LPG Price Cut: ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗಿದ್ದು, ವಿತ್ತೀಯ ವರ್ಷದ ಮೊದಲ ದಿನವೇ ಸಿಲಿಂಡರ್ ಗ್ರಾಹಕರಿಗೆ ಗುಡ್ ನ್ಯೂಸ್ ಇದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆ ಇಳಿಕೆಯನ್ನು ಘೋಷಿಸಿವೆ ಎಂದು ತಿಳಿದುಬಂದಿದೆ.
ಮೂಲಗಳಿಂದ ಲಭ್ಯವಿರುವ ಮಾಹಿತಿಯ ಪ್ರಕಾರ, 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ (19kg Commercial Cylinder Price) 30.50 ರೂಪಾಯಿ ಇಳಿಕೆಯನ್ನು ಘೋಷಿಸಲಾಗಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 30.50 ರೂ., ಮುಂಬೈನಲ್ಲಿ 31.50 ರೂ., ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿತಗೊಂಡಿದೆ. ಇದೇ ವೇಳೆ 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ (FTL Cylinder Price) 7.50 ರೂಪಾಯಿ ಇಳಿಕೆಯಾಗಿದೆ.
ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಇಳಿಕೆ (Commercial Cylinder Price Cut) ಬಳಿಕ ಇದೀಗ ಏಪ್ರಿಲ್ 01, 2024ರಿಂದ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1764.50ರೂ.ಗಳಿಗೆ ಲಭ್ಯವಾಗಲಿದೆ. ಅದೇ ಸಮಯದಲ್ಲಿ ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1717.50ರೂ. ಆಗಿದ್ದರೆ, ಕೋಲ್ಕತ್ತಾದಲ್ಲಿ ಇದರ ಬೆಲೆ 1879 ರೂ. ಮತ್ತು ಚೆನ್ನೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ 1930 ರೂ.ಗೆ ಇಳಿಕೆ ಕಂಡಿದೆ.
ಇದನ್ನೂ ಓದಿ- Online Fraud ತಡೆಗಟ್ಟಲು ಶೀಘ್ರದಲ್ಲೇ ಬರಲಿದೆ RBI Digita, ಏನಿದು ಹೊಸ ತಂತ್ರಜ್ಞಾನ?
ಗೃಹಬಳಕೆ ಎಲ್‌ಪಿಜಿ ದರದಲ್ಲಿಲ್ಲ ಯಾವುದೇ ಬದಲಾವಣೆ!
ಗಮನಾರ್ಹವಾಗಿ, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಮಾತ್ರ ಕಡಿತವನ್ನು ಘೋಷಿಸಿವೆ. ಗೃಹಬಳಕೆ ಸಿಲಿಂಡರ್ ಬೆಳೆಯಲ್ಲಿ ಯವ್ದೆ ಬದಲಾವಣೆ ಮಾಡಿಲ್ಲ.
ಪ್ರಸ್ತುತ, 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ (14.2KG LPG Price) ದೆಹಲಿಯಲ್ಲಿ 803 ರೂ. ಆಗಿದ್ದರೆ, ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ಮತ್ತು ಚೆನ್ನೈನಲ್ಲಿ 818.50ರೂ.ಗಳಿಗೆ ಲಭ್ಯವಿದೆ.
ಇದನ್ನೂ ಓದಿ- SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಈ ಡೆಬಿಟ್ ಕಾರ್ಡ್‌ಗಳ ಮೇಲಿನ ಶುಲ್ಕ ಹೆಚ್ಚಳ
ಬೆಂಗಳೂರಿನಲ್ಲಿ ಯಾವ ಸಿಲಿಂಡರ್ ಬೆಲೆ ಎಷ್ಟಿದೆ?
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ದೇಶೀಯ ಸಿಲಿಂಡರ್ ಎಂದರೆ ಗೃಹಬಳಕೆ ಎಲ್‌ಪಿಜಿ (14.2) ಬೆಲೆ (LPG Price In Bengaluru) ₹ 805.50ಇದ್ದರೆ, ವಾಣಿಜ್ಯ ಸಿಲಿಂಡರ್ ದರ ₹ 1,844. 50, 5ಕೆಜಿಯ ದೇಶೀಯ ಸಿಲಿಂಡರ್ ಬೆಲೆ ₹ 300.50ಗೆ ಲಭ್ಯವಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.