ವಾರದ ಮೊದಲ ದಿನವೇ ಇಳಿಕೆ ಕಂಡ ಚಿನ್ನದ ಬೆಲೆ ! ಅಗ್ಗದ ಬೆಲೆಯಲ್ಲಿ ಚಿನ್ನ ಖರೀದಿಸಲು ಬೆಸ್ಟ್ ಟೈಮ್
Gold Price Today Down,: ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಮತ್ತೆ ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ, ಚಿನ್ನದ ಬೆಲೆ ಶೇಕಡಾ 0.08 ರಷ್ಟು ಅಗ್ಗವಾಗಿದೆ. ಗ್ಗದ ದರದಲ್ಲಿ ಚಿನ್ನ ಖರೀದಿಸಲು ಇದು ಸರಿಯಾದ ಸಮಯ.
Gold Price Today Down, 10 July 2023 : ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಮತ್ತೆ ಇಳಿಕೆಯಾಗಿದೆ. ಅಗ್ಗದ ದರದಲ್ಲಿ ಚಿನ್ನ ಖರೀದಿಸಲು ಇದು ಸರಿಯಾದ ಸಮಯ. ಇಂದು ಚಿನ್ನ ಮತ್ತು ಬೆಳ್ಳಿ ಎರಡೂ ಅಗ್ಗವಾಗಿವೆ. ಮಲ್ಟಿ ಕಮಾಡಿಟಿ ಎಕ್ಸ್ ಚೇಂಜ್ ಈ ಬಗ್ಗೆ ಮಾಹಿತಿ ನೀಡಿದೆ. ಎಂಸಿಎಕ್ಸ್‌ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 58,700 ರೂ.ಗೆ ಇಳಿದಿದೆ. ಇದಲ್ಲದೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಅಗ್ಗವಾಗಿದೆ.
ಅಗ್ಗವಾಯಿತು ಚಿನ್ನ ಮತ್ತು ಬೆಳ್ಳಿ :
ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ, ಚಿನ್ನದ ಬೆಲೆ ಶೇಕಡಾ 0.08 ರಷ್ಟು ಅಗ್ಗವಾಗಿದೆ. ಅಂದರೆ ಸುಮಾರು 150 ರೂಯಷ್ಟು ಇಳಿಕೆ ಕಂಡಿದ್ದು 10 ಗ್ರಾಂ ಚಿನ್ನದ ಬೆಲೆ 58640 ಆಗಿದೆ. ಇದಲ್ಲದೇ ಬೆಳ್ಳಿಯ ಬೆಲೆಯಲ್ಲಿ ಶೇ.0.10ರಷ್ಟು ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 71239 ರೂ.ಯಲ್ಲಿ ವಹಿವಾಟು ನಡೆಸುತ್ತಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಸುಮಾರು 200 ರೂ.ಗಳ ಕುಸಿತ ಕಾಣುತ್ತಿದೆ.
ಇದನ್ನೂ ಓದಿ : ಒಂದು ವೇಳೆ ನಿಮ್ಮ ಟ್ರೈನ್ ಮಿಸ್ ಆದರೆ ತಕ್ಷಣ ಹೀಗೆ ಮಾಡಿ ! ಅದೇ ರೈಲಿನಲ್ಲಿ ನಿಮ್ಮ ಪ್ರಯಾಣ ಮುಂದುವರೆಸಬಹುದು
ಜಾಗತಿಕ ಮಾರುಕಟ್ಟೆಯಲ್ಲಿಯೂ ಅಗ್ಗವಾದ ಚಿನ್ನ ಮತ್ತು ಬೆಳ್ಳಿ :
ಜಾಗತಿಕ ಮಾರುಕಟ್ಟೆಯ ಬಗ್ಗೆ ಮಾತನಾಡುವುದಾದರೆ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಇಲ್ಲಿ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ 1927 ಮತ್ತು ಬೆಳ್ಳಿ ಪ್ರತಿ ಔನ್ಸ್‌ಗೆ 23.23 ಮಟ್ಟದಲ್ಲಿದೆ.
ದೀಪಾವಳಿಗೆ ಮತ್ತೆ ದುಬಾರಿಯಾಗಲಿದೆ ಚಿನ್ನ ಬೆಳ್ಳಿ :
ದೀಪಾವಳಿ ವೇಳೆಗೆ ಮತ್ತೆ ಚಿನ್ನದ ಬೆಲೆ ಏರಿಕೆಯಾಗಬಹುದು ಎನ್ನಲಾಗಿದೆ. ದೀಪಾವಳಿಯವರೆಗೆ ಮತ್ತೊಮ್ಮೆ ದೊಡ್ಡ ಬೂಮ್ ನಿರೀಕ್ಷಿಸಲಾಗಿದೆ. ದೀಪಾವಳಿ ವೇಳೆಗೆ ಚಿನ್ನದ ಬೆಲೆ 62,500 ರೂ.ಗೆ ತಲುಪಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ : ಅತಿ ಹೆಚ್ಚು ವೇತನ ನೀಡುವ ಭಾರತದ ನಗರ ಯಾವುದು ಗೊತ್ತಾ...? ವರದಿ ಓದಿ
ಆ್ಯಪ್ ಮೂಲಕ ಚಿನ್ನದ ಶುದ್ಧತೆಯನ್ನು ಪರಿಶೀಲಿಸಿ :
ನೀವು ಕೂಡಾ ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ನೀವು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. 'ಬಿಐಎಸ್ ಕೇರ್ ಆ್ಯಪ್' ಮೂಲಕ ಚಿನ್ನದ ಶುದ್ಧತೆಯನ್ನು ತಿಳಿದುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.