ನವದೆಹಲಿ: ದೇಶಾದ್ಯಂತ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ(Petrol, Diesel Price Today) ಕಂಡಿದ್ದು, ದಾಖಲೆ ಮಟ್ಟಕ್ಕೆ ತಲುಪಿದೆ. ಮಂಗಳವಾರ ಪೆಟ್ರೋಲ್ ಬೆಲೆಯನ್ನು 25 ಪೈಸೆ ಮತ್ತು ಡೀಸೆಲ್ ದರವನ್ನು 30 ಪೈಸೆ ಹೆಚ್ಚಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (OMC) ನಿರ್ಧಾರದ ನಂತರ ದೇಶದಲ್ಲಿ ಇಂಧನ ದರಗಳಲ್ಲಿ ಏರಿಕೆ ಕಂಡಿದೆ. ಸತತ 4 ದಿನಗಳವರೆಗೆ ತೈರಲ ಏರಿಕೆಯಾದ ನಂತರ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ.    


COMMERCIAL BREAK
SCROLL TO CONTINUE READING

ಪ್ರಮುಖ ನಗರಗಳಲ್ಲಿನ ಪೆಟ್ರೋಲ್ & ಡೀಸೆಲ್ ಬೆಲೆ  


ರಾಷ್ಟ್ರ ರಾಜಧಾನಿ ದೆಹಲಿ(Delhi)ಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 102.64 ರೂ. ಮತ್ತು ಡೀಸೆಲ್ ದರ(Diesel Price today) ಪ್ರತಿ ಲೀಟರ್ ಗೆ 91.07 ರೂ. ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ರಿ ಲೀಟರ್ ಪೆಟ್ರೋಲ್ 26 ಪೈಸೆ ಏರಿಕೆ ಕಂಡಿದ್ದು, 106.21 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 32 ಪೈಸೆ ಏರಿಕೆ ಕಂಡು 96.66 ರೂ.ಗೆ ತಲುಪಿದೆ. ವಾಣಿಜ್ಯ ನಗರಿ ಮುಂಬೈ(Mumbai)ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 108.67 ರೂ. ಮತ್ತು ಡೀಸೆಲ್ ದರ 98.80 ರೂ. ಇದೆ.


ಇದನ್ನೂ ಓದಿ: UPI payments: Cashback ಆಫರ್ ಆರಂಭಿಸಿದ WhatsApp..!


ಚೆನ್ನೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 100.23 ರೂ. ಮತ್ತು ಡೀಸೆಲ್ ಬೆಲೆ 95.69 ರೂ.ನಲ್ಲಿ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 103.36 ರೂ. ಮತ್ತು ಡೀಸೆಲ್ ಬೆಲೆ 94.17 ರೂ. ಇದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸೆಪ್ಟೆಂಬರ್ 5ರಿಂದ ಸ್ಥಿರವಾಗಿದ್ದವು. ಆದರೆ ತೈಲ ಕಂಪನಿಗಳು ಅಂತಿಮವಾಗಿ ಕಳೆದ ಮಂಗಳವಾರ ಇಂಧನ ಬೆಲೆಯನ್ನು ಹೆಚ್ಚಿಸಿವೆ. 


ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.


ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ 7 ಲಕ್ಷಕ್ಕೆ ಏರಿಕೆ? ಪೂರ್ಣ ಲೆಕ್ಕಾಚಾರ ಪರಿಶೀಲಿಸಿ


ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.


ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.