LPG Cylinder Price: ಏಪ್ರಿಲ್ 1 ರಂದು ಅಂದರೆ ಇಂದಿನಿಂದ ಹೊಸ ಆರ್ಥಿಕ ವರ್ಷದ ಆರಂಭವಾಗುತ್ತದೆ. ಈ ಸಮಯದಲ್ಲಿ ಸರ್ಕಾರ ದೊಡ್ಡ ಉಡುಗೊರೆಯನ್ನು ನೀಡಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದೆ. ವಾಣಿಜ್ಯ ಸಿಲಿಂಡರ್ ಬೆಲೆ 91.50 ರೂಪಾಯಿ ಇಳಿಕೆಯಾಗಿದೆ. ಇಂದಿನಿಂದಲೇ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಇದರಿಂದ ಜನರಿಗೆ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈಗ 91.50 ರೂಪಾಯಿ ಇಳಿಕೆಯಾಗಿದೆ. 


COMMERCIAL BREAK
SCROLL TO CONTINUE READING

2024 ರ ಆರ್ಥಿಕ ವರ್ಷದ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಲಾಗಿದೆ. ಆದಾಗ್ಯೂ, ಈ ಬದಲಾವಣೆಯನ್ನು ವಾಣಿಜ್ಯ ಅನಿಲ ಸಿಲಿಂಡರ್‌ಗಳ ವೆಚ್ಚದಲ್ಲಿ ಮಾತ್ರ ಮಾಡಲಾಗಿದೆ. ಮನೆಗಳಲ್ಲಿ ಬಳಸುವ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಗಮನಾರ್ಹವಾಗಿ, ಮಾರ್ಚ್‌ನಲ್ಲಿ ಸರ್ಕಾರವು ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ನಲ್ಲಿ ಎಲ್‌ಪಿಜಿಯ ತೂಕ 19 ಕೆ.ಜಿ. ಆಗಿರುತ್ತದೆ.


ಇದನ್ನೂ ಓದಿ : PPF Latest Update: ಪಿಪಿಎಫ್ ಹೂಡಿಕೆದಾರರಿಗೆ ಬಿಗ್ ಶಾಕ್!


ಇಂಡಿಯನ್ ಆಯಿಲ್ ವೆಬ್‌ಸೈಟ್ ಪ್ರಕಾರ, ಇಂದಿನಿಂದ ಅಂದರೆ ಏಪ್ರಿಲ್ 1 ರಿಂದ ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2028 ರೂ., ಕೋಲ್ಕತ್ತಾದಲ್ಲಿ 2132 ರೂ., ಮುಂಬೈನಲ್ಲಿ 1980 ರೂ. ಮತ್ತು ಚೆನ್ನೈನಲ್ಲಿ 2192.50 ರೂ.ಗೆ ಲಭ್ಯವಿದೆ. ಈ ಹಿಂದೆ ವಾಣಿಜ್ಯ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ ರೂ 2119.50, ಕೋಲ್ಕತ್ತಾದಲ್ಲಿ ರೂ 2221.50 ಮತ್ತು ಮುಂಬೈನಲ್ಲಿ ರೂ 2071.50 ಆಗಿತ್ತು. 


ಎಲ್‌ಪಿಜಿ ಬೆಲೆಯನ್ನು ಮುಖ್ಯವಾಗಿ ಸರ್ಕಾರಿ ತೈಲ ಕಂಪನಿಗಳು ನಿರ್ಧರಿಸುತ್ತವೆ ಮತ್ತು ಜಾಗತಿಕ ಕಚ್ಚಾ ಇಂಧನ ದರಗಳ ಆಧಾರದ ಮೇಲೆ ಮಾಸಿಕ ಆಧಾರದ ಮೇಲೆ ಬದಲಾವಣೆಗೆ ಒಳಪಟ್ಟಿರುತ್ತದೆ. ಕಚ್ಚಾ ತೈಲದ ಏರಿಕೆಯು ಎಲ್‌ಪಿಜಿ ದರಗಳಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಮತ್ತು ಚ್ಚಾ ತೈಲದ ಏರಿಕೆಯು ಬೆಲೆ ಇಳಿಕೆ ಸಿಲಿಂಡರ್‌ ದರ ಇಳಿಕೆಗೆ ಕಾರಣ. ಗೃಹಬಳಕೆಯ LPG ಗ್ಯಾಸ್ ಸಿಲಿಂಡರ್‌ (14.2 kgs) ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕರ್ನಾಟಕದಲ್ಲಿ (ಬೆಂಗಳೂರು) ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ. 1,105.50 ಆಗಿದೆ. 


ಇದನ್ನೂ ಓದಿ : ಇಂದಿನಿಂದ ಬದಲಾಗುತ್ತಿವೆ ಈ ನಿಯಮಗಳು, ಸರ್ಕಾರದ ಬಹುಮುಖ್ಯ ನಿರ್ಧಾರ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.