PAN Card Latest News : ಈ ಹೊಸ ವೆಬ್‌ಸೈಟ್‌ನಿಂದ 5 ನಿಮಿಷಗಳಲ್ಲಿ e-Pan ಕಾರ್ಡ್ ಡೌನ್‌ಲೋಡ್ ಮಾಡಿ : ಹೇಗೆ ಇಲ್ಲಿದೆ ನೋಡಿ

ಪ್ಯಾನ್ ಕಾರ್ಡ್ ಕಳೆದುಹೋದರೆ ಸಮಸ್ಯೆ ಎದುರಾಗುತ್ತದೆ. ಆದರೆ ಈಗ ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ. ಆದಾಯ ತೆರಿಗೆಯ ಹೊಸ ವೆಬ್‌ಸೈಟ್‌ನಿಂದ ನಿಮ್ಮ ಇ-ಪ್ಯಾನ್ ಕಾರ್ಡ್ ಅನ್ನು ನೀವು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇ-ಪ್ಯಾನ್ ಕಾರ್ಡ್ ಡೌನ್‌ಲೋಡ್ ಮಾಡುವ ಸಂಪೂರ್ಣ ಪ್ರಕ್ರಿಯೆ ಇಲ್ಲಿದೆ ನೋಡಿ..

Written by - Channabasava A Kashinakunti | Last Updated : Jul 14, 2021, 11:55 AM IST
  • ಪ್ಯಾನ್ ಕಾರ್ಡ್ ಸಧ್ಯ ದಾಖಲೆಯಾಗಿ ಮಾರ್ಪಟ್ಟಿದೆ
  • ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್ ಎಲ್ಲೆಡೆ ಕಡ್ಡಾಯವಾಗಿದೆ
  • ಆದಾಯ ತೆರಿಗೆಯ ಹೊಸ ವೆಬ್‌ಸೈಟ್‌ನಿಂದ ನಿಮ್ಮ ಇ-ಪ್ಯಾನ್ ಕಾರ್ಡ್
PAN Card Latest News : ಈ ಹೊಸ ವೆಬ್‌ಸೈಟ್‌ನಿಂದ 5 ನಿಮಿಷಗಳಲ್ಲಿ e-Pan ಕಾರ್ಡ್ ಡೌನ್‌ಲೋಡ್ ಮಾಡಿ : ಹೇಗೆ ಇಲ್ಲಿದೆ ನೋಡಿ title=

ದೆಹಲಿ : ಪ್ಯಾನ್ ಕಾರ್ಡ್ ಸಧ್ಯ ದಾಖಲೆಯಾಗಿ ಮಾರ್ಪಟ್ಟಿದೆ, ಅದಿಲ್ಲದೇ ದೇಶದಲ್ಲಿ ಯಾವುದೇ ವಹಿವಾಟು ನಡೆಸಲು ಸಾಧ್ಯವಿಲ್ಲ. 

ಬ್ಯಾಂಕಿನಲ್ಲಿ ಖಾತೆ ತೆರೆಯುವುದು, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ತೆಗೆದುಕೊಳ್ಳುವುದು ಅಥವಾ ಐಟಿಆರ್ ಫೈಲ್ ಮಾಡುವುದು, ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್(Pan Card) ಎಲ್ಲೆಡೆ ಕಡ್ಡಾಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ ಕಳೆದುಹೋದರೆ ಸಮಸ್ಯೆ ಎದುರಾಗುತ್ತದೆ. ಆದರೆ ಈಗ ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ. ಆದಾಯ ತೆರಿಗೆಯ ಹೊಸ ವೆಬ್‌ಸೈಟ್‌ನಿಂದ ನಿಮ್ಮ ಇ-ಪ್ಯಾನ್ ಕಾರ್ಡ್ ಅನ್ನು ನೀವು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇ-ಪ್ಯಾನ್ ಕಾರ್ಡ್ ಡೌನ್‌ಲೋಡ್ ಮಾಡುವ ಸಂಪೂರ್ಣ ಪ್ರಕ್ರಿಯೆ ಇಲ್ಲಿದೆ ನೋಡಿ..

ಇದನ್ನೂ ಓದಿ : Gold-Silver Price : ಮಹಿಳೆಯರೇ ಗಮನಿಸಿ : ಚಿನ್ನದ ಬೆಲೆ 10 ಗ್ರಾಂ 46,890 ರೂ.

ಪ್ಯಾನ್ ಸಂಖ್ಯೆಯಿಂದ ಇ-ಪ್ಯಾನ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?

1. ಇದಕ್ಕಾಗಿ, ನೀವು ಮೊದಲು ಆದಾಯ ತೆರಿಗೆ ವೆಬ್‌ಸೈಟ್ https://www.incometax.gov.in/iec/foportal ಗೆ ಲಾಗಿನ್ ಆಗಬೇಕು.
2. ನಂತರ ನೀವು 'ತತ್ಕ್ಷಣ ಇ ಪ್ಯಾನ್' ಕ್ಲಿಕ್ ಮಾಡಿ.
3. ಈಗ 'ನ್ಯೂ ​​ಇ ಪ್ಯಾನ್'(New e Pan) ಕ್ಲಿಕ್ ಮಾಡಿ.
4. ಈಗ ನೀವು ನಿಮ್ಮ ಪ್ಯಾನ್ ಸಂಖ್ಯೆಯನ್ನು ಇಲ್ಲಿ ನಮೂದಿಸಿ.
5. ನಿಮ್ಮ ಪ್ಯಾನ್ ಸಂಖ್ಯೆ ನಿಮಗೆ ನೆನಪಿಲ್ಲದಿದ್ದರೆ, ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ.

ಇದನ್ನೂ ಓದಿ :Petrol-Diesel Pricesb : ವಾಹನ ಸವಾರರ ಗಮನಕ್ಕೆ ; ಇಲ್ಲಿದೆ ನಿಮ್ಮ ನಗರದ ಪೆಟ್ರೋಲ್-ಡೀಸೆಲ್ ಬೆಲೆ 

6. ಇಲ್ಲಿ ಕೆಲವು ನಿಯಮಗಳು ಮತ್ತು ಷರತ್ತುಗಳಿವೆ, ಅವುಗಳನ್ನು ಎಚ್ಚರಿಕೆಯಿಂದ ಓದಿ ನಂತರ 'Accept' ಕ್ಲಿಕ್ ಮಾಡಿ.
7. ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಒಟಿಪಿ(OTP) ಬರುತ್ತದೆ, ಅದನ್ನು ಬರೆಯಿರಿ.
8. ಈಗ ಕೊಟ್ಟಿರುವ ವಿವರಗಳನ್ನು ಓದಿದ ನಂತರ 'ದೃಡೀಕರಿಸಿ' ಕ್ಲಿಕ್ ಮಾಡಿ.
10. ಈಗ ನಿಮ್ಮ ಪ್ಯಾನ್ ಅನ್ನು ನಿಮ್ಮ ಇಮೇಲ್ ಐಡಿಗೆ ಪಿಡಿಎಫ್ ರೂಪದಲ್ಲಿ ಕಳುಹಿಸಲಾಗುತ್ತದೆ.
11. ಇಲ್ಲಿಂದ ನಿಮ್ಮ 'ಇ-ಪ್ಯಾನ್' ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ : Driverless Pod Taxi: ಜೆವಾರ್ ವಿಮಾನ ನಿಲ್ದಾಣ-ನೋಯ್ಡಾ ಫಿಲ್ಮ್ ಸಿಟಿ ನಡುವೆ ಚಲಿಸಲಿದೆ ದೇಶದ ಮೊದಲ ಡ್ರೈವರ್‌ಲೆಸ್ ಪಾಡ್ ಟ್ಯಾಕ್ಸಿ

ಪ್ಯಾನ್-ಆಧಾರ್ ಲಿಂಕ್ ಕಡ್ಡಾಯ : 

ನಿಮ್ಮ ಪ್ಯಾನ್ ಸಂಖ್ಯೆ ನಿಮಗೆ ನೆನಪಿಲ್ಲದಿದ್ದರೆ ಅಥವಾ ನೀವು ಗೊಂದಲಕ್ಕೊಳಗಾಗಿದ್ದರೆ, ನಿಮ್ಮ ಆಧಾರ್ ಕಾರ್ಡ್ ಸಹಾಯದಿಂದ ನೀವು ಇ-ಪ್ಯಾನ್ ಕಾರ್ಡ್ ಡೌನ್‌ಲೋಡ್(e-Pan Card Download) ಮಾಡಿಕೊಳ್ಳಬಹುದು. ಆದರೆ ಇದಕ್ಕಾಗಿ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ನಿಮ್ಮ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡದಿದ್ದರೆ ನಿಮಗೆ ಇ-ಪ್ಯಾನ್ ಡೌನ್‌ಲೋಡ್ ಮಾಡಲು ಸಾಧ್ಯವಾಗುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News