PAN Card ಹೊಂದಿರುವವರಿಗೆ ಎಚ್ಚರಿಕೆ ನೀಡಿದ ಆದಾಯ ತೆರಿಗೆ ಇಲಾಖೆ!

Income Tax Department : ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಒಂದು ಬಿಗ್ ನ್ಯೂಸ್ ಇದಾಗಿದೆ. ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ ನೀಡಿದೆ. ಮಾರ್ಚ್ 31, 2023 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ಗೆ ಲಿಂಕ್ ಮಾಡಬೇಕು, ಇಲ್ಲದಿದ್ದರೆ ಏಪ್ರಿಲ್ 1, 2023 ರಂದು ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ. 

Written by - Channabasava A Kashinakunti | Last Updated : Dec 17, 2022, 08:14 PM IST
  • ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಒಂದು ಬಿಗ್ ನ್ಯೂಸ್
  • ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ
  • ಪ್ಯಾನ್‌ ಜೊತೆ ಆಧಾರ್ ಲಿಂಕ್ ಏಕೆ ಮಾಡಬೇಕು?
PAN Card ಹೊಂದಿರುವವರಿಗೆ ಎಚ್ಚರಿಕೆ ನೀಡಿದ ಆದಾಯ ತೆರಿಗೆ ಇಲಾಖೆ! title=

Income Tax Department : ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಒಂದು ಬಿಗ್ ನ್ಯೂಸ್ ಇದಾಗಿದೆ. ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ ನೀಡಿದೆ. ಮಾರ್ಚ್ 31, 2023 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ಗೆ ಲಿಂಕ್ ಮಾಡಬೇಕು, ಇಲ್ಲದಿದ್ದರೆ ಏಪ್ರಿಲ್ 1, 2023 ರಂದು ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ. 

ಪ್ರಸ್ತುತ ದಿನಗಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ, ಅದು ಇಲ್ಲದಿದ್ದರೆ ಆದಾಯ ತೆರಿಗೆ ಇಲಾಖೆಯಲ್ಲಿ ಯಾವುದೇ ಕೆಲಸ ಆಗುವುದಿಲ್ಲ. ಆದಾಯ ತೆರಿಗೆ ಇಲಾಖೆಯು ಪ್ಯಾನ್ ಸಂಖ್ಯೆಯಿಂದ ಮಾತ್ರ ನಿಮ್ಮ ಹಣಕಾಸಿನ ಮಾಹಿತಿಯನ್ನು ದಾಖಲಿಸುತ್ತದೆ. ಹೀಗಾಗಿ, ನೀವು ತಕ್ಷಣ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಬೇಕು.  ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಜೊತೆ ಹೇಗೆ ಲಿಂಕ್ ಮಾಡಬೇಕು ಎಂಬುದನ್ನು ಈ ಕೆಳಗಿದೆ ನೋಡಿ..

ಇದನ್ನೂ ಓದಿ : SBI ಖಾತೆದಾರರಿಗೆ ಸಿಹಿ ಸುದ್ದಿ : ಎಫ್‌ಡಿ ಬಡ್ಡಿ ದರ ಹೆಚ್ಚಿಸಿದ ಬ್ಯಾಂಕ್!

ಟ್ವೀಟ್ ಮೂಲಕ ಮಾಹಿತಿ ನೀಡಿದೆ ಆದಾಯ ತೆರಿಗೆ ಇಲಾಖೆ

ಪ್ಯಾನ್ ಕಾರ್ಡ್ ಅನ್ನು ಆಧಾರ್ ಜೊತೆ ಲಿಂಕ್ ಮಾಡಲು ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಟ್ವೀಟ್ ಮಾಡಿದೆ. ಆದಾಯ ತೆರಿಗೆ ಕಾಯ್ದೆ 1961 ರ ಪ್ರಕಾರ, ವಿನಾಯಿತಿ ಪಡೆದ ವರ್ಗಕ್ಕೆ ಸೇರದ ಎಲ್ಲಾ ಪ್ಯಾನ್ ಕಾರ್ಡ್ ಹೊಂದಿರುವವರು ಮಾರ್ಚ್ 31, 2023 ರೊಳಗೆ ತಮ್ಮ ಪ್ಯಾನ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದೆ.

ಪ್ಯಾನ್‌ ಜೊತೆ ಆಧಾರ್ ಲಿಂಕ್ ಏಕೆ ಮಾಡಬೇಕು?

ಹಣಕಾಸಿನ ವಹಿವಾಟುಗಳ ದಾಖಲೆಗಳನ್ನು ಇರಿಸಿಕೊಳ್ಳಲು ಪ್ಯಾನ್‌ ಕಾರ್ಡ್ ಅನ್ನು ಬಳಸಲಾಗುತ್ತದೆ. ಈ ಸಂಖ್ಯೆಯೊಂದಿಗೆ, ಸರ್ಕಾರವು ಜನರ ಆದಾಯ ತೆರಿಗೆಯ ಬಗ್ಗೆ ಮಾಹಿತಿಯನ್ನು ಇಡುತ್ತದೆ. ಹಣಕಾಸಿನ ವಹಿವಾಟಿನ ದಾಖಲೆಯನ್ನು ಆದಾಯ ತೆರಿಗೆ ಇಲಾಖೆ ಇಡುತ್ತದೆ, ಇದು ಸಂಪೂರ್ಣವಾಗಿ ಎಲೆಕ್ಟ್ರಾನಿಕ್ ಸಿಸ್ಟಮ್ ಅಡಿಯಲ್ಲಿದೆ. ದೇಶದ ಯಾವುದೇ ವ್ಯಕ್ತಿ ಅಥವಾ ಕಂಪನಿಯ ಮಾಹಿತಿಯನ್ನು ಒಂದೇ ಪ್ಯಾನ್ ಸಂಖ್ಯೆಯೊಂದಿಗೆ ದಾಖಲಿಸಲಾಗುತ್ತದೆ. ಹೀಗಾಗಿ, ಸರ್ಕಾರದ ನಿಯಮಗಳ ಪ್ರಕಾರ, ಒಬ್ಬರು ಒಂದೇ ಪ್ಯಾನ್ ಕಾರ್ಡ್ ಅನ್ನು ನೀಡಬಹುದು, ಆದರೆ ಹಿಂದಿನ ಕಾಲದಲ್ಲಿ ಯಾರಾದರೂ ಎರಡು ಅಥವಾ ಅದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್‌ಗಳನ್ನು ಮಾಡಿದ್ದರೆ, ಅವರನ್ನು ಸುಲಭವಾಗಿ ಕಂಡು ಹಿಡಿಯಲು ಸಾಧ್ಯವಿಲ್ಲ. ಆದರೆ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿದರೆ ಈಗ ಈ ಕೆಲಸ ಮಾಡಲು ಸಾಧ್ಯವಿಲ್ಲ. ಯಾರಾದರೂ ಎರಡು ಪ್ಯಾನ್ ಕಾರ್ಡ್‌ಗಳನ್ನು ಇಟ್ಟುಕೊಂಡರೆ, ಅದು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತದೆ. ಆದರೆ, ಎರಡು ಪ್ಯಾನ್ ಸಂಖ್ಯೆಗಳನ್ನು ಹೊಂದಿರುವುದು ಕಾನೂನುಬಾಹಿರವಾಗಿದೆ.

ಪ್ಯಾನ್ ಜೊತೆ ಆಧಾರ್ ಜೊತೆ ಲಿಂಕ್ ಮಾಡುವುದು ಹೇಗೆ?

ನೀವು ಮನೆಯಲ್ಲಿಯೇ ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಲು ಬಯಸಿದರೆ, ಮೊದಲು ನೀವು ಆದಾಯ ತೆರಿಗೆಯ ಇ-ಫೈಲಿಂಗ್ ವೆಬ್‌ಸೈಟ್‌ಗೆ ಹೋಗಬೇಕು. ಇಲ್ಲಿ ಒಂದು ಫಾರ್ಮ್ ತೆರೆಯುತ್ತದೆ, ಅದರಲ್ಲಿ ನೀವು ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಅದರ ನಂತರ ಆಧಾರ್ ಕಾರ್ಡ್‌ನ ಡೇಟಾದ ಪ್ರಕಾರ ಮಾಹಿತಿಯನ್ನು ನಮೂದಿಸಬೇಕಾಗುತ್ತದೆ. ಸ್ವಂತ ಹೆಸರು, ಹುಟ್ಟಿದ ದಿನಾಂಕ ಹಾಗೆ. ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕವನ್ನು ಮಾತ್ರ ಬರೆದಿದ್ದರೆ, ನೀವು ಅಲ್ಲಿರುವ ಬಾಕ್ಸ್‌ನಲ್ಲಿ ಸರಿಯಾದ ಗುರುತು ಹಾಕಬೇಕು. ಇದರ ನಂತರ ಪರಿಶೀಲಿಸಲು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ. ಈಗ ನೀವು "ಲಿಂಕ್ ಆಧಾರ್" ಬರೆದಿರುವುದನ್ನು ನೋಡುತ್ತೀರಿ. ಅಲ್ಲಿ ಕ್ಲಿಕ್ ಮಾಡಿ. ಈ ಮೂಲಕ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು.

ಇದನ್ನೂ ಓದಿ : Pension Scheme : ಸರ್ಕಾರದ ಈ ಯೋಜನೆಯಿಂದ ಪ್ರತಿ ತಿಂಗಳು ಸಿಗಲಿದೆ ₹5000 ಪಿಂಚಣಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News