ಬಿಗ್ ಶಾಕ್! ಎಲ್‌ಪಿಜಿ ಬೆಲೆಯಲ್ಲಿ ಭಾರಿ ಏರಿಕೆ: ಈಗ ಇಷ್ಟು ರೂಪಾಯಿಗೆ ಗ್ಯಾಸ್ ಸಿಲಿಂಡರ್ ಲಭ್ಯ
ಕಳೆದ ಕೆಲ ದಿನಗಳ ಹಿಂದೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿತ್ತು. ಬರೋಬ್ಬರಿ 198 ರೂಪಾಯಿ ಇಳಿಕೆಯಾಗಿತ್ತು. ಇದರಿಂದಾಗಿ ಜನಸಾಮಾನ್ಯರಿಗೆ ಕೊಂಚ ನೆಮ್ಮದಿ ದೊರೆತಂತಾಗಿತ್ತು. ಆದರೆ ಇದೀಗ ಮತ್ತೆ ದರ ಹೆಚ್ಚಳವಾಗಿದ್ದು, ಸಾರ್ವಜನಿಕರಿಗೆ ನುಂಗಲಾರದ ಬಿಸಿ ತುಪ್ಪದಂತೆ ಅನುಭವವಾಗುತ್ತಿದೆ.
ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗೆ ರೂ. 50 ಹೆಚ್ಚಳ ಮಾಡಿದ್ದು, ಈ ಪರಿಷ್ಕರಣೆ ದರ ಜುಲೈ 6ರ ಬೆಳಗ್ಗೆಯಿಂದ ಜಾರಿಗೆ ಬರಲಿದೆ. ದೆಹಲಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 1053 ರೂ.ಗೆ ಏರಿಕೆಯಾಗಿದೆ. ಇದಲ್ಲದೇ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಕೋಲ್ಕತ್ತಾದಲ್ಲಿ 1079 ರೂ., ಮುಂಬೈನಲ್ಲಿ 1052.50 ರೂ., ಚೆನ್ನೈನಲ್ಲಿ 1068.50 ರೂ.ಗೆ ಏರಿಕೆಯಾಗಿದೆ.
ಇದನ್ನೂ ಓದಿ: Cholesterol Control Tips: ಈ ಬೀಜಗಳ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತೆ
ಕಳೆದ ಕೆಲ ದಿನಗಳ ಹಿಂದೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿತ್ತು. ಬರೋಬ್ಬರಿ 198 ರೂಪಾಯಿ ಇಳಿಕೆಯಾಗಿತ್ತು. ಇದರಿಂದಾಗಿ ಜನಸಾಮಾನ್ಯರಿಗೆ ಕೊಂಚ ನೆಮ್ಮದಿ ದೊರೆತಂತಾಗಿತ್ತು. ಆದರೆ ಇದೀಗ ಮತ್ತೆ ದರ ಹೆಚ್ಚಳವಾಗಿದ್ದು, ಸಾರ್ವಜನಿಕರಿಗೆ ನುಂಗಲಾರದ ಬಿಸಿ ತುಪ್ಪದಂತೆ ಅನುಭವವಾಗುತ್ತಿದೆ.
ಜುಲೈ 1 ರಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 198 ರೂಪಾಯಿಗಳಷ್ಟು ಅಗ್ಗವಾಗಿತ್ತು, ಇದೀಗ 50 ರೂ. ಮತ್ತೆ ಹೆಚ್ಚಳವಾಗಿದೆ.
ಇದನ್ನೂ ಓದಿ: Aadhaar Update: ಆಧಾರ್‌ಗೆ ಸಂಬಂಧಿಸಿದ ವಂಚನೆ ತಡೆಯಲು ಯುಐಡಿಎಐ ಮಾಸ್ಟರ್ ಪ್ಲಾನ್
ಪ್ರತಿ ಸಿಲಿಂಡರ್‌ಗೆ 200 ರೂ.ಗಳ ಸಬ್ಸಿಡಿ:
ಹಣದುಬ್ಬರದಿಂದ ಜನರಿಗೆ ಮುಕ್ತಿ ನೀಡುವ ಸಲುವಾಗಿ ಉಜ್ವಲ ಯೋಜನೆಯಡಿ ಪ್ರತಿ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಈ ಸಬ್ಸಿಡಿ ವಾರ್ಷಿಕವಾಗಿ 12 ಸಿಲಿಂಡರ್‌ಗಳವರೆಗೆ ಮಾತ್ರ ಲಭ್ಯವಿರುತ್ತದೆ. ಸರ್ಕಾರದ ಈ ಕ್ರಮದಿಂದ 9 ಕೋಟಿಗೂ ಹೆಚ್ಚು ಗ್ರಾಹಕರು ಪ್ರಯೋಜನ ಪಡೆದಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ