Petrol-Diesel Rate : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ!

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 97.50 ರೂ. ಮತ್ತು ಡೀಸೆಲ್ 88.23 ರೂ. ಗೆ ಏರಿಕೆ

Last Updated : Jun 22, 2021, 10:07 AM IST
  • ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು
  • ಇಂದು ಪ್ರತೀ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಏರಿಕೆ
  • ಪ್ರತೀ ಲೀಟರ್ ಡೀಸೆಲ್ ದರದಲ್ಲಿ 28 ಪೈಸೆವರೆಗೂ ದರ ಏರಿಕೆಯಾಗಿದೆ
Petrol-Diesel Rate : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ! title=

ನವದೆಹಲಿ : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು , ಇಂದು ಪ್ರತೀ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 28 ಪೈಸೆವರೆಗೂ ದರ ಏರಿಕೆಯಾಗಿದೆ .

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ(Petrol Rate) 97.50 ರೂ. ಮತ್ತು ಡೀಸೆಲ್ 88.23 ರೂ. ಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 100.79 ರೂ, ಡೀಸೆಲ್ 93.54 ರೂ.ಗೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ 103.63ರೂ, ಡೀಸೆಲ್ 95.72ರೂಗೆ ಏರಿಕೆಯಾಗಿದೆ.

ಇದನ್ನೂ ಓದಿ : ಮನೆಯಲ್ಲೇ ಈ ವ್ಯಾಪಾರ ಆರಂಭಿಸಿ ಪ್ರತಿ ತಿಂಗಳು 30 ಸಾವಿರ ರೂ. ಸಂಪಾದಿಸಬಹುದು

ರಾಜಸ್ಥಾನ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಜಮ್ಮುಕಾಶ್ಮೀರ ಸೇರಿದಂತೆ ಕರ್ನಾಟಕದಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ದರ ಶತಕ ಬಾರಿಸಿದೆ. ರಾಜಸ್ಥಾನದ ಶ್ರೀನಗರದಲ್ಲಿ ಲೀಟರ್ ಪೆಟ್ರೋಲ್ ಬೆಲ ಜೊತೆಗೆ ಡೀಸೆಲ್ ದರ(Diesel Rate)ವೂ ಶತಕ ದಾಟಿದೆ. ಪೆಟ್ರೋಲ್ ದರ 108.37 ರೂ. ಇದ್ದರೆ ಡೀಸೆಲ್ ದರ ಲೀಟರ್ ಗೆ 101.12 ರೂ. ಇದೆ.

ಇದನ್ನೂ ಓದಿ : NPS: ನಿತ್ಯ 74 ರೂ. ಉಳಿಸಿ ಮಿಲಿಯನೇರ್ ಆಗಬಹುದು! ತಿಂಗಳಿಗೆ ಸಿಗಲಿದೆ 27,500 ರೂ.ವರೆಗೆ ಪಿಂಚಣಿ

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು(Fuel prices) ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತದೆ, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ.

ಇದನ್ನೂ ಓದಿ : PM Jan Dhan Account: ಪಿಎಂ ಜನಧನ ಖಾತೆ ಮೂಲಕ ಸಿಗಲಿದೆ ಬಂಪರ್ ಲಾಭ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News