PAN-Aadhaar Card Update : ಪ್ಯಾನ್ ಮತ್ತು ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿಯಿದೆ. ಇತ್ತೀಚಿನ ದಿನಗಳಲ್ಲಿ ಹಣಕಾಸಿನ ವಹಿವಾಟು ನಡೆಸಬೇಕಾದರೆ ಈ ಎರಡೂ ಕಾರ್ಡ್‌ಗಳಿರುವುದು ಅಗತ್ಯ. ಹಾಗಾಗಿ ಈ ಕಾರ್ಡ್ ಗಳಿಗೆ ಸಂಬಂಧಪಟ್ಟಂತೆ ಇರುವ ಪ್ರತಿಯೊಂದು ಅಪ್‌ಡೇಟ್ ಬಗ್ಗೆ ಮಾಹಿತಿ ಇರುವುದು ಅಗತ್ಯವಾಗಿರುತ್ತದೆ.
ಪಾವತಿಸಬೇಕಾಗುತ್ತದೆ ದಂಡ :
ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಹೊಂದಿರುವವರು ತಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ಬಳಿಯಿರುವ ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತದೆ. ಅಮಾನ್ಯಗೊಂಡ ಕಾರ್ಡ್ ಬಳಸಿದರೆ 10,000 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ : Farmers Electricity Bill: ಲಕ್ಷಾಂತರ ರೈತರಿಗೆ ಭಾರಿ ನೆಮ್ಮದಿಯ ಸುದ್ದಿ ಪ್ರಕಟಿಸಿದ ಸರ್ಕಾರ
ಟ್ವೀಟ್ ಮೂಲಕ ಮಾಹಿತಿ ನೀಡಿದ ಆದಾಯ ತೆರಿಗೆ ಇಲಾಖೆ :
ಆಧಾರ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು 2023 ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಈ ಹಿನ್ನೆಲೆಯಲ್ಲಿ ಈ ದಿನದೊಳಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆಯು ತನ್ನ ಅಧಿಕೃತ ಟ್ವೀಟ್‌ನಲ್ಲಿ ತಿಳಿಸಿದೆ. ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದಲ್ಲಿ ಪ್ಯಾನ್ ನಿಷ್ಕ್ರಿಯವಾಗುತ್ತದೆ. ಹಾಗಾಗಿ ತಡ ಮಾಡದೆ ಲಿಂಕ್ ಮಾಡುವಂತೆ ಹೇಳಿದೆ.
ಈ ಎರಡು ಕಾರ್ಡ್‌ಗಳನ್ನು ಲಿಂಕ್ ಮಾಡಲು, ಮೊದಲು
ಅಧಿಕೃತ ವೆಬ್‌ಸೈಟ್ -www.incometaxindiaefiling.gov.in
ಗೆ ಹೋಗಬೇಕಾಗುತ್ತದೆ.
-ಇಲ್ಲಿ ನೀವು ಲಿಂಕ್ ಆಧಾರ್ ಎನ್ನುವ ಆಯ್ಕೆ ಕಾಣಿಸುತ್ತದೆ.
-ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
-ಇಲ್ಲಿ ಲಾಗಿನ್ ಆದ ಬಳಿಕ ನಿಮ್ಮ ಪ್ರೊಫೈಲ್ ಸೆಟ್ಟಿಂಗ್‌ಗೆ ಹೋಗಬೇಕಾಗುತ್ತದೆ.
-ಪ್ರೊಫೈಲ್ ಸೆಟ್ಟಿಂಗ್‌ನಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಬೇಕು.
-ಇಲ್ಲಿ ನೀಡಿರುವ ವಿಭಾಗದಲ್ಲಿ ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಬೇಕು.
-ಮಾಹಿತಿಯನ್ನು ಭರ್ತಿ ಮಾಡಿದ ನಂತರ, 'ಲಿಂಕ್ ಆಧಾರ್' ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
-ಇದಾದ ನಂತರ ನಿಮ್ಮ ಆಧಾರ್ ಲಿಂಕ್ ಆಗುತ್ತದೆ.
ಇದನ್ನೂ ಓದಿ : Ration Card : ಉಚಿತ ಪಡಿತರ ಪಡೆಯುವ ಫಲಾನುಭವಿಗಳಿಗೆ ಕೇಂದ್ರದಿಂದ ಸಿಹಿ ಸುದ್ದಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.