ನವದೆಹಲಿ: ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಿದ್ದೀರಾ? ನಿಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿವೆ ಮತ್ತು ಮಾರ್ಚ್ 31 ರ ಮೊದಲು ನೀವು ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು.
ವಾಸ್ತವವಾಗಿ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ (Aadhaar Card) ಅನ್ನು ಪ್ಯಾನ್ ಕಾರ್ಡ್ ಜೋಡಣೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗಾಗಿ ಮಾರ್ಚ್ 31ರ ಒಳಗೆ ಯಾವುದೇ ವ್ಯಕ್ತಿ ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಫಲವಾದರೆ ನಿಮ್ಮ ಪ್ಯಾನ್ ಕಾರ್ಡ್ (PAN Card) ನಿಷ್ಕ್ರಿಯಗೊಳ್ಳುತ್ತದೆ. ಇದಲ್ಲದೆ, ಆದಾಯ ತೆರಿಗೆ ಕಾಯ್ದೆಯಡಿ ನೀವು 1000 ರೂ.ಗಳ ದಂಡವನ್ನು ಪಾವತಿಸಬೇಕಾಗುತ್ತದೆ.
ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ ಪ್ಯಾನ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ :
ಹಣಕಾಸು ಮಸೂದೆ 2021 ರ ಅಡಿಯಲ್ಲಿ ಆದಾಯ ತೆರಿಗೆ ಕಾಯ್ದೆ 1961ಕ್ಕೆ ಸೇರಿಸಲಾದ ಸೆಕ್ಷನ್ 234 ಹೆಚ್ ಅನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಸೆಕ್ಷನ್ 234 ಹೆಚ್ ಅಡಿಯಲ್ಲಿ, ಸರ್ಕಾರವು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ನಿಮ್ಮ ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮಗೆ ಗರಿಷ್ಠ 1,000 ರೂ. ತಡವಾದ ಶುಲ್ಕವನ್ನು ವಿಧಿಸಲಾಗುತ್ತದೆ. ಅಷ್ಟೇ ಅಲ್ಲದೆ ನಿಗದಿತ ದಿನಾಂಕದೊಳಗೆ ಈ ಎರಡೂ ಮುಖ್ಯ ದಾಖಲೆಗಳನ್ನು ಲಿಂಕ್ ಮಾಡದಿದ್ದರೆ ನಿಮ್ಮ ಪ್ಯಾನ್ ನಿಷ್ಕ್ರಿಯಗೊಳ್ಳುತ್ತದೆ.
ಇದನ್ನೂ ಓದಿ- ನಿಮ್ಮ ಪ್ಯಾನ್ ಆಧಾರ್‌ಗೆ ಲಿಂಕ್ ಆಗಿದೆಯೇ/ಇಲ್ಲವೇ ಎಂಬುದನ್ನು ಹೀಗೆ ಪರಿಶೀಲಿಸಿ
ನೀವೂ ಕೂಡ ಇನ್ನೂ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಇಲ್ಲಿದೆ ಸುಲಭ ವಿಧಾನ:
1. ಆದಾಯ ತೆರಿಗೆ ವೆಬ್‌ಸೈಟ್ ಮೂಲಕ ಪ್ಯಾನ್ ಅನ್ನು ಆಧಾರ್‌ಗೆ ಜೋಡಿಸುವ (PAN Aahaar Link) ವಿಧಾನ
>> ಮೊದಲು ಆದಾಯ ತೆರಿಗೆ ವೆಬ್‌ಸೈಟ್‌ಗೆ ಹೋಗಿ
>> ಆಧಾರ್ ಕಾರ್ಡ್‌ನಲ್ಲಿ ನೀಡಿರುವ ಹೆಸರು, ಪ್ಯಾನ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ
>> ಆಧಾರ್ ಕಾರ್ಡ್‌ನಲ್ಲಿ, ಹುಟ್ಟಿದ ವರ್ಷವನ್ನು ಉಲ್ಲೇಖಿಸಿ ಚೌಕವನ್ನು ಟಿಕ್ ಮಾಡಿ
ಈಗ ಕ್ಯಾಪ್ಚಾ ಕೋಡ್ ನಮೂದಿಸಿ
>> ಈಗ ಲಿಂಕ್ ಆಧಾರ್ ಬಟನ್ ಕ್ಲಿಕ್ ಮಾಡಿ
>> ನಿಮ್ಮ ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡಲಾಗುತ್ತದೆ.
ಇದನ್ನೂ ಓದಿ- PAN-Aadhaar ಲಿಂಕ್‌ಗೆ ಕೆಲವೇ ದಿನಗಳು ಬಾಕಿ, ಈ ಕೆಲಸ ಮಾಡದಿದ್ದರೆ 10 ಸಾವಿರ ದಂಡ
2. ಎಸ್‌ಎಂಎಸ್ ಕಳುಹಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡುವ ವಿಧಾನ:
ಇದಕ್ಕಾಗಿ, ನಿಮ್ಮ ಫೋನ್‌ನಲ್ಲಿ ನೀವು - ಯುಐಡಿಪಿಎನ್ ಎಂದು ಟೈಪ್ ಮಾಡಬೇಕು. ಇದರ ನಂತರ, 12-ಅಂಕಿಯ ಆಧಾರ್ ಸಂಖ್ಯೆ ಮತ್ತು ನಂತರ 10-ಅಂಕಿಯ ಪ್ಯಾನ್ ಸಂಖ್ಯೆಯನ್ನು ಬರೆಯಿರಿ. ಈಗ ಹಂತ 1 ರಲ್ಲಿ ತಿಳಿಸಲಾದ ಸಂದೇಶವನ್ನು 567678 ಅಥವಾ 56161 ಗೆ ಕಳುಹಿಸಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.