Petrol And Diesel Rate On December 12: ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಂದು ಬಹುತೇಕ ಸ್ಥಿರವಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 71.41 ಡಾಲರ್‌ಗೆ ಮಾರಾಟ ಮಾಡಲಾಗುತ್ತಿದ್ದು, ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ $ 76.03 ತಲುಪಿದೆ. 


COMMERCIAL BREAK
SCROLL TO CONTINUE READING

ಪಶ್ಚಿಮ ಬಂಗಾಳ, ಪಂಜಾಬ್, ಮಹಾರಾಷ್ಟ್ರ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತಿದ್ದು, ಆದರೆ, ಈ ಎಲ್ಲ ರಾಜ್ಯಗಳಲ್ಲಿ 50 ಪೈಸೆಗಿಂತ ಕಡಿಮೆ ಬೆಲೆಯಲ್ಲಿ ಬದಲಾವಣೆಯಾಗಿದೆ. ಮತ್ತೊಂದೆಡೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸುಮಾರು 85 ಪೈಸೆಗಳಷ್ಟು ಅಗ್ಗವಾಗಿದ್ದು, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.


ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಹೊಸ ನಿಯಮ! ಒಂದು ಟಿಕೆಟ್ ಗೆ ಇಷ್ಟು ಕೆ.ಜಿ ಲಗೇಜ್ ಗೆ ಮಾತ್ರ ಅವಕಾಶ


ಪ್ರಸ್ತುತ, ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 101.94 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 87.89 ರೂ.ಗೆ ಮಾರಾಟವಾಗುತ್ತಿದೆ.


ಭಾರತದಲ್ಲಿ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇ ಪ್ರತಿದಿನ  ಇಂಧನದ ಬೆಲೆ ಪರಿಷ್ಕರಿಸಲಾಗುತ್ತಿದ್ದು ಮತ್ತು ಪ್ರಪಂಚದಾದ್ಯಂತ ಕಚ್ಚಾ ತೈಲದ ಬೆಲೆಗೆ ಅನುಗುಣವಾಗಿ ದರಗಳನ್ನು ನಿರ್ಧರಿಸಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ