Petrol-Diesel Price Today: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಸೆ.28 ದರ ಎಷ್ಟಿದೆ?

ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 25 ಪೈಸೆಯಷ್ಟು ಹೆಚ್ಚಳವಾಗಿದೆ.

Written by - Puttaraj K Alur | Last Updated : Sep 28, 2021, 10:22 AM IST
  • ಕಳೆದ 3 ವಾರಗಳ ಕಾಲ ಸ್ಥಿರವಾಗಿದ್ದ ಇಂಧನ ದರಗಳಲ್ಲಿ ಮತ್ತೆ ಏರಿಕೆಯಾಗಿದೆ
  • ಪ್ರತಿ ಲೀಟರ್ ಪೆಟ್ರೋಲ್ 20 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ 25 ಪೈಸೆಯಷ್ಟು ಹೆಚ್ಚಳವಾಗಿದೆ
  • ದೇಶದ 4 ಪ್ರಮುಖ ಮೆಟ್ರೋ ನಗರಗಳಲ್ಲಿ ತೈಲ ಬೆಲೆಗಳು ಅತ್ಯಧಿಕವಾಗಿದೆ
Petrol-Diesel Price Today: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಸೆ.28 ದರ ಎಷ್ಟಿದೆ?

ನವದೆಹಲಿ: ಬರೋಬ್ಬರಿ 3 ವಾರಗಳ ಕಾಲ ಸ್ಥಿರವಾಗಿಯೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಂಗಳವಾರ ಮತ್ತೆ ಏರಿಕೆಯಾಗಿದೆ. ತೈಲ ಕಂಪನಿಗಳು ಇಂಧನ ದರವನ್ನು ಕೊಂಚ ಏರಿಕೆ ಮಾಡಿವೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 25 ಪೈಸೆಯಷ್ಟು ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 101.39 ರೂ. ಇದೆ. ಡೀಸೆಲ್ ಪ್ರತಿ ಲೀಟರ್‌ಗೆ 89.57 ರೂ.ಗೆ ಮಾರಾಟವಾಗುತ್ತಿದೆ. ಡೀಸೆಲ್ ಬೆಲೆ 4 ದಿನಗಳಲ್ಲಿ 70 ಪೈಸೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ.

ಇದನ್ನೂ ಓದಿ: ZEEL-Sony ಮೆಗಾ ವಿಲೀನಕ್ಕೆ Invesco ಅಸಮಾಧಾನ ಗೊಂಡಿರುವುದರ ಉದ್ದೇಶವಾದರೂ ಏನು?

ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ 107.47 ರೂ. ಇದ್ದು,  ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 97.21 ರೂ. ಇದೆ. ಸ್ಥಳೀಯ ವ್ಯಾಟ್ ಅಂಶಗಳಿಂದ ದೆಹಲಿ ಮತ್ತು ಮುಂಬೈ ನಡುವಿನ ಬೆಲೆಯಲ್ಲಿನ ವ್ಯತ್ಯಾಸ ಕಂಡುಬರುತ್ತದೆ. ಸರಕು ಶುಲ್ಕಗಳು, ಸ್ಥಳೀಯ ತೆರಿಗೆಗಳು ಮತ್ತು ವ್ಯಾಟ್ ಆಧಾರದ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲಾಗಿದೆ. ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಖ್, ಮತ್ತು ಬಿಹಾರ ಮತ್ತು ಪಂಜಾಬ್‌ನ ಕೆಲವು ನಗರಗಳಲ್ಲಿ ಪೆಟ್ರೋಲ್100 ರೂ. ಗಡಿ ದಾಟಿದೆ. 5 ದಿನಗಳ ರ್ಯಾಲಿಯ ನಂತರ ಮಂಗಳವಾರ ಬೆಳಿಗ್ಗೆ ಕಚ್ಚಾ ತೈಲ ಬೆಲೆಗಳಲ್ಲಿ ಸ್ಥಿರತೆ ಕಂಡುಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 79.36 ಡಾಲರ್ ನಷ್ಟಿದೆ.  

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಇಂತಿವೆ:

ನಗರ ಪೆಟ್ರೋಲ್ (ಪ್ರತಿ ಲೀಟರ್‌ಗೆ)

ಡೀಸೆಲ್ (ಪ್ರತಿ ಲೀಟರ್‌ಗೆ)

ಬೆಂಗಳೂರು 104.92 ರೂ. 95.06 ರೂ.
ನವದೆಹಲಿ 101.39 ರೂ.

89.57 ರೂ.

ಮುಂಬೈ 107.47 ರೂ.

97.21 ರೂ.

ಚೆನ್ನೈ 99.15 ರೂ.

94.17 ರೂ.

ಕೋಲ್ಕತ್ತಾ 101.87 ರೂ.

92.67 ರೂ.

ಪಾಟ್ನಾ

104.14 ರೂ. 95.80 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಇದನ್ನೂ ಓದಿ: PM Kisan Latest News: ಪಿಎಂ ಕಿಸಾನ್ ಅಡಿಯಲ್ಲಿ 4000 ರೂಗಳನ್ನು ಪಡೆಯಲು ಕೊನೆಯ ಅವಕಾಶ! ಈಗಲೇ ನೋಂದಣಿ ಮಾಡಿ

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News