ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿದೆ.ಇದೇ ಸಮಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol, Diesel Price Today)ಗಳು ರಾಷ್ಟ್ರ ಮಟ್ಟದಲ್ಲಿ ಸ್ಥಿರವಾಗಿವೆ. ಸತತ 21ನೇ ದಿನವಾದ ಸೋಮವಾರವೂ ಭಾರತೀಯ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಕ್ಟೋಬರ್‌ನಲ್ಲಿ ದಾಖಲೆಯ ಹಣದುಬ್ಬರದ ಬಳಿಕ ದೀಪಾವಳಿ ಹಬ್ಬದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಪರಿಷ್ಕರಣೆಯಾಗಿಲ್ಲ.


COMMERCIAL BREAK
SCROLL TO CONTINUE READING

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ(Fuel Rates)ಯಲ್ಲಿ ಏರಿಳಿತಗಳಿದ್ದರೂ ರಾಷ್ಟ್ರ ಮಟ್ಟದಲ್ಲಿ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಗತ್ಯವಸ್ತುಗಳ ಜೊತೆಗೆ ನಿರಂತರವಾಗಿ ಇಂಧನ ದರವೂ ಏರಿಕೆಯಾದ ಪರಿಣಾಮ ಜನಸಾಮಾನ್ಯರು ಹೈರಾಣಾಗಿದ್ದರು. ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜನರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರವು ದೀಪಾವಳಿ ಹಬ್ಬದ ಮುನ್ನಾದಿನದಂದು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ.ಕಡಿತಗೊಳಿಸಿತ್ತು.


ದನ್ನೂ ಓದಿ :7th Pay Commission:Good News - ಹೆಚ್ಚಾಗಲಿದೆಯಾ ಸರ್ಕಾರಿ ನೌಕರರ ಫಿಟ್ಮೆಂಟ್ ಫ್ಯಾಕ್ಟರ್? ಕನಿಷ್ಠ ವೇತನ ರೂ 26,000


ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL)ನ ಇತ್ತೀಚಿನ ನವೀಕರಣದ  ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 103.97 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 86.67 ರೂ.ನಷ್ಟಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.98 ರೂ. ಇದ್ದರೆ, ಡೀಸೆಲ್ 94.14 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 100.58 ರೂ. ಇದ್ದರೆ, ಡೀಸೆಲ್ ಬೆಲೆ 85.01 ರೂ. ಇದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 104.67 ರೂ. ಇದ್ದರೆ, ಡೀಸೆಲ್ ಬೆಲೆ(Diesel Price) 89.79 ರೂ. ಇದೆ. ತಮಿಳುನಾಡಿನ ಚೆನ್ನೈನಲ್ಲಿ ಪೆಟ್ರೋಲ್ ದರ 1 ಲೀಟರ್‌ಗೆ 101.40 ರೂ.ಇದ್ದರೆ, ಡೀಸೆಲ್ 91.43 ರೂ. ಇದೆ. ಹೈದರಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 108.20 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.62 ರೂ. ಇದೆ. ಭೋಪಾಲ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.23 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 90.87 ರೂ. ಇದೆ.


ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.


ಇದನ್ನೂ ಓದಿ: Flipkart ಆರಂಭಿಸಿದೆ ‘SastaSundar’ ಬ್ಯುಸಿನೆಸ್, ನಿಮ್ಮ ಆರೋಗ್ಯದ ಬಗ್ಗೆ ವಹಿಸಲಿದೆ ವಿಶೇಷ ಕಾಳಜಿ


ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.


ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price)ಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.