Passport in Post Office: ಈಗ ನಿಮ್ಮ ಹತ್ತಿರದ ಅಂಚೆ ಕಚೇರಿಯಲ್ಲೂ ಪಾಸ್‌ಪೋರ್ಟ್ ಲಭ್ಯ

Passport in Post Office: ಸಾಮಾನ್ಯವಾಗಿ ಪಾಸ್‌ಪೋರ್ಟ್ ಪಡೆಯಲು ಪಾಸ್ಪೋರ್ಟ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಬೇಕಾಗುತ್ತದೆ. ಆದರೆ ಪಾಸ್ಪೋರ್ಟ್ ಸೇವಾ ಕೇಂದ್ರಗಳು ದೂರವಿದ್ದಾಗ ಅಲ್ಲಿಗೆ ತಲುಪಲು ಸಮಯ ತೆಗೆದುಕೊಳ್ಳುತ್ತದೆ. ಜೊತೆಗೆ ಜನರು ದೀರ್ಘ ಸಾಲುಗಳಲ್ಲಿ ನಿಂತು ತಮ್ಮ ಸಮಯಕ್ಕಾಗಿ ಕಾಯಬೇಕಾಗುತ್ತದೆ. ಆದರೆ ಇನ್ನುಮುಂದೆ ಈ ತೊಂದರೆ ಇರುವುದಿಲ್ಲ.

Written by - Yashaswini V | Last Updated : Jul 26, 2021, 08:59 AM IST
  • ಈಗ ನೀವು ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡುವ ಮೂಲಕ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಬಹುದು
  • ಪಾಸ್‌ಪೋರ್ಟ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
  • ಅಂಚೆ ಕಚೇರಿಯಲ್ಲಿಯೇ ಪಾಸ್‌ಪೋರ್ಟ್‌ ಪರಿಶೀಲನೆ ನಡೆಯಲಿದೆ
Passport in Post Office: ಈಗ ನಿಮ್ಮ ಹತ್ತಿರದ ಅಂಚೆ ಕಚೇರಿಯಲ್ಲೂ ಪಾಸ್‌ಪೋರ್ಟ್ ಲಭ್ಯ title=
Passport In Post Office

ನವದೆಹಲಿ: Passport in Post Office- ನೀವು ಪಾಸ್‌ಪೋರ್ಟ್ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ಇನ್ನು ಮುಂದೆ ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಾದ ಅಗತ್ಯವಿಲ್ಲ. ಇದೀಗ ನೀವು ನಿಮ್ಮ ಹತ್ತಿರದ ಅಂಚೆ ಕಛೇರಿಯಿಂದಲೂ ಪಾಸ್‌ಪೋರ್ಟ್ ಪಡೆಯಬಹುದಾಗಿದೆ.  ಇಂಡಿಯಾ ಪೋಸ್ಟ್ (India Post) ಈಗ ದೇಶದ ಅನೇಕ ಅಂಚೆ ಕಚೇರಿಗಳಲ್ಲಿ ಪಾಸ್‌ಪೋರ್ಟ್ ನೋಂದಣಿ ಮತ್ತು ಪಾಸ್‌ಪೋರ್ಟ್ ಅರ್ಜಿಯಂತಹ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದಕ್ಕಾಗಿ, ನೀವು ಅಂಚೆ ಕಚೇರಿಯ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ) ಕೌಂಟರ್‌ಗಳಿಗೆ ಹೋಗಬೇಕಾಗುತ್ತದೆ. 

ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್ ಮಾಡಲಾಗುವುದು:
ಈ ಕುರಿತಂತೆ ಇಂಡಿಯಾ ಪೋಸ್ಟ್ (India Post) ಟ್ವೀಟ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದೆ. ಅದರಲ್ಲಿ ಈಗ ಪೋಸ್ಟ್ ಆಫೀಸ್ನ ಸಿಎಸ್ಸಿ ಕೌಂಟರ್‌ನಲ್ಲಿ ಪಾಸ್‌ಪೋರ್ಟ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ನೋಂದಾಯಿಸುವುದು ಸುಲಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ  ಎಂದು ಬರೆಯಲಾಗಿದೆ.

ಇದನ್ನೂ ಓದಿ-  Indian Railways : ರೈಲು ಟಿಕೆಟ್ ಬುಕ್ ಮಾಡಲು ಆಧಾರ್ ಕಾರ್ಡ್, ಪಾಸ್ ಪೋರ್ಟ್ ಕಡ್ಡಾಯ!

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಮತ್ತು ಅಂಚೆ ಕಚೇರಿಗೆ ಭೇಟಿ ನೀಡಿ:
ನೀವು ಈಗಾಗಲೇ ಅನೇಕ ಅಂಚೆ ಕಚೇರಿಗಳಲ್ಲಿ ಅಸ್ತಿತ್ವದಲ್ಲಿರುವ ಪಾಸ್‌ಪೋರ್ಟ್ (Passport) ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಈಗ ಅಂಚೆ ಕಚೇರಿಗಳಲ್ಲಿ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ನಂತರ, ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳ ಉಪಯುಕ್ತತೆ ಮತ್ತಷ್ಟು ಹೆಚ್ಚಾಗುತ್ತದೆ. ಇಲ್ಲಿಯವರೆಗೆ, ನೀವು ಪಾಸ್ಪೋರ್ಟ್ ಪಡೆಯಲು ಪಾಸ್ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಾಗಿತ್ತು, ಆದರೆ ಈಗ ನಿಮ್ಮ ಕೆಲಸವನ್ನು ಹತ್ತಿರದ ಅಂಚೆ ಕಚೇರಿಯಲ್ಲಿ ಮಾಡಲಾಗುವುದು, ಅಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರವು ಇರುತ್ತದೆ.

ಇದನ್ನೂ ಓದಿ- Passport: ಪಾಸ್‌ಪೋರ್ಟ್ ಮಾಡಿಸಲು ಬೇಕಾಗುವ ಅಗತ್ಯ ದಾಖಲೆಗಳಿವು

ಅಂಚೆ ಕಚೇರಿಯಲ್ಲಿಯೇ ಪರಿಶೀಲನೆ ನಡೆಯಲಿದೆ:
Passportindia.gov.in ಪ್ರಕಾರ, ಪಾಸ್ಪೋರ್ಟ್ ಸೇವಾ ಕೇಂದ್ರ ಮತ್ತು ಪೋಸ್ಟ್ ಆಫೀಸ್ ಪಾಸ್ಪೋರ್ಟ್ ಸೇವಾ ಕೇಂದ್ರವು ಪಾಸ್ಪೋರ್ಟ್ ಕಚೇರಿಯ ಶಾಖೆಗಳಾಗಿವೆ. ಈ ಕೇಂದ್ರಗಳು ಪಾಸ್‌ಪೋರ್ಟ್ ವಿತರಣೆಗೆ ಟೋಕನ್‌ನಿಂದ ಅರ್ಜಿಯವರೆಗೆ ಕಾರ್ಯನಿರ್ವಹಿಸುತ್ತವೆ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಪಾಸ್‌ಪೋರ್ಟ್‌ಗೆ ನೋಂದಾಯಿಸಿಕೊಳ್ಳಬೇಕು ಮತ್ತು ಅರ್ಜಿ ಸಲ್ಲಿಸಬೇಕಾಗುತ್ತದೆ. ನಿಮಗೆ ನೀಡಲಾದ ಸಮಯದಲ್ಲಿ  ನೀವು ಪಾಸ್‌ಪೋರ್ಟ್ ಸೇವಾ ಕೇಂದ್ರದ ಅಂಚೆ ಕಚೇರಿಗೆ ರಶೀದಿಯ ಹಾರ್ಡ್ ನಕಲು ಮತ್ತು ಇತರ ಮೂಲ ದಾಖಲೆಗಳೊಂದಿಗೆ ಹೋಗಬೇಕಾಗುತ್ತದೆ. ಇಲ್ಲಿ ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ, ಅದರ ನಂತರ ನಿಮ್ಮ ಪಾಸ್‌ಪೋರ್ಟ್‌ಗೆ ಸಂಬಂಧಿಸಿದ ಮಾಹಿತಿಯನ್ನು ಎಸ್‌ಎಂಎಸ್ ಮೂಲಕ ನೀಡಲಾಗುವುದು, ಈ ಪ್ರಕ್ರಿಯೆಯು ಸುಮಾರು 15 ದಿನಗಳನ್ನು ತೆಗೆದುಕೊಳ್ಳುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News