8th Pay Commission: 2025ರ ಹೊಸ ವರ್ಷ ಆರಂಭವಾಗುತ್ತಿದ್ದಂತೆ 8ನೇ ವೇತನ ಆಯೋಗವನ್ನು (8th Pay Commission) ಅನುಮೋದಿಸುವ ಮೂಲಕ ಮೋದಿ ಸರ್ಕಾರ (Modi Govt) ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ ನೀಡಿತ್ತು. ಇದೀಗ ಸರ್ಕಾರ ಹಲವು ಭತ್ಯೆಗಳನ್ನು ರದ್ದುಗೊಳಿಸಬಹುದು ಎಂದು ಹೇಳಲಾಗುತ್ತಿದೆ.
ವಾಸ್ತವವಾಗಿ, ಕೇಂದ್ರ ಸರ್ಕಾರವು (Central Govt) 8ನೇ ವೇತನ ಆಯೋಗಕ್ಕೆ ಅನುಮೋದನೆ ನೀಡಿದಾಗಿನಿಂದ ಫಿಟ್‌ಮೆಂಟ್ ಅಂಶದಡಿ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ (Govt Employees Salary and Pension) ಹೆಚ್ಚಳದ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಆದರೆ, ಗಮನಿಸಬೇಕಾದ ಪ್ರಮುಖ ಅಂಶವೆಂದರೆ ವೇತನ ಆಯೋಗವು ಸಂಬಳ, ಪಿಂಚಣಿ ಹೆಚ್ಚಿಸುವುದು ಮಾತ್ರವಲ್ಲದೆ ಸರ್ಕಾರಿ ನೌಕರರಿಗೆ ನೀಡುವ ಎಲ್ಲಾ ಸೌಲಭ್ಯಗಳು ಹಾಗೂ ಭತ್ಯೆಗಳ ಬಗ್ಗೆಯೂ ಕೂಲಂಕುಷವಾಗಿ ಮೌಲ್ಯಮಾಪನ ಮಾಡುತ್ತದೆ.
ಇದನ್ನೂ ಓದಿ- PAN Card: ಕೇವಲ 10 ನಿಮಿಷದಲ್ಲಿ ಪ್ಯಾನ್ ಕಾರ್ಡ್ ಪಡೆಯಲು ಇಲ್ಲಿದೆ ಹಂತ-ಹಂತದ ಪ್ರಕ್ರಿಯೆ
ಲಭ್ಯವಿರುವ ಮಾಹಿತಿಗಳ ಪ್ರಕಾರ, ಎಂಟನೇ ವೇತನ ಆಯೋಗದ (Eighth Pay Commission) ಅಡಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಹಳೆಯ ಮತ್ತು ಅನಗತ್ಯ ಭತ್ಯೆಗಳನ್ನು (Allowances) ರದ್ದುಗೊಳಿಸಿ, ಅಗತ್ಯವೆನಿಸಿದರೆ ಹೊಸ ಭತ್ಯೆಗಳನ್ನು ಸೇರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಗಮನಾರ್ಹವಾಗಿ, 7ನೇ ವೇತನ ಆಯೋಗದ (7th Pay Commission) ಅಡಿಯಲ್ಲಿ ಹಿಂದೆ ಜಾರಿಯಲ್ಲಿದ್ದ 196 ಭತ್ಯೆಗಳಲ್ಲಿ ಕೆಲವು ಭತ್ಯೆಗಳನ್ನು ರದ್ದುಗೊಳಿಸಲಾಯಿತು. ಕೆಲವನ್ನು ಇತರ ಭತ್ಯೆಗಳೊಂದಿಗೆ ವಿಲೀನಗೊಳಿಸಲಾಗಿತ್ತು. ಈ ಮೂಲಕ 101 ಭತ್ಯೆಗಳಿಗೆ ಕತ್ತರಿ ಹಾಕಿ ಕೇವಲ 95 ಭತ್ಯೆಗಳನ್ನು ಏಳನೇ ವೇತನ ಆಯೋಗದಲ್ಲಿ ಪಟ್ಟಿಮಾಡಲಾಗಿದೆ.
ಇದೀಗ ಮುಂದಿನ ತಿಂಗಳು 2025ರ ಏಪ್ರಿಲ್‌ನಲ್ಲಿ 8ನೇ ವೇತನ ಆಯೋಗ ರಚನೆಯಾಗುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರವು 8ನೇ ವೇತನ ಆಯೋಗದ ಅಧ್ಯಕ್ಷರು ಮತ್ತು ಇತರ ಇಬ್ಬರು ಸದಸ್ಯರ ಹೆಸರುಗಳನ್ನು ಘೋಷಿಸುವ ನಿರೀಕ್ಷೆಯಿದೆ. ಆಯೋಗವು ಕೇಂದ್ರ ಸರ್ಕಾರಿ ನೌಕರರ ಪ್ರತಿನಿಧಿಗಳು, ಆರ್ಥಿಕ ತಜ್ಞರು ಹಾಗೂ ಇತರ ಪ್ರಮುಖ ವ್ಯಕ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಶಿಫಾರಸುಗಳನ್ನು ಸಿದ್ದಪಡಿಸುತ್ತದೆ. ಈ ಸಮಯದಲ್ಲಿ ಯಾವ್ಯಾವ ಭತ್ಯೆಗಳು ರದ್ದಾಗಲಿವೆ, ಯಾವ ಹೊಸ ಭತ್ಯೆಗಳನ್ನು ಸೇರಿಸಲಾಗುತ್ತದೆ. ಇವುಗಳು ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಯಾವ ರೀತಿಯ ಅನುಕೂಲತೆಗಳನ್ನು ಕಲ್ಪಿಸಲಿವೆ ಎಂಬುದನ್ನೂ ಕಾದುನೋಡಬೇಕಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









