ನವದೆಹಲಿ : ಎಲ್‌ಪಿಜಿ (LPG) ಗ್ರಾಹಕರಿಗೆ ಮಹತ್ವದ ಸುದ್ದಿ ಇದು. ಇನ್ನು ಅಡುಗೆ ಅನಿಲ ಸಿಲಿಂಡರ್ ತೂಕ ಕಡಿಮೆಯಾಗಬಹುದು. LPG ಸಿಲಿಂಡರ್‌ಗಳು ಭಾರವಾಗಿದ್ದು, ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ. ಅದರಲ್ಲೂ ಮಹಿಳೆಯರು ಗ್ಯಾಸ್ ಸಿಲಿಂಡರ್ (Gas cylinder) ಕೊಂಡೊಯ್ಯಲು ತೊಂದರೆ ಅನುಭವಿಸುತ್ತಿದ್ದಾರೆ. ಸಿಲಿಂಡರ್ ತೂಕ ಕಡಿಮೆಯಾದರೆ ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಾಗಲಿದೆ.  


COMMERCIAL BREAK
SCROLL TO CONTINUE READING

ಜನರ ಅನುಕೂಲಕ್ಕಾಗಿ, ಗ್ಯಾಸ್ ಸಿಲಿಂಡರ್ (Gas cylinder) ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಸಮಸ್ಯೆಗಳು ಉಂಟಾಗುತ್ತದೆ. ಆದರೆ, ಶೀಘ್ರದಲ್ಲೇ ಸರ್ಕಾರವು ಮಹಿಳೆಯರ ಅನುಕೂಲಕ್ಕಾಗಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೂಕವನ್ನು ಕಡಿಮೆ ಮಾಡಬಹುದು.


ಇದನ್ನೂ  ಓದಿ :FD Interest Rates : ಬ್ಯಾಂಕ್ ಎಫ್ ಡಿ ಮೇಲಿನ ಬಡ್ಡಿ ದರ ಹೆಚ್ಚಳ, ಯಾವ ಬ್ಯಾಂಕ್ ನೀಡುತ್ತಿದೆ ಅತಿ ಹೆಚ್ಚು ರಿಟರ್ನ್


ಸಿಲಿಂಡರ್  ಸಾಗಿಸಲು ತೊಂದರೆಯಾಗುವುದಿಲ್ಲ : 
ಗಮನಾರ್ಹ ಅಂಶವೆಂದರೆ 14.2 ಕೆಜಿಯಷ್ಟು ಅಡುಗೆ ಅನಿಲ ಸಿಲಿಂಡರ್ ಗಳ ತೂಕದಿಂದಾಗಿ ಅದರ ಸಾಗಣೆಯಲ್ಲಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತನ್ನ ತೂಕವನ್ನು ಕಡಿಮೆ ಮಾಡುವ ಬಗ್ಗೆ ಹಲವು ಆಯ್ಕೆಗಳನ್ನು ಪರಿಗಣಿಸುತ್ತಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಇದಕ್ಕೂ ಮುನ್ನ ಸದಸ್ಯರೊಬ್ಬರು ಭಾರವಾದ ಸಿಲಿಂಡರ್‌ಗಳಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು.


ಕೇಂದ್ರ ಸಚಿವರು ನೀಡಿರುವ ಮಾಹಿತಿ :  
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಹರ್ದೀಪ್ ಸಿಂಗ್ ಪುರಿ, 'ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್‌ನ (LPG)  ಹೆಚ್ಚಿನ ತೂಕವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ, ಹಾಗಾಗಿ ಅದರ ತೂಕವನ್ನು ಕಡಿಮೆ ಮಾದುವ ಬಗ್ಗೆ ಚಿಂತಿಸಲಾಗುತ್ತಿದೆ' ಎಂದು ಹೇಳಿದರು. 14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವುದಾಗಲಿ ಅಥವಾ ಇನ್ನಾವುದಾದರೂ ಮಾರ್ಗವನ್ನಗಲಿ ಕಂಡುಕೊಳ್ಳಲಾಗುವುದು ಎಂದು ಹೇಳಿದ್ದಾರೆ.   


ಇದನ್ನೂ  ಓದಿ : PMSBY Scheme: ಸರ್ಕಾರದ ಈ ಸೂಪರ್‌ಹಿಟ್ ಯೋಜನೆಯಲ್ಲಿ 1 ರೂ. ಹೂಡಿಕೆ ಮಾಡಿ, 2 ಲಕ್ಷ ರೂ.ಗಳ ಲಾಭ ಗಳಿಸಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ