ನವದೆಹಲಿ: ದೀಪಾವಳಿ ಮತ್ತು ಧನ್ತೇರಸ್‌ಗೆ ಮುನ್ನವೇ ಜನಸಾಮಾನ್ಯರಿಗೆ ಮತ್ತಷ್ಟು ತೈಲಬೆಲೆ ಏರಿಕೆ ಬಿಸಿ ತಟ್ಟಿದೆ. ಇಂದು ಕೂಡ(ಅ.29) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ. ತೈಲ ಮಾರುಕಟ್ಟೆ ಕಂಪನಿಗಳು ಸತತ 3ನೇ ದಿನವೂ ಇಂಧನ ದರವನ್ನು ಹೆಚ್ಚಿಸಿವೆ. ಪೆಟ್ರೋಲ್ ಮತ್ತು ಡೀಸೆಲ್ ದರ(Petrol, Diesel Price)ಗಳು ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನಸಾಮಾನ್ಯರು ಪರದಾಡುವಂತಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮತ್ತೆ ದೇಶಾದ್ಯಂತ ಜಾರಿಯಾಗಲಿದೆಯೇ Lockdown? ರೈಲು ಸಂಚಾರದಲ್ಲೂ ವ್ಯತ್ಯಯ ? ಇಲ್ಲಿದೆ ಸಂಪೂರ್ಣ ಮಾಹಿತಿ


ಶುಕ್ರವಾರ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ(Petrol Price) ಲೀಟರ್‌ಗೆ 108.64 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 97.02 ರೂ. ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್(Diesel price) ತಲಾ 37 ಪೈಸೆ ಹೆಚ್ಚಳವಾಗಿದೆ.     


ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು


ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 112.43 ರೂ. ಹಾಗೂ ಡೀಸೆಲ್ 103.35 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 114.47 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 105.49 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 105.43 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 101.25 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.12 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 100.49 ಆಗಿದೆ. ಹೈದರಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 113 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 106.22 ರೂ. ಮತ್ತು ಲಕ್ನೋದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 105.56 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 97.24 ರೂ. ತಲುಪಿದೆ.


ಇದನ್ನೂ ಓದಿ: ITR filing FY 2020-21: ಎಸ್‌ಬಿಐ ಯೋನೋ ಆ್ಯಪ್‌ ಬಳಸಿ ಉಚಿತವಾಗಿ ತೆರಿಗೆ ರಿಟರ್ನ್ ಸಲ್ಲಿಸಿ, ಹೇಗೆಂದು ತಿಳಿಯಿರಿ


ಜಾಗತಿಕ ತೈಲ ಬೆಲೆಗಳಲ್ಲಿ ಯಾವುದೇ ಇಳಿಕೆ ಲಕ್ಷಣ ತೋರದ ಕಾರಣ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ದರಗಳು ಗಗನಕ್ಕೇರುತ್ತಿವೆ. ಜಾಗತಿಕವಾಗಿ ಇಂಧನ ಬೇಡಿಕೆಯು ದೃಢವಾಗಿದೆ. ಕಚ್ಚಾ ತೈಲ ಬೆಲೆಗಳು 3 ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿದ್ದು, ಪ್ರತಿ ಬ್ಯಾರೆಲ್‌ಗೆ 86 ಅಮೆರಿಕನ್ ಡಾಲರ್ ಗಿಂತಲೂ ಹೆಚ್ಚಿದೆ. ಸೆಪ್ಟೆಂಬರ್ 5ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಿದ ನಂತರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಸ್ಟ್ ನಲ್ಲಿನ ಸರಾಸರಿ ಬೆಲೆಗೆ ಹೋಲಿಸಿದರೆ ಪ್ರತಿ ಬ್ಯಾರೆಲ್‌ಗೆ ಸುಮಾರು 9 ರಿಂದ 10 ಡಾಲರ್ ನಷ್ಟು ಹೆಚ್ಚಾಗಿದೆ ಎಂದು IANS ವರದಿ ತಿಳಿಸಿದೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ