ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆ ಆಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಮಾರ್ಚ್ 4) ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಆಗಲಿದೆ. ಬಜೆಟ್ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ. ಈಗಾಗಲೇ ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.