Toll Tax Booth : ವಾಹನ ಸವಾರರ ಗಮನಕ್ಕೆ : 6 ತಿಂಗಳಲ್ಲಿ ಟೋಲ್ ಬೂತ್ ತೆರವು

ದೇಶದ ಹೆದ್ದಾರಿಗಳಲ್ಲಿ ಅಸ್ತಿತ್ವದಲ್ಲಿರುವ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿ ಸರ್ಕಾರವು ಮುಂದಿನ ಆರು ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಮತ್ತು ಇತರ ತಂತ್ರಜ್ಞಾನವನ್ನು ಪರಿಚಯಿಸಲಿದೆಈ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Written by - Channabasava A Kashinakunti | Last Updated : Mar 25, 2023, 10:17 AM IST
  • ಹೆದ್ದಾರಿಯಲ್ಲಿ ಟೋಲ್ ಪ್ಲಾಜಾದಲ್ಲಿ ನಿಲ್ಲುವುದುದಕ್ಕೆ ಜನ ಬೇಸತ್ತಿದ್ದಾರೆ
  • ಹೆದ್ದಾರಿಗಳಲ್ಲಿನ ಟ್ರಾಫಿಕ್ ಜಾಮ್‌..
  • ಟೆಸ್ಟಿಂಗ್ ಕಾರ್ಯನಿರ್ವಹಿಸುತ್ತಿದೆ
Toll Tax Booth : ವಾಹನ ಸವಾರರ ಗಮನಕ್ಕೆ : 6 ತಿಂಗಳಲ್ಲಿ ಟೋಲ್ ಬೂತ್ ತೆರವು title=

GPS Based Toll System : ಹೆದ್ದಾರಿಯಲ್ಲಿ ಟೋಲ್ ಪ್ಲಾಜಾದಲ್ಲಿ ನಿಲ್ಲುವುದುದಕ್ಕೆ ಜನ ಬೇಸತ್ತಿದ್ದಾರೆ. ಇದಕ್ಕೆ, ಟೋಲ್ ಪ್ಲಾಜಾದಲ್ಲಿ ತೆಗೆದುಕೊಳ್ಳುವ ಸರಾಸರಿ ಸಮಯವನ್ನು ಕಡಿಮೆ ಮಾಡಲು ಸರ್ಕಾರವು ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ. ದೇಶದ ಹೆದ್ದಾರಿಗಳಲ್ಲಿ ಅಸ್ತಿತ್ವದಲ್ಲಿರುವ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿ ಸರ್ಕಾರವು ಮುಂದಿನ ಆರು ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಮತ್ತು ಇತರ ತಂತ್ರಜ್ಞಾನವನ್ನು ಪರಿಚಯಿಸಲಿದೆಈ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಹೆದ್ದಾರಿಗಳಲ್ಲಿನ ಟ್ರಾಫಿಕ್ ಜಾಮ್‌..

ಹೆದ್ದಾರಿಗಳಲ್ಲಿ ವಾಹನಗಳನ್ನು ಜಾಮ್‌ನಿಂದ ರಕ್ಷಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಕಾರ್ಯಕ್ರಮದಲ್ಲಿ ಗಡ್ಕರಿ ಮಾತನಾಡಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರಸ್ತುತ 40,000 ಕೋಟಿ ರೂಪಾಯಿಗಳ ಟೋಲ್ ಆದಾಯವನ್ನು ಹೊಂದಿದೆ. ಇನ್ನೆರಡು ಮೂರು ವರ್ಷಗಳಲ್ಲಿ ಇದು 1.40 ಲಕ್ಷ ಕೋಟಿಗೆ ಏರಿಕೆಯಾಗಲಿದೆ. ದೇಶದ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಲು ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯಂತಹ ತಂತ್ರಜ್ಞಾನವನ್ನು ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದರು. ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನ ತರುತ್ತೇವೆ.

ಇದನ್ನೂ ಓದಿ : PMUY: ಉಜ್ವಲ ಯೋಜನೆಯ 9 ಕೋಟಿ ಫಲಾನುಭವಿಗಳಿಗೆ ಮೋದಿ ಸರ್ಕಾರದಿಂದ ಬೊಂಬಾಟ್ ಗಿಫ್ಟ್! ಏನೆಂದು ಈಗಲೇ ತಿಳಿದುಕೊಳ್ಳಿ

ಟೆಸ್ಟಿಂಗ್ ಕಾರ್ಯನಿರ್ವಹಿಸುತ್ತಿದೆ

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ವಾಹನಗಳನ್ನು ನಿಲ್ಲಿಸದೆಯೇ ಟೋಲ್ ಸಂಗ್ರಹಕ್ಕಾಗಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಸಿಸ್ಟಮ್ (ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾ) ಗಾಗಿ ಪ್ರಾಯೋಗಿಕ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. 2018-19 ರ ಆರ್ಥಿಕ ವರ್ಷದಲ್ಲಿ, ಟೋಲ್ ಪ್ಲಾಜಾದಲ್ಲಿ ವಾಹನದ ಸರಾಸರಿ ನಿಲುಗಡೆ ಸಮಯ 8 ನಿಮಿಷಗಳು. 2020-21 ಮತ್ತು 2021-22ರಲ್ಲಿ ಫಾಸ್ಟ್‌ಟ್ಯಾಗ್ ಪರಿಚಯಿಸಿದ ನಂತರ, ಟೋಲ್ ಪ್ಲಾಜಾದಲ್ಲಿ ವಾಹನಗಳ ಸರಾಸರಿ ನಿಲುಗಡೆ ಸಮಯ 47 ಸೆಕೆಂಡುಗಳಿಗೆ ಇಳಿದಿದೆ.

ಇದನ್ನೂ ಓದಿ : DA Hike Approved: ಸರ್ಕಾರಿ ನೌಕರರಿಗೆ ಭಾರಿ ಸಂತಸದ ಸುದ್ದಿ, ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಸಂಪುಟ ಅನುಮೋದನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News