Live Union Budget 2024 Updates: ಹೊಸ ತೆರಿಗೆ ಪದ್ಧತಿಯಲ್ಲಿ ಮಹತ್ವದ ಬದಲಾವಣೆ
Union Budget Live Blog: ಪ್ರಧಾನಿ ಮೋದಿಯವರ 3ನೇ ಅವಧಿಯ ಮೊದಲ ಬಜೆಟ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಸತತ 7ನೇ ಬಜೆಟ್ ಇದಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ.
Union Budget 2024 Live Updates: ಸತತ 3ನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದ ಕೇಂದ್ರ ಬಜೆಟ್ ಮಂಡನೆ ಶುರುವಾಗಿದೆ. ಪ್ರಧಾನಿ ಮೋದಿಯವರ 3ನೇ ಅವಧಿಯ ಮೊದಲ ಬಜೆಟ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಸತತ 7ನೇ ಬಜೆಟ್ ಇದಾಗಿದೆ. ಬೆಳಗ್ಗೆ 11 ಗಂಟೆಗೆ ಸರಿಯಾಇ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಕೃಷಿ ಹಾಗೂ ರಕ್ಷಣಾ ಕ್ಷೇತ್ರ, ಷೇರುಪೇಟೆ ಹೂಡಿಕೆ ನಿಯಮಗಳ ಸುಧಾರಣೆ ಮತ್ತು ಆದಾಯ ತೆರಿಗೆ ವಿನಾಯ್ತಿ ಸೇರಿದಂತೆ ಹಲವು ನಿರೀಕ್ಷೆಗಳು ಈ ಬಾರಿಯ ಬಜೆಟ್ ಮೇಲಿತ್ತು. ಪ್ರಸಕ್ತ ವರ್ಷದ 2ನೇ ಬಜೆಟ್ ಇದಾಗಿದೆ. ಲೋಕಸಭಾ ಚುನಾವಣಾ ಹಿನ್ನೆಲೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದರು. ಇಂದು ಅವರು ಪೂರ್ಣ ಬಜೆಟ್ ಮಂಡಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
Latest Updates
Live Union Budget 2024 Updates: 100 MW ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರ
NTPC ಮತ್ತು BHEL ನಡುವಿನ ಜಂಟಿ ಉದ್ಯಮವು AUSC (ಅಡ್ವಾನ್ಸ್‌ಡ್ ಅಲ್ಟ್ರಾ ಸೂಪರ್‌ಕ್ರಿಟಿಕಲ್) ತಂತ್ರಜ್ಞಾನವನ್ನು ಬಳಸಿಕೊಂಡು 100 MW ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಿದೆ. ದೇಶದಲ್ಲಿ ಸಣ್ಣ ರಿಯಾಕ್ಟರ್‌ಗಳ ಸ್ಥಾಪನೆ, ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಪರಮಾಣು ಶಕ್ತಿಗಾಗಿ ಹೊಸ ತಂತ್ರಜ್ಞಾನಗಳ ಸಂಶೋಧನೆ & ಅಭಿವೃದ್ಧಿಗಾಗಿ ಭಾರತವು ಖಾಸಗಿ ವಲಯದೊಂದಿಗೆ ಪಾಲುದಾರಿಕೆ ಹೊಂದಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Live Union Budget 2024 Updates: ಹೊಸ ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸ ತೆರಿಗೆ ಪದ್ಧತಿಯಲ್ಲಿ ಬದಲಾವಣೆಗಳನ್ನು ಪ್ರಕಟಿಸಿದ್ದಾರೆ. ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50,000 ರೂ.ನಿಂದ 75,000 ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ ದರ ರಚನೆಯನ್ನು ಪರಿಷ್ಕರಿಸಲಾಗುವುದು
0-3 ಲಕ್ಷಕ್ಕೆ ಶೂನ್ಯ
3-7 ಲಕ್ಷಕ್ಕೆ 5%
7-10 ಲಕ್ಷಕ್ಕೆ 10%
10-12 ಲಕ್ಷಕ್ಕೆ 15%
12-15 ಲಕ್ಷಕ್ಕೆ 20%
15 ಮತ್ತು ಮೇಲ್ಪಟ್ಟು 30%ಹೊಸ ತೆರಿಗೆ ಪದ್ಧತಿಯಲ್ಲಿ ಸಂಬಳ ಪಡೆಯುವ ಉದ್ಯೋಗಿ ಆದಾಯ ತೆರಿಗೆಯಲ್ಲಿ 17,500 ರೂ.ವರೆಗೆ ಉಳಿಸುತ್ತಾರೆ
Live Union Budget 2024 Updates: ಸರ್ಕಾರದಿಂದ 1 ತಿಂಗಳ ವೇತನದ ಆಫರ್!
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸರ್ಕಾರದ ೯ ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರಡಿ ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ಬಂಪರ್ ಕೊಡುಗೆ ಸಿಗಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ 1 ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು. ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ೩ ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಆಗಿರುತ್ತದೆ. ಇಪಿಎಫ್ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆಯನ್ನು ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
Live Union Budget 2024 Updates: 3 ಕೋಟಿ ಮನೆಗಳ ನಿರ್ಮಾಣ ಗುರಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ʼಪಿಎಂ ಆವಾಸ್ ಯೋಜನೆʼಯಡಿ 3 ಕೋಟಿ ಮನೆಗಳ ನಿರ್ಮಾಣ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ. ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ವಿತ್ತ ಸಚಿವರು ಘೋಷಿಸಿದ್ದಾರೆ.
Live Union Budget 2024 Updates: 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಉಚಿತ ಸೌರ ವಿದ್ಯುತ್ ಯೋಜನೆ ಕುರಿತು ಮಾತನಾಡಿದ ಅವರು, ʼಪ್ರಧಾನಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಮೇಲ್ಛಾವಣಿಯ ಸೌರ ಫಲಕಗಳನ್ನು ಸ್ಥಾಪಿಸಲು ಪ್ರಾರಂಭಿಸಲಾಗಿದೆ. ಪ್ರತಿ ತಿಂಗಳು 1 ಕೋಟಿ ಮನೆಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಇದು ಅನುವು ಮಾಡಿಕೊಡುತ್ತದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.
Union Budget 2024 Live Updates: 21,400 ಕೋಟಿ ರೂ.ವೆಚ್ಚದ ಯೋಜನೆಗಳು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ʼಪಿರ್ಪೈಂಟಿಯಲ್ಲಿ ಹೊಸ 2400 ಮೆಗಾವ್ಯಾಟ್ ವಿದ್ಯುತ್ ಸ್ಥಾವರ ಸ್ಥಾಪನೆ ಸೇರಿದಂತೆ ವಿದ್ಯುತ್ ಯೋಜನೆಗಳನ್ನು 21,400 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸಲಾಗುವುದು. ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳಿಂದ ಬಾಹ್ಯ ಸಹಾಯಕ್ಕಾಗಿ ಬಿಹಾರ ಸರ್ಕಾರದ ವಿನಂತಿಗಳನ್ನು ತ್ವರಿತಗೊಳಿಸಲಾಗುವುದು. ಆಂಧ್ರಪ್ರದೇಶದ ಮರುಸಂಘಟನೆ ಕಾಯಿದೆಯಲ್ಲಿನ ಬದ್ಧತೆಗಳನ್ನು ಪೂರೈಸಲು ನಮ್ಮ ಸರ್ಕಾರವು ಪ್ರಯತ್ನಗಳನ್ನು ಮಾಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ, ಆಂಧ್ರಪ್ರದೇಶ ಮತ್ತು ಅದರ ರೈತರ ಜೀವನಾಡಿಯಾಗಿರುವ ಪೊಲಾವರಂ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಮತ್ತು ಹಣಕಾಸು ಒದಗಿಸಲು ನಮ್ಮ ಸರ್ಕಾರವು ಮುಂದಿನ ವರ್ಷಗಳಲ್ಲಿ ಹೆಚ್ಚುವರಿ ಮೊತ್ತದೊಂದಿಗೆ 15,000 ಕೋಟಿ ರೂ. ನೀಡಲಿದೆ ಎಂದು ಹೇಳಿದ್ದಾರೆ.
Union Budget 2024 Live Updates: 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಘೋಷಿಸಲು ನಮಗೆ ಸಂತೋಷವಾಗಿದೆ. ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ. ನೀಡಲಿದ್ದೇವೆ ಎಂದು ಹೇಳಿದ್ದಾರೆ.
Union Budget 2024 Live Updates: ಉನ್ನತ ಶಿಕ್ಷಣಕ್ಕೆ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಅವರು ಕೆಲವು ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. SC/ST/ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು. ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು ಎಂದು ಹೇಳಿದ್ದಾರೆ.
Union Budget 2024 Live Updates: 80 ಕೋಟಿ ಜನರಿಗೆ ಪ್ರಯೋಜನ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿದಂತೆ ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ನಾವು ಗಮನ ಕೇಂದ್ರೀಕರಿಸಿದ್ದೇವೆ. ರೈತರ ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದೇವೆ. ಈ ಮೂಲಕ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ʼಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆʼʼಯು 5 ವರ್ಷಗಳವರೆಗೆ ಕನಿಷ್ಠ 50% ಮಾರ್ಜಿನ್ ವೆಚ್ಚದಲ್ಲಿ 80 ಕೋಟಿ ಜನರಿಗೆ ಪ್ರಯೋಜನ ನೀಡಲಿದೆ ಅಂತಾ ಹೇಳಿದ್ದಾರೆ.
Union Budget 2024 Live Updates: ಕೃಷಿ ಕ್ಷೇತ್ರಕ್ಕೆ 1.5 ಲಕ್ಷ ಕೋಟಿ ರೂ. ಘೋಷಣೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಿಸಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Union Budget 2024 Live Updates: ನೈಸರ್ಗಿಕ ಕೃಷಿ ವ್ಯಾಪ್ತಿಗೆ 1 ಕೋಟಿ ರೈತರು!
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಇದೇ ವೇಳೆ ಅವರು ಘೋಷಿಸಿದ್ದಾರೆ. ನಮ್ಮ ಸರ್ಕಾರವು ಸಾಮಾಜಿಕ ನ್ಯಾಯ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿ ಈ ಬಜೆಟ್ ಮಂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Union Budget 2024 Live Updates: ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ದಿಗೆ 1.48 ಲಕ್ಷ ಕೋಟಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 1.48 ಲಕ್ಷ ಕೋಟಿ ರೂ. ಮೀಸಲು ಇಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ.
Union Budget 2024 Live Updates: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ಭಾರತದ ಆರ್ಥಿಕತೆಯು ಉತ್ತಮವಾಗಿ ವೃದ್ಧಿಯಾಗಿದೆ. ಹಣದುಬ್ಬರ ನಿಯಂತ್ರಣದಲ್ಲಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು 5 ವರ್ಷ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Union Budget 2024 Live Updates: ನಿರ್ಮಲಾ ಸೀತಾರಾಮನ್ಗೆ ಸಿಹಿ ಮೊಸರು!
ಕೇಂದ್ರ ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ಮೊಸರು ತಿನ್ನಿಸಿ ಶುಭ ಹಾರೈಸಿದ್ದಾರೆ.
Union Budget 2024 Live Updates: ಸಂಸತ್‌ಗೆ ರಾಹುಲ್ ಗಾಂಧಿ ಆಗಮನ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲು ಕ್ಷಣಗಣನೆ ಶುರುವಾಗಿದೆ. ಬಜೆಟ್ ಮಂಡನೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಂಸತ್ ಭವನಕ್ಕೆ ಆಗಮಿಸಿದರು.
Union Budget 2024 Live Updates: ಸಂಸತ್‌ಗೆ ಪ್ರಧಾನಿ ಮೋದಿ ಆಗಮನ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲು ಕ್ಷಣಗಣನೆ ಶುರುವಾಗಿದೆ. ಬಜೆಟ್ ಮಂಡನೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನಕ್ಕೆ ಆಗಮಿಸಿದರು.
Union Budget 2024 Live Updates: ಬಜೆಟ್‌ಗೆ ಅನುಮೋದನೆ
ಇನ್ನೂ ಕೆಲವೇ ಕ್ಷಣಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಸಂಸತ್ ಭವನದಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ ಪಡೆದುಕೊಂಡರು.
Union Budget 2024 Live Updates: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮನ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ ೧೧ ಗಂಟೆಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ ಭವನಕ್ಕೆ ಆಗಮಿಸಿದರು.
Union Budget 2024 Live Updates: ಗ್ಯಾಪ್‌ಅಪ್ ಆದ ಸೆನ್ಸೆಕ್ಸ್
ಕೇಂದ್ರ ಬಜೆಟ್ ಮೇಲಿನ ನಿರೀಕ್ಷೆಯ ಹಿನ್ನೆಲೆ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಮಂಗಳವಾರ ಗ್ಯಾಪ್‌ಅಪ್ ವಹಿವಾಟು ಆರಂಭಿಸಿದೆ. ಸೆನ್ಸೆಕ್ಸ್ 229.89 ಪಾಯಿಂಟ್‌ಗಳಷ್ಟು ಏರಿಕೆ ಕಂಡು 80,731.97ಗೆ ತಲುಪಿತ್ತು. ಸದ್ಯದ ಮಾಹಿತಿ ಪ್ರಕಾರ ಸೆನ್ಸೆಕ್ಸ್ ಹಾಗೂ ನಿಫ್ಟಿ ಕೊಂಚ ಕುಸಿತ ಕಂಡಿದ್ದು, ಚೇತರಿಕೆ ಹಾದಿಯಲ್ಲಿವೆ.
Union Budget 2024 Live Updates: ಬಜೆಟ್ ದಾಖಲೆ ಪ್ರದರ್ಶನ
ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್ ಬಜೆಟ್ ದಾಖಲೆಗಳನ್ನು ಪ್ರದರ್ಶಿಸಿದರು. ಈ ವೇಳೆ ವಿತ್ತ ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ತಂಡದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Union Budget 2024 Live Updates: ಸಂಸತ್ ಭವನ ತಲುಪಿದ ನಿರ್ಮಲಾ ಸೀತಾರಾಮನ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದ 3ನೇ ಅವಧಿಯ ಮೊದಲ ಬಜೆಟ್ ಮಂಡಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ತಂಡದೊಂದಿಗೆ ಬಜೆಟ್ ಟ್ಯಾಬ್ಲೆಟ್ ಇರುವ ಬ್ಯಾಗ್ ಹೊತ್ತು ಸಂಸತ್ ಭವನಕ್ಕೆ ಆಗಮಿಸಿದ್ದಾರೆ.
Union Budget 2024 Live Updates: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಪ್ರಧಾನಿ ಮೋದಿ 3.O ಸರ್ಕಾರದ ಮೊದಲ ಹಾಗೂ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಸತತ 7ನೇ ಬಜೆಟ್ ಇದಾಗಿದೆ. ಕೇಂದ್ರ ಬಜೆಟ್ ಮಂಡಿಸಲು ವಿತ್ತ ಸಚಿವರು ದೆಹಲಿಯ ತಮ್ಮ ನಿವಾಸದಿಂದ ಇದೀಗ ನೂತನ ಸಂಸತ್ ಭವನಕ್ಕೆ ಕಾರಿನಲ್ಲಿ ತೆರಳಿದರು.
ಬಜೆಟ್ ಬಗ್ಗೆ ಕುತೂಹಲಕಾರಿ ಸಂಗತಿಗಳು
1860ರ ಏಪ್ರಿಲ್ 7ರಂದು ಭಾರತದ ಮೊದಲ ಬಜೆಟ್ ಮಂಡಿಸಿದವರು ಜೆಮ್ಸ್ ವಿಲ್ಸನ್
1947ರ ನವೆಂಬರ್ 26ರಂದು ಸ್ವತಂತ್ರ ಭಾರತದಲ್ಲಿ ಬಜೆಟ್ ಮಂಡಿಸಿದ ಮೊದಲ ವ್ಯಕ್ತಿ ಷಣ್ಮುಖಂ ಚೆಟ್ಟಿ
ಹಣಕಾಸು ಸಚಿವ ಸಿ.ಡಿ.ದೇಶಮುಖ್ 1950ರಿಂದ 56ರವರೆಗೆ 7 ಬಜೆಟ್ ಮಂಡಿಸಿದ್ದಾರೆ. ಈ ಪೈಕಿ 1952ರ ಮಧ್ಯಂತರ ಬಜೆಟ್ ಸಹ ಒಳಗೊಂಡಿದೆ.
ಸಿ.ಡಿ.ದೇಶಮುಖ್ ಬಳಿಕ 7 ಬಜೆಟ್ ಮಂಡಿಸಿದ ಹೆಗ್ಗಳಿಕೆ ನಿರ್ಮಲಾ ಸೀತಾರಾಮನ್ ಅವರದ್ದಾಗಲಿದೆ
ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಎನಿಸಿಕೊಂಡಿದ್ದಾರೆ. ಇಂದಿರಾ ಗಾಂಧಿ ಪ್ರಧಾನಿಯಾಗಿ ಬಜೆಟ್ ಮಂಡನೆ ಮಾಡಿದ್ದರು.
ಭಾರತದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ದಾಖಲೆ ಮೊರಾರ್ಜಿ ದೇಸಾಯಿ ಅವರ ಹೆಸರಿನಲ್ಲಿದೆ.
Union Budget 2024 Live Updates: ಪ್ರಧಾನಿ ಮೋದಿ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್ ಅನ್ನು ಇಂದು ಅಂದರೆ ಮಂಗಳವಾರ (ಜುಲೈ 23)ಮಂಡಿಸಲಾಗುವುದು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರು ಹೊಸ ಇತಿಹಾಸವನ್ನು ಸೃಷ್ಟಿಸಲಿದ್ದಾರೆ. ಅವರು ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿಯವರ ದಾಖಲೆಯನ್ನು ಮುರಿಯಲಿದ್ದಾರೆ. ಮೊರಾರ್ಜಿ ದೇಸಾಯಿಯವರು 1959 ಮತ್ತು 1964ರ ನಡುವೆ ಸತತ 5 ಪೂರ್ಣ ಬಜೆಟ್ & 1 ಮಧ್ಯಂತರ ಬಜೆಟ್ ಮಂಡಿಸಿದ್ದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 1991 & 1995ರ ನಡುವೆ ಸತತ 5 ಬಾರಿ ಬಜೆಟ್ ಮಂಡಿಸಿದ್ದರು. ಪಿವಿ ನರಸಿಂಹರಾವ್ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಹಣಕಾಸು ಸಚಿವರಾಗಿದ್ದರು. ನಿರ್ಮಲಾ ಸೀತಾರಾಮನ್ 2019ರಲ್ಲಿ ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಸಚಿವರಾದರು. ಇದೀಗ ಪ್ರಧಾನಿ ಮೋದಿಯವರು ಸತತ 3ನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದ್ದಾರೆ. ಸೀತಾರಾಮನ್ ಈ ವರ್ಷದ ಫೆಬ್ರವರಿಯ ಮಧ್ಯಂತರ ಸೇರಿದಂತೆ ಸತತ 6 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಇಂದು ಮಂಡಿಸಲಿರುವ 2024-25 ಹಣಕಾಸು ವರ್ಷದ ಪೂರ್ಣ ಬಜೆಟ್ (ಏಪ್ರಿಲ್ 2024ರಿಂದ ಮಾರ್ಚ್ 2025) ಅವರ ಸತತ 7ನೇ ಬಜೆಟ್ ಆಗಿರುತ್ತದೆ.
Union Budget 2024 Live Updates: ಕೇಂದ್ರ ಬಜೆಟ್‌ಗೆ ಕ್ಷಣಗಣನೆ ಶುರುವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ NDA ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್ ಹಾಗೂ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಸತತ 7ನೇ ಬಜೆಟ್ ಇದಾಗಿದೆ. ಕೇಂದ್ರ ಬಜೆಟ್ ಬಗ್ಗೆ ಹತ್ತು ಹಲವಾರು ನಿರೀಕ್ಷೆಗಳು ಗರಿಗೆದರಿವೆ.