government employees retirement age : ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಹುಮುಖ್ಯ ಮಾಹಿತಿಯೊಂದು ಇಲ್ಲಿದೆ.
)
central government employees retirement age : ಕೇಂದ್ರ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸಲು ಯೋಜಿಸುತ್ತಿದೆಯೇ? ಎಂಬ ಮಹತ್ವದ ಪ್ರಶ್ನೆಯೊಂದು ಆಗಾಗ್ಗೆ ಮುನ್ನೆಲೆಗೆ ಬರುತ್ತದೆ. ಕೇಂದ್ರ ಸರ್ಕಾರ ಈ ಬಗ್ಗೆ ಏನಾದರೂ ಯೋಜನೆ ರೂಪಿಸಿದೆಯೇ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಕೇಂದ್ರ ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸಿನಲ್ಲಿ ಏನಾದರೂ ಹೆಚ್ಚು ಕಡಿಮೆ ಮಾಡುವ ಬಗ್ಗೆ ಸರ್ಕಾರ ಯೋಜಿಸಿದೆಯೇ ಎಂಬ ವಿಚಾರ ಅನೇಕ ಬಾರಿ ವೈರಲ್ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸ್ಪಷ್ಟನೆ ಕೂಡ ಸಿಕ್ಕಿದೆ.
ಕೆಲವರ ಪ್ರಕಾರ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸನ್ನು ಕಡಿಮೆ ಮಾಡಬೇಕು. ಮತ್ತೆ ಕೆಲವರ ಪ್ರಕಾರ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸನ್ನು ಹೆಚ್ಚಿಸಬೇಕು. ಆದರೆ ಇದೆರಡ ಬಗ್ಗೆ ಸರ್ಕಾರದ ನಿಲುವೇನು ಎಂಬುದು ಮುಖ್ಯ ವಾಗುತ್ತದೆ. ಇದರ ಜೊತೆಗೆ ನಿವೃತ್ತಿ ವಯಸ್ಸನ್ನು ಬದಲಾಯಿಸುವುದರಿಂದ ಆಗಬಹುದಾದ ಪರಿಣಾಮದ ಬಗ್ಗೆಯೂ ಸರ್ಕಾರ ಯೋಚಿಸಬೇಕಾಗುತ್ತದೆ.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದೇನು?
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಈ ಹಿಂದೆ ನಿವೃತ್ತಿ ವಯಸ್ಸಿನ ಬದಲಾವಣೆ ಕುರಿತಂತೆ ಸ್ಪಷ್ಟನೆ ಕೊಟ್ಟಿದ್ದರು. ಸರ್ಕಾರವು ಪ್ರಸ್ತುತ ಅಂತಹ ಯಾವುದೇ ಯೋಜನೆಗಳನ್ನು ಹೊಂದಿಲ್ಲ ಎಂದು ಮಾಹಿತಿ ನೀಡಿದ್ದರು. ಅಂದರೆ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷವೇ ಆಗಿ ಉಳಿಯುತ್ತದೆ ಎಂಬುದು ಇಲ್ಲಿಗೆ ಸ್ಪಷ್ಟವಾಗಿತ್ತು.
ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು :
ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಬೇರೆ ಬೇರೆ ಆಗಿದೆ. ಕೇಂದ್ರ ಸರ್ಕಾರದ ನೌಕರರ ಮೇಲೆ ಮಾತ್ರ ಕೇಂದ್ರವು ಹಿಡಿತ ಹೊಂದಿದೆ. ರಾಜ್ಯ ಸರ್ಕಾರದ ನೌಕರರ ವಿಷಯವು ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ನೌಕರರ ಮೇಲೆ ಯಾವುದೇ ಹಿಡಿತವನ್ನು ಇಡುವುದಿಲ್ಲ.
ನೌಕರರ ಸಂಘಗಳು ನಿವೃತ್ತಿ ವಯಸ್ಸನ್ನು ಬದಲಾಯಿಸಲು ಒತ್ತಾಯಿಸಿವೆಯೇ?
ಹಲವು ಬಾರಿ ನೌಕರರ ಸಂಘಗಳು ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಅಥವಾ ಕಡಿಮೆ ಮಾಡಲು ಒತ್ತಾಯಿಸುತ್ತಿವೆ ಎಂಬ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಇಲ್ಲಿಯವರೆಗೆ, ರಾಷ್ಟ್ರೀಯ ಮಂಡಳಿಯಿಂದ (ಜಂಟಿ ಸಮಾಲೋಚನಾ ಕಾರ್ಯವಿಧಾನ) ಅಂತಹ ಯಾವುದೇ ಔಪಚಾರಿಕ ಪ್ರಸ್ತಾಪ ಬಂದಿಲ್ಲ ಎಂದು ಸರ್ಕಾರ ಹೇಳಿದೆ.
ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು
ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷ ಮಾತ್ರ. ಆದರೂ ಈ ವಯಸ್ಸು ರಾಜ್ಯಗಳ ವ್ಯಾಪ್ತಿಯಲ್ಲಿ ಬದಲಾಗಬಹುದು.
ಈ ವಿಷಯದ ಬಗ್ಗೆ ವಿವಿಧ ಊಹಾಪೋಹಗಳು ಕೇಳಿಬರುತ್ತಿರುವ ಸಮಯದಲ್ಲಿ ಸರ್ಕಾರದಿಂದ ಈ ಸ್ಪಷ್ಟೀಕರಣ ಬಂದಿದೆ. ಮುಂದಿನ ದಿನಗಳಲ್ಲಿ ನಿವೃತ್ತಿ ವಯಸ್ಸಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.