Today Petrol-Diesel Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ನಿಮ್ಮ ನಗರದ ದರ ಪರಿಶೀಲಿಸಿರಿ

ಸೆ.1 ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 15 ಪೈಸೆಯಷ್ಟು ಇಳಿಕೆ ಮಾಡಿವೆ.

Written by - Puttaraj K Alur | Last Updated : Sep 21, 2021, 10:01 AM IST
  • ದೇಶದ 4 ಮಹಾನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ
  • ಸತತ 16ನೇ ದಿನವಾದ ಮಂಗಳವಾರವೂ ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ
  • ಪ್ರಸ್ತುತ ದೇಶದ 4 ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಇಂಧನ ದರ ಅತ್ಯಧಿಕವಾಗಿದೆ
Today Petrol-Diesel Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ನಿಮ್ಮ ನಗರದ ದರ ಪರಿಶೀಲಿಸಿರಿ   title=
ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸ್ಥಿರವಾಗಿವೆ (Photo Courtesy:@Zee News)

ನವದೆಹಲಿ: ದೇಶದ 4 ಮಹಾನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಸ್ಥಿರವಾಗಿದೆ. ಸತತ 16ನೇ ದಿನವೂ ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 101.19 ಮತ್ತು ಪ್ರತಿ ಲೀಟರ್ ಡೀಸೆಲ್ ದರ 88.62 ರೂ. ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.26 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ 96.16 ರೂ. ಇದೆ.   

ಪ್ರಸ್ತುತ 4 ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಇಂಧನ ದರ ಅತ್ಯಧಿಕವಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿ ಮಾಹಿತಿ ನೀಡಿದೆ. ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ನಿಂದಾಗಿ ಇಂಧನ ದರಗಳು ರಾಜ್ಯದಾದ್ಯಂತ ಬದಲಾಗುತ್ತವೆ. ತಿಂಗಳ ಆರಂಭದಲ್ಲಿ ಅಂದರೆ ಸೆಪ್ಟೆಂಬರ್ 1 ರಂದು, ಭಾರತೀಯ ಮಾರುಕಟ್ಟೆಯಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 15 ಪೈಸೆಯಷ್ಟು ಇಳಿಕೆ ಮಾಡಿವೆ. ಏತನ್ಮಧ್ಯೆ ಸೆಪ್ಟೆಂಬರ್ 5 ರಂದು ಆಟೋ ಇಂಧನದ ದರವನ್ನು ಪ್ರತಿ ಲೀಟರ್‌ಗೆ 15 ಪೈಸೆ ಇಳಿಸಲಾಗಿದೆ.

ಇದನ್ನೂ ಓದಿ: IRCTC ನೀಡುತ್ತಿದೆ ಲಕ್ಷಾಧಿಪತಿ ಆಗುವ ಅವಕಾಶ

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಇಂತಿವೆ:

ನಗರ ಪೆಟ್ರೋಲ್ (ಪ್ರತಿ ಲೀಟರ್‌ಗೆ)

ಡೀಸೆಲ್ (ಪ್ರತಿ ಲೀಟರ್‌ಗೆ)

ಬೆಂಗಳೂರು 104.70 ರೂ. 94.04 ರೂ.
ನವದೆಹಲಿ 101.19 ರೂ.

88.62 ರೂ.

ಮುಂಬೈ 107.26 ರೂ.

96.19 ರೂ.

ಚೆನ್ನೈ 99.06 ರೂ.

93.33 ರೂ.

ಕೋಲ್ಕತ್ತಾ 101.62 ರೂ.

91.71 ರೂ.

ಪಾಟ್ನಾ

103.79 ರೂ. 94.55 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಇದನ್ನೂ ಓದಿ: PM Kisan Latest News: ಪಿಎಂ ಕಿಸಾನ್ ಅಡಿಯಲ್ಲಿ 4000 ರೂಗಳನ್ನು ಪಡೆಯಲು ಕೊನೆಯ ಅವಕಾಶ! ಈಗಲೇ ನೋಂದಣಿ ಮಾಡಿ

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News