Petrol-Diesel Price : ರಾಜ್ಯದಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ಬೆಲೆ..!
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ದುಬಾರಿ ಪೆಟ್ರೋಲ್ 102.30ರು ಪ್ರತಿ ಲೀಟರ್
ಬೆಂಗಳೂರು : ದೇಶದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ ಕಾಣುತ್ತಿದ್ದು, ಹಲವೆಡೆ 100 ರ ಗಡಿ ದಾಟಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ದುಬಾರಿ ಪೆಟ್ರೋಲ್ 102.30ರು ಪ್ರತಿ ಲೀಟರ್, ಡೀಸೆಲ್ 94.39ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದಲ್ಲೂ ಪೆಟ್ರೋಲ್ ದರ 100ರು ಗಡಿ ದಾಟಿದೆ.
ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ(Petrol Price) 25 ರು ಹೆಚ್ಚಾಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಪೆಟ್ರೋಲ್ 3.94 ರು ಹಾಗೂ ಡೀಸೆಲ್ 4.47 ರು ಏರಿಕೆ ಕಂಡಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.
ಇದನ್ನೂ ಓದಿ : Good News : ಈ ಮೂರು ಬ್ಯಾಂಕುಗಳಲ್ಲಿ ನಿಮ್ಮ ಖಾತೆ ಇದ್ದರೆ, ಎಟಿಎಂನಿಂದ ಹಣ ವಿತ್ ಡ್ರಾ ಮಾಡಿದರೆ ಶುಲ್ಕ ಇಲ್ಲ
ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ(Diesel Price) 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.
ಇದನ್ನೂ ಓದಿ : SBI Alert! ಇಂಟರ್ನೆಟ್ ಬ್ಯಾಂಕಿಂಗ್, UPI ಸೇವೆಗಳು ಇಂದು ಲಭ್ಯವಿಲ್ಲ!
ಬೆಂಗಳೂರಲ್ಲಿ(Bengaluru) ಪೆಟ್ರೋಲ್ ಪ್ರತಿ ಲೀಟರ್‌ಗೆ 99.05ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 92.21ರೂಪಾಯಿಗೆ ಮುಟ್ಟಿದೆ. ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ.
ಇದನ್ನೂ ಓದಿ : SBI ಗ್ರಾಹಕರೇ ಗಮನಿಸಿ : ನಿಮ್ಮ 'ATM' ಕಾರ್ಡ್ ಕಳೆದುಹೋಗಿದೆಯೇ? ಅದನ್ನ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ. ಚಿಕ್ಕಮಗಳೂರು, ಬಳ್ಳಾರಿ, ಕೊಡಗು, ದಾವಣಗೆರೆ, ಯಾದಗಿರಿ, ತುಮಕೂರು, ಕೊಪ್ಪಳ, ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ 100 ರು ಪ್ರತಿ ಲೀಟರ್ ದಾಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್(Indian Oil Corporation) ಪ್ರಕಟಿಸಿದೆ.
ಇದನ್ನೂ ಓದಿ : ಈ ಬ್ಯಾಂಕ್ ನಲ್ಲಿ ನಿಮ್ಮ ಅಕೌಂಟ್ ಇದೆಯಾ? ಹಾಗಿದ್ದರೆ ತಿಳಿದಿರಲಿ ಬದಲಾದ ನಿಯಮ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.