ವರ್ಷದ ಬಳಿಕ ಮತ್ತೆ ಏರಿಕೆಯಾದ ಪೆಟ್ರೋಲ್, ಡಿಸೇಲ್ ಬೆಲೆ ! ನಿಮ್ಮ ನಗರದಲ್ಲಿ ಎಷ್ಟಿದೆ ತಿಳಿದುಕೊಳ್ಳಿ ತೈಲ ಬೆಲೆ

Petrol-Diesel Price on 29 May 2023: ಮೇ 29 ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು  ಬಿಡುಗಡೆ ಮಾಡಿದೆ. ಈ ಹೊಸ ಬೆಲೆಯ ಪ್ರಕಾರ ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ ಕೆಲವು ನಗರಗಳಲ್ಲಿ  ಮಾತ್ರ  ಬದಲಾವಣೆ ಕಂಡು ಬಂದಿದೆ.  

Written by - Ranjitha R K | Last Updated : May 29, 2023, 09:51 AM IST
  • ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರ ಬಿಡುಗಡೆ
  • ನಾಲ್ಕು ಮಹಾನಗರಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
  • ಕೆಲವು ನಗರಗಳಲ್ಲಿ ಮಾತ್ರ ಬದಲಾವಣೆ
ವರ್ಷದ ಬಳಿಕ ಮತ್ತೆ ಏರಿಕೆಯಾದ ಪೆಟ್ರೋಲ್, ಡಿಸೇಲ್ ಬೆಲೆ ! ನಿಮ್ಮ ನಗರದಲ್ಲಿ ಎಷ್ಟಿದೆ ತಿಳಿದುಕೊಳ್ಳಿ ತೈಲ ಬೆಲೆ  title=

Petrol-Diesel Price on 29 May 2023:  ಕಳೆದ ವರ್ಷ 22 ಮೇ 2023 ರಂದು ತೈಲ ಕಂಪನಿಗಳು ಪೆಟ್ರೋಲ್-ಡೀಸೆಲ್ ದರ ಏರಿಕೆ ಮಾಡಿತ್ತು. ಅಂದು ತೈಲದ ಮೇಲಿನ ಅಬಕಾರಿ ಸುಂಕವನ್ನು ಸರಕಾರ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಮೇಲೆ 8 ರೂ., ಡೀಸೆಲ್ ಮೇಲೆ 5 ರೂ. ಇಳಿಕೆಯಾಗಿತ್ತು. 

ಮೇ 29 ರಂದು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ :
ಮೇ 29 ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು  ಬಿಡುಗಡೆ ಮಾಡಿದೆ. ಈ ಹೊಸ ಬೆಲೆಯ ಪ್ರಕಾರ ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ ಕೆಲವು ನಗರಗಳಲ್ಲಿ  ಮಾತ್ರ  ಬದಲಾವಣೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ಮೇ 29 ರಂದು ಅಂದರೆ ಇಂದು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಈ ಪ್ರಕಾರ ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ತೈಲ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಇದನ್ನೂ ಓದಿ : 7 Seater Car: 10 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಖರೀದಿಸಿ ಈ 7 ಸೀಟರ್‌ ಕಾರು

ಎಲ್ಲಿ ದರ ಏರಿಕೆ : 
ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾಸನ, ಹಾವೇರಿ ಮುಂತಾದ ಜಿಲ್ಲೆಗಳಲ್ಲಿ ಆರು ಪೈಸೆಯಿಂದ 46  ಪೈಸೆಯವರೆಗೆ  ಹೆಚ್ಚಳ ಕಂಡು ಬಂದಿದೆ. ಆದರೆ ಬೆಂಗಳೂರಿನಲ್ಲಿ ತೈಲ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಆಗಿಲ್ಲ.   

ಕಚ್ಚಾ ತೈಲ ದರದಲ್ಲಿಯೂ ಏರಿಕೆ : 
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ  ಕಂಡು ಬರುತ್ತಿದೆ.  ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 77 ಡಾಲರ್ ದಾಟಿದೆ. ಅದೇ ಸಮಯದಲ್ಲಿ, WTI ಕಚ್ಚಾ ತೈಲವು  1 ಪ್ರತಿಶತದಷ್ಟು  ಏರಿಕೆ ಕಂಡು ಪ್ರತಿ ಬ್ಯಾರೆಲ್‌ಗೆ 73.39  ಡಾಲರ್ ಆಗಿದೆ. 

ಇದನ್ನೂ ಓದಿ Indian Railways: ವೈಷ್ಣೋದೇವಿಗೆ ಹೋಗುವ ಪ್ರಯಾಣಿಕರಿಗೆ ಗುಡ್ ನ್ಯೂಸ್, ಇಂದಿನಿಂದ ಈ ಹೊಸ ಸೌಲಭ್ಯ!

ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ : 
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72  ರೂಪಾಯಿ  ಮತ್ತು ಡೀಸೆಲ್  89.62 ರೂ.  ಕೋಲ್ಕತ್ತಾದಲ್ಲಿ ಪೆಟ್ರೋಲ್  ಬೆಲೆ 106.03   ರೂಪಾಯಿ ಮತ್ತು ಡೀಸೆಲ್  92.76 ರೂಪಾಯಿ. ಮುಂಬಯಿಯಲ್ಲಿ ಪೆಟ್ರೋಲ್  ಬೆಲೆ 106.031 ರೂಪಾಯಿ ಮತ್ತು   ಡೀಸೆಲ್  ಬೆಲೆ 94. 27 ರೂಪಾಯಿ. ಚೆನ್ನೈ ಯಲ್ಲಿ  ಪೆಟ್ರೋಲ್  ಬೆಲೆ  102. 63 ರೂಪಾಯಿ  ಡಿಸೇಲ್ ಬೆಲೆ 94.24 ರೂ
ಆಗಿದೆ. 

SMS ಮೂಲಕ ಕೂಡಾ ದರ  ಪರಿಶೀಲಿಸಬಹುದು :
ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸಹ ತಿಳಿಯಬಹುದು ಇಂಡಿಯನ್ ಆಯಿಲ್ ಗ್ರಾಹಕರು RSP ಅನ್ನು 9224992249 ಸಂಖ್ಯೆಗೆ ಕಳುಹಿಸುವ ಮೂಲಕ ಮತ್ತು BPCL ಗ್ರಾಹಕರು RSP ಅನ್ನು 9223112222 ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಇದೆ ವೇಳೆ, HPCL ಗ್ರಾಹಕರು HPPrice ಅನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು. 

ಇದನ್ನೂ ಓದಿ : ಪೆಟ್ರೋಲ್ ಕಾರುಗಳ ಬೆಲೆಯಲ್ಲಿಯೇ ಸಿಗುವುದು ಎಲೆಕ್ಟ್ರಿಕ್ ವಾಹನ : ಕೇಂದ್ರ ಸಚಿವ ಗಡ್ಕರಿ ಮಾಹಿತಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News