿರ್ಧರಿಸಿದೆ.

Trending News