ನವದೆಹಲಿ : ಪ್ಯಾನ್ ಕಾರ್ಡ್ (PAN Card) ಒಂದು ಪ್ರಮುಖ ದಾಖಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ, ಸರ್ಕಾರಿ ಕೆಲಸದಿಂದ ಹಿಡಿದು, ಖಾಸಗಿ ಕೆಲಸಗಳವರೆಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಬ್ಯಾಂಕಿನಲ್ಲಿ ಖಾತೆ ತೆರೆಯುವುದು, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ತೆಗೆದುಕೊಳ್ಳುವುದು ಅಥವಾ ಐಟಿಆರ್ ಸಲ್ಲಿಸುವುದು, ಈ ಎಲ್ಲಾ ಕೆಲಸಗಳಿಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಹೀಗಿರುವಾಗ ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋದರೆ, ಏನು ಮಾಡುವುದು? ಈಗ ಪ್ಯಾನ್ ಕಾರ್ಡ್ ಕಳೆದು ಹೋದರೆ ಚಿಂತಿಸಬೇಕಾಗಿಲ್ಲ. ಆದಾಯ ತೆರಿಗೆಯ ಹೊಸ ವೆಬ್‌ಸೈಟ್‌ನಿಂದ ಇ-ಪ್ಯಾನ್ ಕಾರ್ಡ್ (e-Pan Card) ಅನ್ನು ಸುಲಭವಾಗಿ ಡೌನ್‌ಲೋಡ್ ಮಾಡಬಹುದು. ಇ-ಪ್ಯಾನ್ ಕಾರ್ಡ್ ಡೌನ್ಲೋಡ್ (e-Pan Card Download) ಮಾಡುವ ಸಂಪೂರ್ಣ ಪ್ರಕ್ರಿಯೆ ಇಲ್ಲದೆ.
ಪ್ಯಾನ್ ನಂಬರ್ ನಿಂದ ಇ-ಪ್ಯಾನ್ ಡೌನ್‌ಲೋಡ್ ಮಾಡುವುದು ಹೇಗೆ ?
1. ಮೊದಲಿಗೆ ಆದಾಯ ತೆರಿಗೆ ವೆಬ್‌ಸೈಟ್ https://www.incometax.gov.in/iec/foportal ಗೆ ಲಾಗಿನ್ ಮಾಡಿ.
2. ಈಗ ನೀವು 'Instant E PAN' ಮೇಲೆ ಕ್ಲಿಕ್ ಮಾಡಿ.
3. ನಂತರ 'New E PAN' ಮೇಲೆ ಕ್ಲಿಕ್ ಮಾಡಿ.
4. ಈಗ ನೀವು ನಿಮ್ಮ PAN ಸಂಖ್ಯೆಯನ್ನು ನಮೂದಿಸಿ.
5. ನಿಮ್ಮ ಪ್ಯಾನ್ ಸಂಖ್ಯೆ ನೆನಪಿಲ್ಲದಿದ್ದರೆ, ನಿಮ್ಮ ಆಧಾರ್ ಸಂಖ್ಯೆಯನ್ನು (Aadhaar) ನಮೂದಿಸಿ.
ಇದನ್ನೂ ಓದಿ : PM ಕಿಸಾನ್ ಯೋಜನೆಯಡಿಯಲ್ಲಿ 4000 ರೂಪಾಯಿಗಳನ್ನು ಪಡೆಯಬಹುದು ! ನೋಂದಣಿಗಾಗಿ ಹೀಗೆ ಮಾಡಿ
6. ಇಲ್ಲಿ ಹಲವು ನಿಯಮಗಳು ಮತ್ತು ಷರತ್ತುಗಳನ್ನು ನೀಡಲಾಗಿದೆ, ಅವುಗಳನ್ನು ಎಚ್ಚರಿಕೆಯಿಂದ ಓದಿ ನಂತರ 'Accept' ಮೇಲೆ ಕ್ಲಿಕ್ ಮಾಡಿ.
7. ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ, ಅದನ್ನು ಹಾಕಿ.
8. ನೀಡಿರುವ ವಿವರಗಳನ್ನು ಓದಿದ ನಂತರ Confirm ಮಾಡಿ
10. ಈಗ ನಿಮ್ಮ ಪ್ಯಾನ್ ಅನ್ನು ನಿಮ್ಮ ಇಮೇಲ್ ಐಡಿಗೆ ಪಿಡಿಎಫ್ ರೂಪದಲ್ಲಿ ಕಳುಹಿಸಲಾಗುತ್ತದೆ.
11. ಇಲ್ಲಿಂದ ನಿಮ್ಮ 'ಇ-ಪ್ಯಾನ್' ಡೌನ್‌ಲೋಡ್ (e-Pan Card Download) ಮಾಡಬಹುದು.
ಪ್ಯಾನ್-ಆಧಾರ್ ಲಿಂಕ್ ಕಡ್ಡಾಯ :
ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ನಿಮಗೆ ನಿಮ್ಮ ಪ್ಯಾನ್ ಸಂಖ್ಯೆ ನೆನಪಿಲ್ಲದಿದ್ದರೆ ಅಥವಾ ನೀವು ಗೊಂದಲಕ್ಕೊಳಗಾಗಿದ್ದರೆ ನಿಮ್ಮ ಆಧಾರ್ ಕಾರ್ಡ್ ಸಹಾಯದಿಂದ ಇ-ಪ್ಯಾನ್ ಕಾರ್ಡ್ ಡೌನ್‌ಲೋಡ್ ಮಾಡಬಹುದು. ಆದರೆ ಇದಕ್ಕಾಗಿ ನಿಮ್ಮ ಪ್ಯಾನ್ ಕಾರ್ಡ್ (PAN Card) ಮತ್ತು ಆಧಾರ್ ಕಾರ್ಡ್ ಲಿಂಕ್ ಹೊಂದಿರುವುದು ಕಡ್ಡಾಯವಾಗಿದೆ. ನಿಮ್ಮ ಪ್ಯಾನ್ ಮತ್ತು ಆಧಾರ್ ಲಿಂಕ್ ಆಗದಿದ್ದರೆ ನಿಮಗೆ ಇ-ಪ್ಯಾನ್ ಡೌನ್‌ಲೋಡ್ ಮಾಡಲು ಸಾಧ್ಯವಾಗುವುದಿಲ್ಲ.
ಇದನ್ನೂ ಓದಿ : Arecanut Price: ರಾಜ್ಯದ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ, ಇಂದಿನ ದರ ತಿಳಿಯಿರಿ…
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.