Petrol-Diesel Price Hike: ಸೋಮವಾರವೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ

Petrol-Diesel Price Hike: ಸೋಮವಾರ ಬೆಳಗ್ಗೆಯಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಹಾಗೂ ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿದೆ. ಈ ಏರಿಕೆ ಇಂದು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿದೆ. 

Written by - Yashaswini V | Last Updated : Mar 28, 2022, 07:55 AM IST
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ
  • ಹೊಸ ಬೆಲೆಗಳು ಇಂದು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿವೆ
  • ಪೆಟ್ರೋಲ್ 30 ಪೈಸೆ ಮತ್ತು ಡೀಸೆಲ್ 35 ಪೈಸೆಗಳಷ್ಟು ದುಬಾರಿಯಾಗಿದೆ
Petrol-Diesel Price Hike: ಸೋಮವಾರವೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ title=
Petrol Diesel Price in Bengaluru

Petrol-Diesel Price Hike:  ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ  ಏರಿಕೆಯಾಗಿದೆ. ಇನ್ನು ಕಳೆದ 7 ದಿನಗಳಲ್ಲಿ 6 ಬಾರಿ  ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿದ್ದು ಒಟ್ಟು 4 ರೂಪಾಯಿ 10 ಪೈಸೆ ಏರಿಕೆಯಾಗಿದೆ.  ಇದರೊಂದಿಗೆ ಪೆಟ್ರೋಲ್ ಡೀಸೆಲ್ ದರ ನೂರರ ಗಡಿ ಮುಟ್ಟುತ್ತಿದೆ.

ಸೋಮವಾರ ಬೆಳಗ್ಗೆಯಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಹಾಗೂ ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿದೆ. ಈ ಏರಿಕೆ ಇಂದು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿದೆ. ಇದಾದ ಬಳಿಕ ಇಂದು ಪೆಟ್ರೋಲ್ ಬೆಲೆ (Petrol Price) ಲೀಟರ್‌ಗೆ 99.41 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 90.77 ರೂ.ಗೆ ಏರಿಕೆಯಾಗಿದೆ.

ಇದನ್ನೂ ಓದಿ- Bike: ಇದು ಬೈಕ್ ಅಲ್ಲ ದ್ವಿಚಕ್ರ ಕಾರ್!

ದೇಶದಲ್ಲಿ ಮಾರ್ಚ್ 22 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು (Diesel Price) ಹೆಚ್ಚಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಒಂದು ವಾರದಲ್ಲಿ ತೈಲ ಬೆಲೆ 4.10 ರೂ. ಹೆಚ್ಚಳಗೊಂಡಿದೆ. ಆರ್ಥಿಕ ತಜ್ಞರ ಪ್ರಕಾರ ರಷ್ಯಾ-ಉಕ್ರೇನ್ ಯುದ್ಧವು ಕೊನೆಗೊಳ್ಳುವವರೆಗೆ, ಈ ಬೆಳವಣಿಗೆಯು ಇದೇ ರೀತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ- ಮಾರುಕಟ್ಟೆಗೆ ಬರುತ್ತಿದೆ ಅಗ್ಗದ ಬೆಲೆಯ ಎರಡು ಮಾರುತಿ ಕಾರುಗಳು..!

ಸಾರ್ವಜನಿಕ ಜೇಬಿನ ಮೇಲೆ ಪರಿಣಾಮ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿನ ಈ ಏರಿಕೆಯು ಸಾರ್ವಜನಿಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ.   ಒಂದೆಡೆ ಈಗಾಗಲೇ ಅಡುಗೆ ಅನಿಲ ದರ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಪೆಟ್ರೋಲ್-ಡೀಸೆಲ್ ದರ ಗಗನಮುಖಿ ಆಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News