Petrol Diesel Price: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ...

ಮಂಗಳವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 25 ಪೈಸೆಯಷ್ಟು ಹೆಚ್ಚಳ ಮಾಡಲಾಗಿತ್ತು.

Written by - Puttaraj K Alur | Last Updated : Sep 29, 2021, 10:19 AM IST
  • ದೇಶದಾದ್ಯಂತ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ
  • ಭಾರತದ 4 ಪ್ರಮುಖ ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ
  • ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 104.92 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ 95.06 ರೂ. ಇದೆ
Petrol Diesel Price: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ... title=
ಬುಧವಾರ ಇಂಧನ ದರ ಯಥಾಸ್ಥಿತಿಯಲ್ಲಿದೆ

ನವದೆಹಲಿ: ದೇಶದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol and Diesel Prices)ಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೇಶದ ತೈಲ ಮಾರ್ಕೆಟಿಂಗ್ ಕಂಪನಿಗಳು (ಒಎಂಸಿ) ಇಂಧನ ದವರನ್ನು ಯಥಾಸ್ಥಿತಿಯಲ್ಲಿ ಇರಿಸಿವೆ. ಕಳೆದ ಕೆಲವು ವಾರಗಳವರೆಗೆ ಯಥಾಸ್ಥಿತಿಯಲ್ಲಿದ್ದ ತೈಲ ದರವನ್ನು ಮಂಗಳವಾರ ಹೆಚ್ಚಿಸಲಾಗಿತ್ತು. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 25 ಪೈಸೆಯಷ್ಟು ಹೆಚ್ಚಳ ಮಾಡಲಾಗಿತ್ತು. ಆದರೆ ಬುಧವಾರ ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ದೇಶಾದ್ಯಂತ ಸ್ಥಿರವಾಗಿವೆ. 

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ (Petrol Price) 104.92 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ದರವು 95.06 ರೂ.ನಷ್ಟು ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.39 ರೂ. ಮತ್ತು ಡೀಸೆಲ್ ದರ 89.57 ರೂ. ಇದ್ದರೆ, ವಾಣಿಜ್ಯ ನಗರಿ ಮುಂಬೈನಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ 97.21 ರೂ. ಮತ್ತು ಪೆಟ್ರೋಲ್ ಬೆಲೆ 107.47 ರೂ. ನಂತೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 109.85 ರೂ. ಮತ್ತು ಡೀಸೆಲ್ ದರ 92.67 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 99.15 ರೂ. ಮತ್ತು ಡೀಸೆಲ್ ಬೆಲೆ 94.17 ರೂ. ನಂತೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: New Wage Code: ಉದ್ಯೋಗಿಗಳಿಗೆ ವಾರದಲ್ಲಿ 3 ದಿನ ರಜೆ ಮತ್ತು ಗರಿಷ್ಠ 12 ಗಂಟೆ ಕೆಲಸ

ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ. 

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಇದನ್ನೂ ಓದಿ: PM Kisan Latest News: ಪಿಎಂ ಕಿಸಾನ್ ಅಡಿಯಲ್ಲಿ 4000 ರೂಗಳನ್ನು ಪಡೆಯಲು ಕೊನೆಯ ಅವಕಾಶ! ಈಗಲೇ ನೋಂದಣಿ ಮಾಡಿ

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News