Karnataka Budget 2024 Live Updates: ಸಿಎಂ ಸಿದ್ದರಾಮಯ್ಯರ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

Karnataka Budget 2024: ಕೆಲವೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯನವರು ಬಜೆಟ್​ ಮಂಡಿಸಲಿದ್ದಾರೆ. ಕಾವೇರಿ ನಿವಾಸದಲ್ಲಿ ಅಧಿಕಾರಿಗಳು ಸಿಎಂಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು.

Written by - Puttaraj K Alur | Last Updated : Feb 16, 2024, 01:28 PM IST
  • ಇಂದು ಸಿಎಂ ಸಿದ್ದರಾಮಯ್ಯನವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಲಿದ್ದಾರೆ.
Karnataka Budget 2024 Live Updates: ಸಿಎಂ ಸಿದ್ದರಾಮಯ್ಯರ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..?
Live Blog

Karnataka Budget 2024 Live Updates: ಇಂದು ಸಿಎಂ ಸಿದ್ದರಾಮಯ್ಯನವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 15ನೇ ಬಜೆಟ್ ಇದಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳು ಹೆಚ್ಚಾಗಿವೆ. ನಾವು ನಿಮಗಾಗಿ ಕರ್ನಾಟಕ ಬಜೆಟ್‌ನ ಲೈವ್‌ ಅಪ್‌ಡೇಟ್ಸ್‌ಗಳನ್ನು ಇಲ್ಲಿ ನೀಡಲಿದ್ದೇವೆ.​​​ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

16 February, 2024

  • 13:28 PM

    ಕನ್ನಡ ಭಾಷಾಂತರಕ್ಕೆ ʼಕನ್ನಡ ಕಸ್ತೂರಿʼ: ಕನ್ನಡ ಭಾಷಾಂತರಕ್ಕೆ ನೂತನ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ತಿಳಿಸಿದ್ದಾರೆ. ʼಕನ್ನಡ ಕಸ್ತೂರಿʼ ಎಂಬ ನೂತನ ತಂತ್ರಾಂಶ ಅಭಿವೃದ್ಧಿ ಮಾಡಲಾಗುವುದು ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ. 

  • 13:26 PM

    ಬೆಂಗಳೂರಿನ 4 ಸ್ಥಳಗಳಲ್ಲಿ ಹೈಟೆಕ್​ ಕ್ರೀಡಾ ಸಂಕೀರ್ಣ: ಸಿಲಿಕಾನ್‌ ಸಿಟಿ ಬೆಂಗಳೂರಿನ 4 ಪ್ರಮುಖ ಸ್ಥಳಗಳಲ್ಲಿ ಹೈಟೆಕ್​ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಕ್ರೀಡಾನಗರ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. 70 ಎಕರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾನಗರ ಸ್ಥಾಪಿಸಲಾಗುವುದು. ರಾಜ್ಯದ 14 ವರ್ಷದ ಕ್ರೀಡಾಪಟುಗಳಿಗೆ ಮಿನಿ ಒಲಿಂಪಿಕ್ಸ್ ಆಯೋಜನೆ. ರಾಜ್ಯದ ಕ್ರೀಡಾಪಟುಗಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. 

  • 13:22 PM

    ʼಅನ್ನ ಸುವಿಧಾ ಯೋಜನೆʼ ಘೋಷಣೆ: 80 ವರ್ಷ ಮೇಲ್ಪಟ್ಟ ಹಿರಿಯರಿಗಾಗಿ ʼಅನ್ನ ಸುವಿಧಾ ಯೋಜನೆʼಯನ್ನು ಸಿಎಂ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ವೃದ್ಧರ ಮನೆ ಬಾಗಿಲಿಗೆ ಆಹಾರ ಧಾನ್ಯ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಇದಷ್ಟೇ ಅಲ್ಲದೇ 10 ಜಿಲ್ಲೆಗಳಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ವಸತಿ ಸಮುಚ್ಚಯ ನಿರ್ಮಾಣ. ತಾತ್ಕಾಲಿಕ ವಸತಿ ಸಮುಚ್ಚಯಕ್ಕಾಗಿ 100 ಕೋಟಿ ರೂ. ಅನುದಾನ. ಕೊಳಗೇರಿ ನಿವಾಸಿಗಳಿಗೆ ಶೀಘ್ರದಲ್ಲೇ 48,796 ಮನೆಗಳ ಹಸ್ತಾಂತರ ಮತ್ತು ಕಾರ್ಮಿಕರಿಗೆ ESI ಯೋಜನೆಯಡಿ ಸೂಪರ್​ಸ್ಪೆಷಾಲಿಟಿ ಸೇವೆಗೆ 313 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
     

  • 12:52 PM

    ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..?: ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕ ಮತ್ತು ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ಕರೆಂಟ್, ನಿರಂತರ ನೀರಿನ ಸೌಲಭ್ಯ ಒದಗಿಸಲಾಗುವುದು. ಉಚಿತ ವಿದ್ಯುತ್‌ಗೆ 25 ಕೋಟಿ ರೂ. ಮೀಸಲಿಡಲಾಗುವುದು. ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲಿಡಲಾಗುವುದು. ರಾಜ್ಯದ 20 ಸಾವಿರ ಸೈನ್ಸ್‌ ವಿದ್ಯಾರ್ಥಿಗಳಿಗೆ NEET, JEE, CET ತರಬೇತಿಗೆ 10 ಕೋಟಿ ರೂ. ಅನುದಾನ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂ. ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.
     

  • 12:44 PM

    ಬಿಜೆಪಿ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯನವರು ಮಂಡಿಸುತ್ತಿರುವ ಕರ್ನಾಟಕ ಬಜೆಟ್‌ ವಿರೋಧಿಸಿ ಬಿಜೆಪಿ ಶಾಸಕರು ಶುಕ್ರವಾರ ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು. ʼಸುಳ್ಳು ರಾಮಯ್ಯನ ಬೋಗಸ್‌ ಬಜೆಟ್‌ʼ, ʼಏನಿಲ್ಲ ಏನಿಲ್ಲ ಬಜೆಟ್‌ನಲ್ಲಿ ಏನಿಲ್ಲ ಹೇಳುವುದೆಲ್ಲ ನಿಜವಲ್ಲʼ, ʼರೈತ ವಿರೋಧಿ ಸಿದ್ದರಾಮಯ್ಯ ಕೃಷಿಗೆ ಹಾಕಿದ್ರು ಪಂಗನಾಮʼ ಎಂಬ ಘೋಷಣೆಗಳುಳ್ಳ ಫ್ಲಕಾರ್ಡ್‌ಗಳನ್ನು ಹಿಡಿದುಕೊಂಡು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

  • 12:42 PM

    ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ: ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂ. ಮೀಸಲಿಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ದಾರೆ.

  • 12:40 PM

    ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಅಂಗನವಾಡಿ ಕಾರ್ಯಕರ್ತರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ಫೋನ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ತಿಳಿಸಿದ್ದಾರೆ. 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡಗಳ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ.

  • 12:39 PM

    1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ: ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆಗೆ 4 ಕೇಂದ್ರಗಳನ್ನು ಆರಂಭಿಸಲಾಗುವುದು. 4 ಅನುಪಾಲನಾ ಕೇಂದ್ರಗಳ ಸ್ಥಾಪನೆಗೆ 2 ಕೋಟಿ ರೂ. ಅನುದಾನ ಒದಗಿಸಲಾಗುವುದು. 1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ತಿಳಿಸಿದ್ದಾರೆ.
     

  • 11:43 AM

    ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ.: ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಒದಗಿಸಲಾಗುವುದು. ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ನೀಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. 
     

  • 11:42 AM

    CET ತರಬೇತಿಗೆ 10 ಕೋಟಿ ರೂ.: ರಾಜ್ಯದ 20 ಸಾವಿರ ಸೈನ್ಸ್​ ವಿದ್ಯಾರ್ಥಿಗಳಿಗೆ NEET, JEE, CET ತರಬೇತಿಗೆ 10 ಕೋಟಿ ರೂ. ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.

  • 11:39 AM

    ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್: ಸಿಎಂ ಸಿದ್ದರಾಮಯ್ಯನವರು ಬಜೆಟ್​​ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ 3 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಿಸಲು ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಘೋಷಿಸಿದ್ದಾರೆ. ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

  • 11:39 AM

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಸಿಎಂ ಸಿದ್ದರಾಮಯ್ಯನವರು ತಮ್ಮ ಬಜೆಟ್‌ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಿಸಿದ್ದಾರೆ. ಇದರಿಂದ ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾದಂತಾಗಿದೆ.

  • 11:37 AM

    ಬಿಜೆಪಿ ನಾಯಕರ ಸಭಾತ್ಯಾಗ: ಸಿಎಂ ಸಿದ್ದಾಮಯ್ಯನವರು ಮಂಡಿಸುತ್ತಿರುವ ಕರ್ನಾಟಕ ಬಜೆಟ್‌ಗೆ ವಿಪಕ್ಷ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಬಹಿಷ್ಕಾರ ಹಾಕಿ ಹೊರನಡೆದಿದ್ದಾರೆ. ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು, ‘ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ’ ಎಂದು ಕೂಗುತ್ತಾ ಸಭಾತ್ಯಾಗ ಮಾಡಿದ್ದಾರೆ. ವಿಧಾನಸಭೆಯ ಪ್ರವೇಶದ್ವಾರದ ಬಾಗಿಲಿಗೆ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

  • 11:35 AM

    ಹೈನುಗಾರರ ಉನ್ನತಿಗೆ ಆದ್ಯತೆ: ನಮ್ಮ ಸರ್ಕಾರವು ಹೈನುಗಾರರ ಉನ್ನತಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ತಿಳಿಸಿದ್ದಾರೆ. 

  • 11:33 AM

    ತೋಟಗಾರಿಕೆ ವಲಯದ ಏಳಿಗೆಗೆ ಒತ್ತು: ನಮ್ಮ ಸರ್ಕಾರವು ತೋಟಗಾರಿಕಾ ವಲಯದ ಏಳ್ಗೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ತಿಳಿಸಿದ್ದಾರೆ. 

  • 11:31 AM

    ವಿಜಯಪುರ ಜಿಲ್ಲೆಯಲ್ಲಿ ತೋಟಗಾರಿಕೆ ಕಾಲೇಜು: ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆ ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಏಷ್ಯಾದಲ್ಲಿಯೇ ಅತಿಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ 2ನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಅಂತಾ ಅವರು ತಿಳಿಸಿದ್ದಾರೆ. 

  • 11:27 AM

    ಅನ್ನದಾತರ ಅಭ್ಯುದಯಕ್ಕೆ ಸರ್ಕಾರದ ಆದ್ಯತೆ: ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟ್‌ಅನ್ನು ರಾಜ್ಯದ ಸಮಸ್ತ ಜನರಿಗೆ ಅರ್ಪಿಸುತ್ತಿದ್ದೇವೆ. ಅನ್ನದಾತರ ಅಭ್ಯುದಯ ನಮ್ಮ ಸರ್ಕಾರದ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ. 

  • 11:26 AM

    ರಾಜ್ಯದ 3 ಜಿಲ್ಲೆಗಳಲ್ಲಿ ಆಹಾರ ಪಾರ್ಕ್: ರಾಜ್ಯದ 3 ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್‌ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

  • 11:22 AM

    ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧಾರ: ಕರ್ನಾಟಕ ಬಜೆಟ್‌ನಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧಾರ ಕೈಗೊಳ್ಳಲಾಗಿದೆ. 73KM ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ PPP ಮಾದರಿಯಲ್ಲಿ RFP ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ BBMP, BMRCL, BWSSB, BDAನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು. 2025ರೊಳಗೆ 44KM ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಅಂತಾ ಸಿದ್ದರಾಮಯ್ಯ ಘೋಷಿಸಿದ್ದಾರೆ. 

  • 11:18 AM

    ಮದ್ಯದ ದರ ಮತ್ತೆ ಹೆಚ್ಚಳ; ಮದ್ಯಪ್ರಿಯರಿಗೆ ಸಿದ್ದರಾಮಯ್ಯ ಶಾಕ್!:‌ ಮದ್ಯದ ದವರನ್ನು ಮತ್ತೆ ಹೆಚ್ಚಿಸುವುದಾಗಿ ತಿಳಿಸಿದ ಸಿಎಂ ಸಿದ್ದರಾಮಯ್ಯನವರು ಮದ್ಯಪ್ರಿಯರಿಗೆ ದೊಡ್ಡ ಶಾಕ್‌ ನೀಡಿದ್ದಾರೆ. ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಅವರು ಬಜೆಟ್​​ನಲ್ಲಿ ಘೋಷಿಸಿದ್ದಾರೆ. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ. ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

  • 11:16 AM

    GST ಸಂಗ್ರಹದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: 2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ GST ತೆರಿಗೆ ಸಂಗ್ರಹದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗೆ 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14ರಷ್ಟು ಬೆಳವಣಿಗೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
     

  • 11:14 AM

    ಗ್ಯಾರಂಟಿ ಯೋಜನೆಗಳಿಂದ ಆದಾಯ ಹೆಚ್ಚಳ: ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹವೂ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

  • 11:13 AM

    ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್‌ ಅಲ್ಲ. ಐದೂ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಇಡೀ ಜಗತ್ತೇ ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಖುಷಿಯಾಗಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲವೆಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ವಿಪಕ್ಷದವರು ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

  • 11:08 AM

    ಯಾವ ಕ್ಷೇತ್ರಕ್ಕೆ ಎಷ್ಟು..?: ಸಿಎಂ ಸಿದ್ದರಾಮಯ್ಯನವರು ತಮ್ಮ ದಾಖಲೆಯ 15ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಪ್ರಸಕ್ತ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

    • ರಾಜ್ಯದ ಒಟ್ಟು ಬಜೆಟ್‌ ಗಾತ್ರ 3,71,383 ಕೋಟಿ 
    • ಕಂದಾಯ ಇಲಾಖೆಗೆ - 16,170 ಕೋಟಿ
    • ಆರೋಗ್ಯ ಇಲಾಖೆ - 15,145 ಕೋಟಿ
    • ಸಮಾಜ ಕಲ್ಯಾಣ ಇಲಾಖೆ - 13,334 ಕೋಟಿ
    • ಶಿಕ್ಷಣ ಇಲಾಖೆ - 44,422 ಕೋಟಿ
    • ಗ್ರಾಮೀಣಾಭಿವೃದ್ಧಿ-21,160 ಕೋಟಿ
    • ಇಂಧನ ಇಲಾಖೆ - 23,159 ಕೋಟಿ
    • ಮಹಿಳಾ ಮತ್ತು ಮಕ್ಕಳ ಕಲ್ಯಾಣ-35,407 ಕೋಟಿ
    • ಒಳಾಡಳಿತ ಸಾರಿಗೆ-19,777 ಕೋಟಿ
    • ನೀರಾವರಿ-19,179 ಕೋಟಿ
    • ನಗರಾಭಿವೃದ್ಧಿ -18,155 ಕೋಟಿ
    • ಲೋಕೋಪಯೋಗಿ-10,424 ಕೋಟಿ
    • ಆಹಾರ ಮತ್ತು ನಾಗರಿಕ ಪೂರೈಕೆ-9,963 ಕೋಟಿ
    • ಕೃಷಿ ತೋಟಗಾರಿಕೆ-6,688 ಕೋಟಿ
    • ಪಶುಸಂಗೋಪನೆ-3,307 ಕೋಟಿ
    • ಇತರೆ ಇಲಾಖೆ 12,493 ಕೋಟಿ
  • 10:48 AM

    "ಸಾಲ-ಸುಳ್ಳು” ಬಿಟ್ಟರೇ, ಬೇರೆನೂ ಇಲ್ಲ: ಸಿಎಂ ಸಿದ್ದರಾಮಯ್ಯನವರು ಮಂಡಿಸುತ್ತಿರುವ ಕರ್ನಾಟಕ ಬಜೆಟ್‌ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ಬಿಜೆಪಿ, ಏನು ಇರೋದಿಲ್ಲಾ, ಏನು ಇರೋದಿಲ್ಲಾ... ಬಜೆಟ್‌ನಲ್ಲಿ "ಸಾಲ-ಸುಳ್ಳು” ಬಿಟ್ಟರೇ, ಬೇರೆ ಏನು ಇರೋದಿಲ್ಲಾ...!!ʼವೆಂದು ಟೀಕಿಸಿದೆ.

  • 10:43 AM

    ಇದು ಬೋಗಸ್ ಬಜೆಟ್!: ಸಿಎಂ ಸಿದ್ದರಾಮಯ್ಯನವರು ಮಂಡಿಸುತ್ತಿರುವ ಕರ್ನಾಟಕ ಬಜೆಟ್‌ ಬಗ್ಗೆ ವಿಪಕ್ಷ ನಾಯಕ ಆರ್.ಆಶೋಕ್‌ ಪ್ರತಿಕ್ರಿಯಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇದು ಬೋಗಸ್ ಬಜೆಟ್, ಕಾಂಗ್ರೆಸ್‌ ಸರ್ಕಾರವು ಕಳಪೆ ಹಂತದಲ್ಲಿದೆ. ಇದು ಚುನಾವಣಾ ಬಜೆಟ್" ಎಂದು ಹೇಳುತ್ತಾರೆ.

  • 10:41 AM

    ಸಿದ್ದರಾಮಯ್ಯರ ಬಜೆಟ್‌ಗೆ ಬಿಜೆಪಿ ಅಡ್ಡಿ: ಸಿಎಂ ಸಿದ್ದರಾಮಯ್ಯನವರು ಮಂಡಿಸುತ್ತಿರುವ ಕರ್ನಾಟಕ ಬಜೆಟ್‌ಗೆ ಬಿಜೆಪಿ ನಾಯಕರು ಸದನದಲ್ಲಿ ಅಡ್ಡಿಪಡಿಸಿದ್ದಾರೆ. ಬಜೆಟ್‌ ವಿರೋಧಿಸಿ ಬಿಜೆಪಿ ನಾಯಕರು ಗಲಾಟೆ ಮಾಡಿದ್ದಾರೆ.  ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಬಿಜೆಟ್‌ಗೆ ವಿರೋಧ ವ್ಯಕ್ತಪಡಿಸಿದ್ದಾರೆ. 

  • 10:35 AM

    ನೀಡಿದ ಭರವಸೆಗಳಿಗೆ ನಾವು ಬದ್ಧರಾಗಿದ್ದೇವೆ: ಕರ್ನಾಟಕ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆಯವರು, ʼನಾವು ರಾಜ್ಯದ ಜನರಿಗೆ ನೀಡಿರುವ ಭರವಸೆಗಳಿಗೆ ಬದ್ಧರಾಗಿದ್ದೇವೆ. ನಮ್ಮ ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುತ್ತಿವೆ. ಸಿಎಂ ಸಿದ್ದರಾಮಯ್ಯನವರು ದಾಖಲೆಯ ಬಜೆಟ್‌ ಮಂಡಿಸುತ್ತಿದ್ದು, ಸರ್ವರಿಗೂ ಒಳಿತಾಗುವ ಬಜೆಟ್‌ ನಮ್ಮದಾಗಿರಲಿದೆʼ ಎಂದು ಹೇಳಿದ್ದಾರೆ. 
     

  • 10:33 AM

    ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಈ ಬಾರಿಯ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಆಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
     

  • 10:32 AM

    ರಾಜಸ್ವ ಕೊರತೆ: 2024-25ರಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ರಾಜ್ಯದ GSDPಯ ಶೇ.2.95ರಷ್ಟಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಯು 2024-25ರ ಅಂತ್ಯಕ್ಕೆ 6,65,095 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ.
     

  • 10:31 AM

    ಒಟ್ಟು ವೆಚ್ಚ: 38 ಕೋಟಿ ರೂ.ಗಳ ಋಣೇತರ ಸ್ವೀಕೃತಿ ಮತ್ತು 213 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2024-25ರ ಆಯವ್ಯಯದಲ್ಲಿ ಒಟ್ಟು 3.68.674 ಕೋಟಿ ರೂ.ಗಳ ಸ್ವೀಕೃತಿಯನ್ನು ಅಂದಾಜು ಮಾಡಲಾಗಿದೆ. 55.877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.
     

  • 10:27 AM

    ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರವು ಈ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತಿದೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ.

  • 10:25 AM

    ಆಗದು ಎಂದು ಕೈಕಟ್ಟಿ ಕುಳಿತರೆ...: ಸದನದಲ್ಲಿ ಸಿಎಂ ಸಿದ್ದರಾಮಯ್ಯನವರು ತಮ್ಮ 15ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ ಆರಂಭದಲ್ಲಿ ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜಕುಮಾರ್ ಅವರ ಹಾಡಿನ ಸಾಲನ್ನು ಉಲ್ಲೇಖಿಸಿದರು.

  • 10:23 AM

    ಸದನದಲ್ಲಿ ಪ್ಲಕಾರ್ಡ್ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ಶಾಸಕರು: ಸಿಎಂ ಸಿದ್ದರಾಮಯ್ಯನವರ ಬಜೆಟ್ ಮಂಡನೆ ವೇಳೆ ಸದನದಲ್ಲಿ ಪ್ಲಕಾರ್ಡ್ ಪ್ರದರ್ಶನಕ್ಕೆ ಬಿಜೆಪಿ ನಾಯಕರು ಮುಂದಾದ ಘಟನೆ ನಡೆದಿದೆ. ಆದರೆ ಪ್ಲಕಾರ್ಡ್​​ಗಳನ್ನು ಸದನದೊಳಗೆ ತೆಗೆದುಕೊಂಡು ಹೋಗಲು ಮಾರ್ಷಲ್​ಗಳು ಬಿಡಲಿಲ್ಲ. ಹೀಗಾಗಿ ಪೋಸ್ಟರ್ ಪ್ರದರ್ಶನಕ್ಕೆ ವಿಪಕ್ಷ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಶಾಸಕರು ಪೋಸ್ಟರ್‌ಗಳನ್ನು ತೆಗೆದುಕೊಂಡು ಆಗಮಿದ್ದು, ‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಎಂದು ಅದರಲ್ಲಿ ಬರೆಯಲಾಗಿದೆ.   

  • 10:20 AM

    ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ: ಸಂಪುಟ ಸಹೋದ್ಯೋಗಿಗಳಿಂದ ಬಜೆಟ್​​​ಗೆ ಅನುಮೋದನೆ ಪಡೆದುಕೊಂಡ ಸಿಎಂ ಸಿದ್ದರಾಮಯ್ಯನವರು ವಿಧಾನಸಭಾ ಕಲಾಪಕ್ಕೆ ಆಗಮಿಸಿದರು. ವಿಧಾನಸಭೆಯಲ್ಲಿ ಸಿದ್ದರಾಮಯ್ಯನವರು ಬಜೆಟ್‌ ಭಾಷಣ ಆರಂಭಿಸಿದ್ದು, 15ನೇ ಬಜೆಟ್ ಮಂಡಿಸುತ್ತಿದ್ದಾರೆ.

  • 10:19 AM

    ಬಜೆಟ್​​ಗೆ ಅನುಮೋದನೆ: ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಕರ್ನಾಟಕ ಬಜೆಟ್​​ಗೆ ಅನುಮೋದನೆ ಪಡೆದರು.  

  • 10:14 AM

    ಮದ್ಯದ ಮೇಲಿನ ಸುಂಕ ಹೆಚ್ಚಳ?: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆಗಳನ್ನು ನೀಡುವ ದೊಡ್ಡ ಸವಾಲು ಸಿಎಂ ಸಿದ್ದರಾಮಯ್ಯರ ಮುಂದಿದೆ. ಈ ಬಾರಿಯ ಬಜೆಟ್‌ನ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದೆ. ಬಜೆಟ್​ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಮದ್ಯ ಪ್ರಿಯರಿಗೆ ಕಾಂಗ್ರೆಸ್‌ ಸರ್ಕಾರ ಶಾಕ್ ನೀಡುತ್ತಾ ಅನ್ನೋ ಪ್ರಶ್ನೆ ಮೂಡಿದೆ.

  • 10:11 AM

    ದಾಖಲೆಯ ಬಜೆಟ್​ನಲ್ಲಿ ಏನಿರಲಿದೆ?: 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಕರ್ನಾಟಕ ಬಜೆಟ್​​ನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ. ಈ ಬಾರಿಯ ಬಜೆಟ್ ಗಾತ್ರವು ಸುಮಾರು 50 ಸಾವಿರ ಕೋಟಿ ರೂ.ನಷ್ಟು ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ. ಸಿದ್ದರಾಮಯ್ಯನವರು ಮಂಡಿಸುತ್ತಿರುವ ದಾಖಲೆಯ 15ನೇ ಬಜೆಟ್‌ನಲ್ಲಿ ಏನಿರಲಿದೆ? ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. 

  • 10:09 AM

    ಬಜೆಟ್ ಗಾತ್ರ, ಸಾಲದ ಪ್ರಮಾಣ ಹೆಚ್ಚಾಗುವ ಸಾಧ್ಯತೆ: ಕಳೆದ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ಇತ್ತು. ಈ ಬಾರಿ 3.50 ಲಕ್ಷ ಕೋಟಿ ರೂ. ಅಥವಾ 3.80 ಲಕ್ಷ ಕೋಟಿ ರೂ. ತಲುಪುವ ಸಾಧ್ಯತೆ ಇದೆ. ಕಳೆದ ಬಜೆಟ್‌ನಲ್ಲಿ ಸರ್ಕಾರ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗುವ ಸಾಧ್ಯತೆ ಇದೆ.

  • 10:06 AM

    Karnataka Budget 2024: ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯನವರು ಬಜೆಟ್‌ ಮಂಡಿಸಲಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯನವರು ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆದುಕೊಂಡರು. ಬೆಳಗ್ಗೆ ಸರಿಯಾಗಿ 10.15ಕ್ಕೆ ಸಿದ್ದರಾಮಯ್ಯನವರು ದಾಖಲೆಯ ೧೫ನೇ ಬಜೆಟ್‌ ಮಂಡಿಸಲಿದ್ದಾರೆ. 

Trending News