LPG Cylinder Prices Hike: ಮಾರ್ಚ್ ಮೊದಲ ದಿನವೇ ಗ್ರಾಹಕರಿಗೆ ಸಿಲಿಂಡರ್ ಬೆಲೆ ಏರಿಕೆ ಬಿಸಿ!

LPG cylinder Prices Hike: ಈ ಬಾರಿಯೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ. 19 ಕೆಜಿಯ ಎಲ್‌ಪಿಜಿ ಸಿಲಿಂಡರ್ ಮಾರ್ಚ್ 1 ರಿಂದ ಅಂದರೆ ಇಂದಿನಿಂದ ದೆಹಲಿಯಲ್ಲಿ ರೂ.1907 ರ ಬದಲಿಗೆ ರೂ.2012 ಕ್ಕೆ ಲಭ್ಯವಿರುತ್ತದೆ.

Written by - Yashaswini V | Last Updated : Mar 1, 2022, 08:14 AM IST
  • ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾಸಿಕ ಪರಿಷ್ಕರಿಸಲಾಗುತ್ತದೆ.
  • ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಅಕ್ಟೋಬರ್ 6, 2021 ರಿಂದ ಹೆಚ್ಚಿಸಲಾಗಿಲ್ಲ.
  • ಆದಾಗ್ಯೂ, ಈ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ $ 102 ಮೀರಿದೆ.
LPG Cylinder Prices Hike: ಮಾರ್ಚ್ ಮೊದಲ ದಿನವೇ ಗ್ರಾಹಕರಿಗೆ ಸಿಲಿಂಡರ್ ಬೆಲೆ ಏರಿಕೆ ಬಿಸಿ! title=
LPG Price Hike

LPG cylinder Prices Hike: ಉಕ್ರೇನ್-ರಷ್ಯಾ ಯುದ್ಧದ ನಡುವೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಈಗಾಗಲೇ ತತ್ತರಿಸಿರುವ ಜನರಿಗೆ ಮತ್ತೊಂದ್ ಶಾಕ್ ನೀಡಲಾಗಿದೆ. ಮಾರ್ಚ್ 1 ರಂದು ಎಲ್‌ಪಿಜಿ ಸಿಲಿಂಡರ್ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಸಿಲಿಂಡರ್ ದರದಲ್ಲಿ 105 ರೂಪಾಯಿ ಏರಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಈ ಹೆಚ್ಚಳ ಮಾಡಲಾಗಿದೆ.  ವಾಣಿಜ್ಯ ಸಿಲಿಂಡರ್‌ಗಳಲ್ಲಿ ಈ ಹೆಚ್ಚಳ ಮಾಡಲಾಗಿದ್ದು, ಮಾರ್ಚ್ 7ರ ನಂತರ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ.  ಏಕೆಂದರೆ ಪ್ರಸ್ತುತ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆರನೇ ಹಂತದ ಮತದಾನ ಮಾರ್ಚ್ 3 ರಂದು ಮತ್ತು ಏಳನೇ ಹಂತದ ಮತದಾನ ಮಾರ್ಚ್ 7 ರಂದು ನಡೆಯಲಿದೆ. ಇಂತಹ ಸನ್ನಿವೇಶದಲ್ಲಿ ಮಾರ್ಚ್ 7ರ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆಯೂ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.

5 ಕೆಜಿ ಸಿಲಿಂಡರ್ ಬೆಲೆ ಏರಿಕೆ:
ದೆಹಲಿಯಲ್ಲಿ ಮಂಗಳವಾರದಿಂದ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ (LPG Commercial Cylinder Price) 2,012 ರೂ.ಗೆ ಏರಿಕೆಯಾಗಿದೆ. ಇದೇ ವೇಳೆ 5 ಕೆಜಿ ಸಿಲಿಂಡರ್ ಬೆಲೆಯೂ 27 ರೂಪಾಯಿ ಏರಿಕೆಯಾಗಿದೆ. ಈಗ ದೆಹಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ.ಗಳಿಗೆ ಲಭ್ಯವಾಗಲಿದೆ.

ಇದನ್ನೂ ಓದಿ- LPG Subsidy: ಮತ್ತೆ ಎಲ್‌ಪಿಜಿ ಸಿಲಿಂಡರ್ ಮೇಲೆ ಸಬ್ಸಿಡಿ ಆರಂಭ!

ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಇಲ್ಲ:
ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು (LPG Cylinder Price) ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾಸಿಕ ಪರಿಷ್ಕರಿಸಲಾಗುತ್ತದೆ. ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಅಕ್ಟೋಬರ್ 6, 2021 ರಿಂದ ಹೆಚ್ಚಿಸಲಾಗಿಲ್ಲ. ಆದಾಗ್ಯೂ, ಈ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ $ 102 ಮೀರಿದೆ. ಆದಾಗ್ಯೂ, ಈ ಅವಧಿಯಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಬದಲಾಗಿದೆ. 

ಅಕ್ಟೋಬರ್ 2021 ರಿಂದ ಫೆಬ್ರವರಿ 1, 2022 ರವರೆಗೆ ವಾಣಿಜ್ಯ ಸಿಲಿಂಡರ್ ಬೆಲೆ 170 ರೂಪಾಯಿಗಳಷ್ಟು ಹೆಚ್ಚಾಗಿದೆ. ಅಕ್ಟೋಬರ್ 1 ರಂದು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,736 ರೂ. ನವೆಂಬರ್‌ನಲ್ಲಿ 2000 ಮತ್ತು ಡಿಸೆಂಬರ್‌ನಲ್ಲಿ 2101. ಅದರ ನಂತರ, ಜನವರಿಯಲ್ಲಿ ಮತ್ತೆ ಅಗ್ಗವಾಯಿತು ಮತ್ತು ಫೆಬ್ರವರಿ 2022 ರಲ್ಲಿ 1907 ರೂ.ಗೆ ಕುಸಿಯಿತು. ಫೆಬ್ರವರಿ 1 ರಂದು ರಾಷ್ಟ್ರೀಯ ತೈಲ ವಿತರಣಾ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 91.50 ರೂ ಕಡಿತಗೊಳಿಸಿದ್ದವು.

ಇದನ್ನೂ ಓದಿ- IRCTC ಭರ್ಜರಿ ಆಫರ್: ಪ್ರತಿದಿನ ಕೇವಲ 1 ಸಾವಿರ ರೂ.ನಲ್ಲಿ ತೀರ್ಥಕ್ಷೇತ್ರಗಳಿಗೆ ಪ್ರಯಾಣಿಸಿ

ವಾಣಿಜ್ಯ ಸಿಲಿಂಡರ್ ಬೆಲೆಯನ್ನು 105 ರೂ.ಗಳಷ್ಟು ಹೆಚ್ಚಳ:
ಈ ಬಾರಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 105 ರೂ.ಗಳಷ್ಟು ಹೆಚ್ಚಿಸಲಾಗಿದೆ. 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಮಾರ್ಚ್ 1 ರಿಂದ ದೆಹಲಿಯಲ್ಲಿ 1907 ರೂ ಬ.ದಲಿಗೆ 2012 ರೂ.ಗೆ ಲಭ್ಯವಿರುತ್ತದೆ. ಕೋಲ್ಕತ್ತಾದಲ್ಲಿ ರೂ.1987ರ ಬದಲಾಗಿ ರೂ.2095ಕ್ಕೆ ಲಭ್ಯವಾಗಲಿದ್ದು, ಮುಂಬೈನಲ್ಲಿ ರೂ.1857ರಿಂದ ರೂ.1963ಕ್ಕೆ ಏರಿಕೆಯಾಗಿದೆ. ಅದೇ ರೀತಿ ಚೆನ್ನೈನಲ್ಲಿ ರೂ.2040 ಬದಲಿಗೆ ರೂ.2145.5ಕ್ಕೆ ದೊರೆಯಲಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News