ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಎಂ.ಬಿ.ಪಾಟೀಲ ವಿಸ್ತೃತ ಚರ್ಚೆ

ಬೆಂಗಳೂರಿನಲ್ಲಿರುವ ಸೆಮಿಕಂಡಕ್ಟರ್ ಆರ್ & ಡಿ ಪಾರ್ಕ್ ನಲ್ಲಿ ನೂತನ ಪ್ರಯೋಗಾಲಯಗಳಲ್ಲಿ ರಚನಾತ್ಮಕ ಹೂಡಿಕೆ ಮಾಡುವ ಸಾಧ್ಯತೆಗಳನ್ನು ಪರಿಶೀಲಿಸಲು ಎಲ್ಎಎಂ ರೀಸರ್ಚ್ ಕಂಪನಿಯು ಮುಕ್ತವಾಗಿದೆ. ಇದನ್ನು ಸರಕಾರದ ಪರವಾಗಿ ಸ್ವಾಗತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Written by - Yashaswini V | Last Updated : Oct 6, 2023, 04:38 PM IST
  • ಸೆಮಿಕಂಡಕ್ಟರ್ ಉತ್ಪನ್ನಗಳು ಮತ್ತು ಸೇವೆಗಳಿಗೆ ಹೆಸರಾಗಿರುವ ಎಲ್ಎಎಂ ರೀಸರ್ಚ್ ಕಂಪನಿಯು ಈ ಕ್ಷೇತ್ರದಲ್ಲಿ 23 ವರ್ಷಗಳ ಅನುಭವ ಹೊಂದಿದ್ದು, ಬೆಂಗಳೂರಿನಲ್ಲೇ ನೆಲೆ ಹೊಂದಿದೆ.
  • ಮುಂದಿನ ತಲೆಮಾರುಗಳಿಗೆ ಅಗತ್ಯವಾದ ಪರಿಣತ ಎಂಜಿನಿಯರುಗಳನ್ನು ಸಜ್ಜುಗೊಳಿಸಲು ಉತ್ಸುಕವಾಗಿರುವ ಕಂಪನಿಯು ಕರ್ನಾಟಕ ಸರಕಾರದೊಂದಿಗೆ ಸಹಭಾಗಿತ್ವವನ್ನು ಬಯಸಿದೆ - ಸಚಿವ ಎಂ.ಬಿ. ಪಾಟೀಲ
ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಎಂ.ಬಿ.ಪಾಟೀಲ ವಿಸ್ತೃತ ಚರ್ಚೆ title=

ಸ್ಯಾನ್ ಫ್ರಾನ್ಸಿಸ್ಕೊ: ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಗುರುವಾರದಂದು ಇಲ್ಲಿ ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ವಿಸ್ತೃತ ಮಾತುಕತೆ ನಡೆಸಿದ್ದಾರೆ. ಇವತ್ತಿನ ಸಭೆಯಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಸಾಥ್ ನೀಡಿದರು. ಈ ಮೂರೂ ಸಂಸ್ಥೆಗಳ ಉನ್ನತಾಧಿಕಾರಿಗಳ ಜತೆ ವಿಸ್ತೃತ ಚರ್ಚೆ ನಡೆಸಿದ್ದಲ್ಲದೆ ರಾಜ್ಯದಲ್ಲಿ ಬಂಡವಾಳ ಹೂಡಲು ಇರುವ ಪೂರಕ ವಾತಾವರಣದ ಬಗ್ಗೆ ವಿವರಿಸಿದರು.

ಸೆಮಿಕಂಡಕ್ಟರ್ ಉತ್ಪನ್ನಗಳು ಮತ್ತು ಸೇವೆಗಳಿಗೆ ಹೆಸರಾಗಿರುವ ಎಲ್ಎಎಂ ರೀಸರ್ಚ್ ಕಂಪನಿಯು ಈ ಕ್ಷೇತ್ರದಲ್ಲಿ 23 ವರ್ಷಗಳ ಅನುಭವ ಹೊಂದಿದ್ದು, ಬೆಂಗಳೂರಿನಲ್ಲೇ ನೆಲೆ ಹೊಂದಿದೆ. ಮುಂದಿನ ತಲೆಮಾರುಗಳಿಗೆ ಅಗತ್ಯವಾದ ಪರಿಣತ ಎಂಜಿನಿಯರುಗಳನ್ನು ಸಜ್ಜುಗೊಳಿಸಲು ಉತ್ಸುಕವಾಗಿರುವ ಕಂಪನಿಯು ಕರ್ನಾಟಕ ಸರಕಾರದೊಂದಿಗೆ ಸಹಭಾಗಿತ್ವವನ್ನು ಬಯಸಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಇದಲ್ಲದೆ, ಬೆಂಗಳೂರಿನಲ್ಲಿರುವ ಸೆಮಿಕಂಡಕ್ಟರ್ ಆರ್ & ಡಿ ಪಾರ್ಕ್ ನಲ್ಲಿ ನೂತನ ಪ್ರಯೋಗಾಲಯಗಳಲ್ಲಿ ರಚನಾತ್ಮಕ ಹೂಡಿಕೆ ಮಾಡುವ ಸಾಧ್ಯತೆಗಳನ್ನು ಪರಿಶೀಲಿಸಲು ಎಲ್ಎಎಂ ರೀಸರ್ಚ್ ಕಂಪನಿಯು ಮುಕ್ತವಾಗಿದೆ. ಇದನ್ನು ಸರಕಾರದ ಪರವಾಗಿ ಸ್ವಾಗತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ- ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿ ಹೆಚ್ಚಳ ! ಶೇ.44ರಷ್ಟು ಏರಿಕೆಯಾಗುವುದು ಸ್ಯಾಲರಿ

ಬಾಹ್ಯಾಕಾಶ ಸಂಶೋಧನೆ ಕ್ಷೇತ್ರದಲ್ಲಿ ಹೆಸರಾಗಿರುವ ಲಿಯೋ (ಲೋ ಅರ್ತ್ ಆರ್ಬಿಟ್) ಲ್ಯಾಬ್, ಭಾರತದಲ್ಲಿ ರೆಡಾರುಗಳನ್ನು ಸ್ಥಾಪಿಸಲು ಮುಂದಾಗುವ ಖಾಸಗಿ ಕ್ಷೇತ್ರದವರಿಗೆ ಸರಕಾರವು ನೀಡುವ ಅನುಮೋದನೆಗಳನ್ನು ಕುರಿತು ಅಧ್ಯಯನ ನಡೆಸುವ ಬಗ್ಗೆ ಚರ್ಚಿಸಿದೆ. ಜತೆಗೆ ರಾಜ್ಯದ ಬಾಹ್ಯಾಕಾಶ ಕಾರ್ಯಪರಿಸರದಲ್ಲಿ ಅದು ನೆಲೆಯೂರಲು ಆಸಕ್ತಿ ತಾಳಿದೆ. ಇದಕ್ಕಾಗಿ ನಮ್ಮಲ್ಲಿ `ಸ್ಪೇಸ್ ಟೆಕ್ ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪನೆಗೆ ಕೈ ಜೋಡಿಸಲು ಅದು ಒಲವು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಗ್ ಡೇಟಾ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಟೆಕಾಂಡ್ ಕಂಪನಿಯ ಪ್ರತಿನಿಧಿಗಳು, ಬೆಂಗಳೂರಿನಲ್ಲಿ ತಮ್ಮ ಆರ್ & ಡಿ ಕೇಂದ್ರ ತೆರೆಯುವ ಬಗ್ಗೆ ಚರ್ಚಿಸಿದ್ದಾರೆ. ಇದು ಸಾಧ್ಯವಾದರೆ ರಾಜ್ಯದಲ್ಲಿ ಅಸೆಂಬ್ಲಿಂಗ್ ಮತ್ತು ಹಾರ್ಡ್ ವೇರ್ ಉತ್ಪಾದನೆಯನ್ನು ಆರಂಭಿಸಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಬಿಗ್ ಡೇಟಾದಿಂದ ನಮ್ಮ 2 ಮತ್ತು 3ನೇ ಹಂತದ ನಗರಗಳಿಗೆ ಕೂಡ ಪ್ರಯೋಜನ ಸಿಗಲಿದೆ. ಇ-ಆಡಳಿತದಲ್ಲಿ ಕೂಡ ಅದು ಸರಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದು ಸಚಿವ ಎಂ.ಬಿ. ಪಾಟೀಲ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ- ಲೋನ್ ಪಡೆದವರಿಗೆ ಸಿಹಿ ಸುದ್ದಿ ಪ್ರಕಟಿಸಿದ ಆರ್‌ಬಿಐ ಗವರ್ನರ್ ! ಇನ್ನು ಇಷ್ಟಾಗಿರಲಿದೆ ನಿಮ್ಮ ಸಾಲದ ಬಡ್ಡಿ

ಮಾತುಕತೆಗಳಲ್ಲಿ ಎಲ್ಎಎಂ ರೀಸರ್ಚ್ ಕಂಪನಿಯ ಉಪಾಧ್ಯಕ್ಷರುಗಳಾದ ರಂಗೇಶ್ ರಾಘವನ್, ಕಾರ್ತಿಕ್ ರಾಮಮೋಹನ್, ಪ್ಯಾಟ್ ಲಾರ್ಡ್, ಲಿಯೋ ಲ್ಯಾಬ್ಸ್ ಕಂಪನಿಯ ಸಂಸ್ಥಾಪಕ ಡ್ಯಾನ್ ಸೀಪರ್ಲಿ, ರಚಿತ್ ಭಾಟಿಯಾ ಮತ್ತು ಟೇಕಾಂಡ್ ಕಂಪನಿಯ ಸಿಇಒ ಸಾಹಿಲ್ ಚಾವ್ಲಾ ಮತ್ತು ಸಹ ಸಂಸ್ಥಾಪಕ ರಮೇಶ್ ಸಿಂಗ್ ಭಾಗವಹಿಸಿದ್ದರು. ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News