Petrol And Diesel Price On December 22: ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಂದು ಬಹುತೇಕ ಸ್ಥಿರವಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 73.97 ಡಾಲರ್‌ಗೆ ಮಾರಾಟ ಮಾಡಲಾಗುತ್ತಿದ್ದು, ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ $ 79.45 ತಲುಪಿದೆ.  


COMMERCIAL BREAK
SCROLL TO CONTINUE READING

ಮಹಾರಾಷ್ಟ್ರದಲ್ಲಿ ಪೆಟ್ರೋಲ್ 61 ಪೈಸೆ ಮತ್ತು ಡೀಸೆಲ್ 59 ಪೈಸೆ ಕಡಿಮೆಯಾಗಿದ್ದು, ರಾಜಸ್ಥಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳ ಮತ್ತು ಉತ್ತರಾಖಂಡದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಅದೇ ಸಮಯದಲ್ಲಿ ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 56 ಪೈಸೆ ಏರಿಕೆಯಾಗಿದೆ. ಚಂಡೀಗಢ, ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ.


ಇದನ್ನೂ ಓದಿ: Today Adike Rate: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ


ಪ್ರಸ್ತುತ, ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮಾರಾಟವಾಗುತ್ತಿದ್ದರೇ, ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟ ಮಾಡಲಾಗುತ್ತಿದೆ. ಇತ್ತ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 101.94 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 87.89 ರೂ.ಗೆ ಮಾರಾಟವಾಗುತ್ತಿದೆ.


ಭಾರತದಲ್ಲಿ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇದನ್ನು ಪ್ರತಿದಿನ ಮಾಡಲಾಗುತ್ತದೆ ಮತ್ತು ಪ್ರಪಂಚದಾದ್ಯಂತ ಕಚ್ಚಾ ತೈಲದ ಬೆಲೆಗೆ ಅನುಗುಣವಾಗಿ ದರಗಳನ್ನು ನಿರ್ಧರಿಸಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.