Pension: ಈ ಜನರ ಪೆನ್ಷನ್ ಅನ್ನು ರೂ.10,000 ರಿಂದ ರೂ.20,000ಕ್ಕೆ ಹೆಚ್ಚಿಸಿದ ಸರ್ಕಾರ

Pension News: ಮಹಾರಾಷ್ಟ್ರದ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ದ್ವಿಗುಣಗೊಳಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಸುಮಾರು 6 ಸಾವಿರಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರಿಗೆ ಭಾರಿ ಲಾಭ ಸಿಗಲಿದೆ.  

Written by - Nitin Tabib | Last Updated : Nov 18, 2022, 04:32 PM IST
  • ದೇಶಕ್ಕೆ ಸ್ವಾತಂತ್ರ್ಯ ನೀಡಿದ ವೀರಯೋಧರು
  • ಸರ್ಕಾರದಿಂದ ಧನಸಹಾಯ ಪಡೆದು ಬದುಕು ಕಟ್ಟಿಕೊಳ್ಳುತ್ತಾರೆ.
  • ಈ ಆರ್ಥಿಕ ಸಹಾಯವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರಿಂದಲೂ ನೀಡಲಾಗುತ್ತದೆ.
Pension: ಈ ಜನರ ಪೆನ್ಷನ್ ಅನ್ನು ರೂ.10,000 ರಿಂದ ರೂ.20,000ಕ್ಕೆ ಹೆಚ್ಚಿಸಿದ ಸರ್ಕಾರ title=
Pension Latest News

Pension Latest News: ನಿಮ್ಮ ಮನೆಯಲ್ಲಿಯೂ ಕೂಡ ಸ್ವಾತಂತ್ರ್ಯ ಹೋರಾಟಗಾರರಿದ್ದರೆ, ಈ ವಿಷಯ ಇಂದಿಗೂ ಕೂಡ ನಿಮ್ಮ ಪಾಲಿಗೆ ಹೆಮ್ಮೆಯ ವಿಷಯವಾಗಿರಬಹುದು. ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ಮಾತ್ರವಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ. ಇದೀಗ ದೇಶದ ಸ್ವಾತಂತ್ರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಸಂತಸದ ಸುದ್ದಿಯೊಂದನ್ನು ನೀಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಣೆ
ಮಹಾರಾಷ್ಟ್ರದ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ದ್ವಿಗುಣಗೊಳಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಸರ್ಕಾರದ ಹೊಸ ಘೋಷಣೆ ಪ್ರಕಾರ ಇನ್ಮುಂದೆ ಸ್ವಾತಂತ್ರ್ಯ ಹೋರಾಟಗಾರರಿಗೆ 20 ಸಾವಿರ ಪಿಂಚಣಿ ನೀಡಲಾಗುವುದು ಎನ್ನಲಾಗಿದೆ. ಮೊದಲ ರಾಜ್ಯದಲ್ಲಿ ಈ ಪಿಂಚಣಿ ಮೊತ್ತ ರೂ.10,000 ಆಗಿತ್ತು. ಸ್ವಾತಂತ್ರ್ಯ ಹೋರಾಟಗಾರರಿಗೆಂದೇ ಮಾಡಲಾಗಿರುವ ಈ ನಿರ್ಧಾರವನ್ನು ರಾಜ್ಯದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕಟಿಸಿದ್ದಾರೆ.

ಇದನ್ನೂ ಓದಿ-ನವೆಂಬರ್ 30 ರೊಳಗೆ ರೈತರ ಖಾತೆಗೆ ಎರಡು ಸಾವಿರ ರೂಪಾಯಿ.! ನಿಮ್ಮ ಖಾತೆಯನ್ನೊಮ್ಮೆ ಚೆಕ್ ಮಾಡಿಕೊಳ್ಳಿ

ಮಹಾರಾಷ್ಟ್ರದಲ್ಲಿ ಒಟ್ಟು 6,299 ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ
ದೇಶಕ್ಕೆ ಸ್ವಾತಂತ್ರ್ಯ ನೀಡಿದ ವೀರಯೋಧರು ಸರ್ಕಾರದಿಂದ ಧನಸಹಾಯ ಪಡೆದು ಬದುಕು ಕಟ್ಟಿಕೊಳ್ಳುತ್ತಾರೆ. ಈ ಆರ್ಥಿಕ ಸಹಾಯವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರಿಂದಲೂ ನೀಡಲಾಗುತ್ತದೆ. ಮಹಾರಾಷ್ಟ್ರದ 6,299 ಸ್ವಾತಂತ್ರ್ಯ ಹೋರಾಟಗಾರರಿಗೆ 1947 ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಂಚಣಿ ನೀಡಲಾಗುತ್ತದೆ.

ಇದನ್ನೂ ಓದಿ-Gold Price Today : ಭರ್ಜರಿ ಏರಿಕೆ ಕಂಡ ಚಿನ್ನ.! ಬೆಳ್ಳಿ ಬೆಲೆ ಸ್ಥಿರ

20 ಸಾವಿರ ರೂ.ಗಳಿಗೆ ಪಿಂಚಣಿ ಹೆಚ್ಚಳ
ಇದಲ್ಲದೆ, ಮಹಾರಾಷ್ಟ್ರ ಸರ್ಕಾರವು 1948 ರಲ್ಲಿ ಮರಾಠವಾಡ ವಿಮೋಚನಾ ಚಳುವಳಿ ಮತ್ತು 1961 ರಲ್ಲಿ ಗೋವಾ ವಿಮೋಚನಾ ಚಳವಳಿಯಲ್ಲಿ ಭಾಗವಹಿಸಿದವರಿಗೆ ಪಿಂಚಣಿ ನೀಡುತ್ತದೆ. ಅವರಿಗೆ 1965 ರಿಂದ ಸರ್ಕಾರದಿಂದ ಪಿಂಚಣಿ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ. ಹೀಗಾಗಿ ಇನ್ಮುಂದೆ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರಿಗೆ 10 ಸಾವಿರದ ಬದಲು 20 ಸಾವಿರ ಪಿಂಚಣಿ ಸಿಗಲಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News