ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇಂದು(ನ.15) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price Today)ಯನ್ನು ಯಥಾಸ್ಥಿತಿಯಲ್ಲಿ ಇರಿಸಿವೆ. ದೇಶಾದ್ಯಂತ ಇಂಧನದ ಚಿಲ್ಲರೆ ದರಗಳು ಸ್ಥಳೀಯ ತೆರಿಗೆಗಳ ಮಟ್ಟವನ್ನು ಅವಲಂಬಿಸಿ ಬದಲಾಗುತ್ತವೆ. ತೈಲ ಕಂಪನಿಗಳು ಸತತ 11ನೇ ದಿನವಾದ ಸೋಮವಾರವೂ ಇಂಧನ ದರಗಳನ್ನು ಪರಿಷ್ಕರಣೆ ಮಾಡಿಲ್ಲ.    


COMMERCIAL BREAK
SCROLL TO CONTINUE READING

ಇದುವರೆಗೆ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು(States and Union Territories) ಇದುವರೆಗೆ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಲಾಗಿದೆ. ಇದರಿಂದ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಗಳು ಇಳಿಕೆಯಾಗಿ ಜನಸಾಮಾನ್ಯರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ. ಕಾಂಗ್ರೆಸ್ ಸರ್ಕಾರವಿರುವ ಪಂಜಾಬ್ ನಲ್ಲಿ ವ್ಯಾಟ್ ಕಡಿತಗೊಳಿಸಿದ ಬಳಿಕ ದೇಶದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಅತಿದೊಡ್ಡ ಇಳಿಕೆಗೆ ಸಾಕ್ಷಿಯಾಗಿದೆ. ಅದೇ ರೀತಿ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಸ್ಥಳೀಯ ತೆರಿಗೆಗಳಲ್ಲಿನ ಕಡಿತದಿಂದಾಗಿ ಡೀಸೆಲ್ ದರದಲ್ಲಿ ಅತಿದೊಡ್ಡ ಇಳಿಕೆಗೆ ಸಾಕ್ಷಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.


ಇದನ್ನೂ ಓದಿ: MG ZS: ಈ ಎಲೆಕ್ಟ್ರಿಕ್ ಕಾರು ಒಂದೇ ಚಾರ್ಜ್ ನಲ್ಲಿ 440 ಕಿಮೀ ಓಡುತ್ತದೆ


ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್(Diesel Price) ರಾಜಸ್ಥಾನದ ಗಂಗಾನಗರದಲ್ಲಿ ದುಬಾರಿಯಾಗಿದೆ ಮತ್ತು ಪೋರ್ಟ್ ಬ್ಲೇರ್‌ನಲ್ಲಿ ಅಗ್ಗವಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 82.96 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 77.13 ರೂ. ಇದೆ. ರಾಜಸ್ಥಾನದ ಗಂಗಾನಗರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 116.34 ರೂ. ಇದೆ ಎಂದು ವರದಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ನ ಬೆಲೆ ಲೀಟರ್‌ಗೆ 103.97 ರೂ. ಮತ್ತು ಡೀಸೆಲ್ ಬೆಲೆಯು 86.67 ರೂ.ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.98 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.14 ರೂ. ಇದೆ.


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ(Petrol Price) ಲೀಟರ್‌ಗೆ 100.58 ರೂ. ಹಾಗೂ ಡೀಸೆಲ್ ಬೆಲೆ 85.01 ರೂ. ಇದೆ. ಕೋಲ್ಕತ್ತಾದಲ್ಲಿ ಸಹ ಬೆಲೆಗಳು ಸ್ಥಿರವಾಗಿದ್ದು, ಪೆಟ್ರೋಲ್ ಬೆಲೆ ಲೀಟರ್‌ಗೆ 104.67 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.79 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.40 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.43 ರೂ.ನಂತೆ ಮಾರಾಟವಾಗುತ್ತಿದೆ.   


ಇದನ್ನೂ ಓದಿ: SBI Cashback Offer:SBI ಕಾರ್ಡ್ ಹೊಂದಿದವರಿಗೆ ರೂ.20,000 ಕ್ಯಾಶ್ ಬ್ಯಾಕ್ ಕೊಡುಗೆ, ವಿವರ ಇಲ್ಲಿದೆ


ನಿಮ್ಮ ನಗರದಲ್ಲಿ ಬೆಲೆ ಎಷ್ಟು?


ನೀವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು SMS ಮೂಲಕವೂ ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್(Indian Oil) ವೆಬ್‌ಸೈಟ್ ಪ್ರಕಾರ, ನೀವು ಆರ್‌ಎಸ್‌ಪಿ ಮತ್ತು ನಿಮ್ಮ ನಗರ ಕೋಡ್ ಅನ್ನು ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು. ಪ್ರತಿ ನಗರದ ಕೋಡ್ ವಿಭಿನ್ನವಾಗಿದೆ, ಅದನ್ನು ನೀವು ಐಒಸಿಎಲ್ ವೆಬ್‌ಸೈಟ್‌ನಿಂದ ಪಡೆಯುತ್ತೀರಿ.


ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಹೊಸ ದರಗಳು ಬೆಳಿಗ್ಗೆ 6 ಗಂಟೆಯಿಂದ ಅನ್ವಯವಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.