2.5 ರಿಂದ 3 ಲಕ್ಷದವರೆಗೆ ಇರಲಿದೆ ಆದಾಯ ತೆರಿಗೆ ವಿನಾಯಿತಿ.! ಇಲ್ಲಿದೆ ಪಕ್ಕಾ ಮಾಹಿತಿ .!
Income Tax Slab: ಈ ಬಾರಿ ಸರ್ಕಾರವು ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಸರ್ಕಾರ ತೆರಿಗೆ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಬಹುದು ಎಂದು ಅಂದಾಜಿಸಲಾಗಿದೆ.
Income Tax Slab : ನೀವು ತೆರಿಗೆದಾರರಾಗಿದ್ದರೆ ನಿಮಗೊಂದು ಒಳ್ಳೆಯ ಸುದ್ದಿ ಇದೆ. ಬಜೆಟ್ ಮಂಡನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಮಧ್ಯೆ, ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಸರ್ಕಾರವು ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು ಎನ್ನಲಾಗಿದೆ. ಪ್ರಸ್ತುತ, 2.5 ಲಕ್ಷದವರೆಗಿನ ಆದಾಯವು ತೆರಿಗೆ ಮುಕ್ತವಾಗಿದೆ. ಆದರೆ ಅದನ್ನು 3 ಲಕ್ಷಕ್ಕೆ ಹೆಚ್ಚಿಸಬಹುದು ಎನ್ನಲಾಗಿದೆ. ಹೀಗಾದರೆ ಮಧ್ಯಮ ವರ್ಗದ ಜನರಿಗೆ ಪರಿಹಾರ ಸಿಗಲಿದೆ.
3 ಲಕ್ಷದವರೆಗಿನ ಆದಾಯದ ಮೇಲೆ ಇರಬಹುದು ತೆರಿಗೆ ವಿನಾಯಿತಿ :
ಈ ಬಾರಿ ಸರ್ಕಾರವು ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಸರ್ಕಾರ ತೆರಿಗೆ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಬಹುದು ಎಂದು ಅಂದಾಜಿಸಲಾಗಿದೆ. ಅಂದರೆ ಈ ಬಾರಿ ಮೊದಲಿಗಿಂತ ಕಡಿಮೆ ತೆರಿಗೆ ಪಾವತಿಸುವಂತಾಗುತ್ತದೆ.
ಇದನ್ನೂ ಓದಿ : ಮಾರ್ಚ್ ಅಂತ್ಯದವರೆಗೆ ಈ ಕೆಲಸ ಮಾಡದಿದ್ದರೆ ನಿಷ್ಕ್ರಿಯಗೊಳ್ಳಲಿದೆ ನಿಮ್ಮ ಪ್ಯಾನ್ ಕಾರ್ಡ್
9 ವರ್ಷಗಳ ಹಿಂದೆ ಮಿತಿಯನ್ನು ಹೆಚ್ಚಿಸಲಾಗಿತ್ತು:
ಆದಾಯ ತೆರಿಗೆ ಮೇಲಿನ ವಿನಾಯಿತಿಯನ್ನು ಕೊನೆಯ ಬಾರಿಗೆ 2014 ರಲ್ಲಿ ಹೆಚ್ಚಿಸಲಾಗಿತ್ತು. ಆಗ ಸರ್ಕಾರ ಈ ಮಿತಿಯನ್ನು 2 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಿಸಿತ್ತು. ಕಳೆದ 9 ವರ್ಷಗಳಿಂದ ಈ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇದು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿರುವುದರಿಂದ ಈ ಬಾರಿ ಸರ್ಕಾರ ಹಲವು ದೊಡ್ಡ ಘೋಷಣೆಗಳನ್ನು ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.
ಹಿರಿಯ ನಾಗರಿಕರಿಗೆ 3 ಲಕ್ಷ ರೂ. ಮಿತಿ :
2.5 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಪಾವತಿಸಬೇಕಾಗಿಲ್ಲ. ಈ ಬಜೆಟ್‌ನಲ್ಲಿ ಸರ್ಕಾರವು ಈ ಮಿತಿಯನ್ನು 50,000 ರೂ.ಗಳಷ್ಟು ಹೆಚ್ಚಿಸಬಹುದು ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ, ನಾವು ಹಿರಿಯ ನಾಗರಿಕರ ಆದಾಯ ತೆರಿಗೆ ಮಿತಿಯನ್ನು 3 ಲಕ್ಷ ರೂಪಾಯಿಗಳಿಗೆ ಏರಿಸಲಾಗಿದೆ.
ಇದನ್ನೂ ಓದಿ : Car Sales: ಡಿಸೆಂಬರ್‌ನಲ್ಲಿ ಅತಿಹೆಚ್ಚು ಮಾರಾಟವಾದ ಕಾರು ಇದೇ ನೋಡಿ
ಈಗ ಆದಾಯ ತೆರಿಗೆ ಸ್ಲ್ಯಾಬ್ :
2.5 ಲಕ್ಷ ದವರೆಗಿನ ಆದಾಯ - ತೆರಿಗೆ ಮುಕ್ತ
2.5 ರಿಂದ 5 ಲಕ್ಷ ವಾರ್ಷಿಕ ಆದಾಯಕ್ಕೆ - 5% ತೆರಿಗೆ
5 ರಿಂದ 10 ಲಕ್ಷ ವಾರ್ಷಿಕ ಆದಾಯಕ್ಕೆ - 20% ತೆರಿಗೆ
10 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯಕ್ಕೆ - 30% ತೆರಿಗೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.