Petrol Diesel Price Today: ವಾಹನ ಸವಾರರೇ ಗಮನಿಸಿ, ಇಂದಿನ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಸ್ಥಿರ

ದೇಶದ ಜನಸಾಮಾನ್ಯರ ಆಕ್ರೋಶಕ್ಕೆ ಮಣಿದಿದ್ದ ಕೇಂದ್ರ ಸರ್ಕಾರವು ನವೆಂಬರ್ 4 ರಂದು ಪೆಟ್ರೋಲ್ ಮೇಲೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು.

Written by - Puttaraj K Alur | Last Updated : Dec 1, 2021, 10:09 AM IST
  • ಸತತ 27ನೇ ದಿನವೂ ಪೆಟ್ರೋಲ್-ಡಿಸೇಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ
  • ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 100.58 ರೂ,, ಡೀಸೆಲ್ 85.01 ರೂ.ನಂತೆ ಮಾರಾಟವಾಗುತ್ತಿದೆ
  • ನ.3ರಂದು ಕೇಂದ್ರವು ಪೆಟ್ರೋಲ್ ಮೇಲೆ 5 ರೂ. & ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕ ಕಡಿತಗೊಳಿಸಿತ್ತು
Petrol Diesel Price Today: ವಾಹನ ಸವಾರರೇ ಗಮನಿಸಿ, ಇಂದಿನ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಸ್ಥಿರ  title=
ಪೆಟ್ರೋಲ್-ಡಿಸೇಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ

ನವದೆಹಲಿ: ಕೊರೊನಾ ಸೋಂಕಿನ ಹೊಸ ರೂಪಾಂತರವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮೇಲೆ ಪರಿಣಾಮ ಬೀರಿದೆ. ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 70 ಅಮೆರಿಕನ್ ಡಾಲರ್ ಗಿಂತಲೂ ಕಡಿಮೆಯಾಗಿದೆ. ಇದೇ ವೇಳೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಕೂಡ ಇಳಿಕೆಯಾಗಿದೆ. ಕಚ್ಚಾ ತೈಲ ಬೆಲೆಗಳ ಮೃದುತ್ವದ ನಡುವೆ ವರ್ಷದ ಕೊನೆಯ ತಿಂಗಳ ಆರಂಭದಲ್ಲಿ(ಡಿಸೆಂಬರ್ 1) ರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ.  

ಭಾರತೀಯ ಮಾರುಕಟ್ಟೆಯಲ್ಲಿ ಇಂದು (ಬುಧವಾರ) ಪೆಟ್ರೋಲ್-ಡೀಸೆಲ್ ಬೆಲೆ(Petrol Diesel Price Today)ಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ 27ನೇ ದಿನವೂ ಭಾರತೀಯ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ನ.3ರಂದು ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ. ಕಡಿತಗೊಳಿಸಿತ್ತು. ಅಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರಾಷ್ಟ್ರ ಮಟ್ಟದಲ್ಲಿ ಸ್ಥಿರವಾಗಿಯೇ ಉಳದಿವೆ.

ಇದನ್ನೂ ಓದಿ: LPG Price today : LPG ದರ ಹೆಚ್ಚಳ , ತಿಂಗಳ ಮೊದಲ ದಿನವೇ ಬೆಲೆ ಏರಿಕೆ ಬಿಸಿ

ರಾಜ್ಯ ಮಟ್ಟದಲ್ಲಿ ಇಂಧನದ ಮೇಲಿನ ವ್ಯಾಟ್‌(Vat)ನ ಕಾರಣ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿಭಿನ್ನವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.97 ರೂ. ಇದ್ದರೆ, ಡಿಸೇಲ್ ದರ 86.67 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.98 ರೂ. ಇದ್ದರೆ, ಡಿಸೇಲ್ ಬೆಲೆ 94.14 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 100.58 ರೂ. ಇದ್ದರೆ, ಡೀಸೆಲ್ 85.01 ರೂ. ದರದಲ್ಲಿ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 104.67 ರೂ. ಇದ್ದರೆ, ಡಿಸೇಲ್ ದರ 89.79 ರೂ. ಇದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ(Petrol Price)ವು 101.40 ರೂ. ಇದ್ದರೆ, ಡಿಸೇಲ್ 91.43 ರೂ. ಇದೆ. ಭೋಪಾಲ್ ನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 107.23 ರೂ. ಇದ್ದರೆ, ಡೀಸೆಲ್ 90.87 ರೂ. ಇದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 95.28 ರೂ. ಇದ್ದರೆ, ಡಿಸೇಲ್ ದರ 86.80 ರೂ. ಇದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್ ಲೀಟರ್‌ಗೆ 112 ರೂ. ಇದ್ದರೆ, ಡೀಸೆಲ್ ಬೆಲೆ 95.26 ರೂ. ಇದೆ. ಅದರಂತೆ ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 82.96 ರೂ. ಇದ್ದರೆ, ಡಿಸೇಲ್ ಬೆಲೆ 77.13 ರೂ.ಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಕೂಲಿ ಕಾರ್ಮಿಕರಿಗೆ ಸಂತಸದ ಸುದ್ದಿ: ದಿನಕ್ಕೆ ಕೇವಲ 2 ರೂ.ಗೆ 36 ಸಾವಿರ ಪಿಂಚಣಿ ಪಡೆಯಿರಿ

ಕೇಂದ್ರ ಸರ್ಕಾರ(Central Government)ವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ, ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿವೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕರ್ನಾಟಕ, ಪುದುಚೇರಿ, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್, ತ್ರಿಪುರಾ, ಅಸ್ಸಾಂ, ಸಿಕ್ಕಿಂ, ಬಿಹಾರ, ಮಧ್ಯಪ್ರದೇಶ, ಗೋವಾ, ಗುಜರಾತ್, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು, ಚಂಡೀಗಢ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಲಡಾಖ್. ಆದರೆ, ಬಿಜೆಪಿಯೇತರ ರಾಜ್ಯಗಳಾದ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ದೆಹಲಿ ಇನ್ನೂ ವ್ಯಾಟ್ ಕಡಿತಗೊಳಿಸಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News