ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ಮೆಟ್ರೋ ನಗರಗಳಾದ ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price Today)ಗಳಲ್ಲಿ ಬುಧವಾರ ಯಾವುದೇ ಬದಲಾವಣೆಯಾಗಿಲ್ಲ. ಸತತ 21ನೇ ದಿನವೂ ತೈಲಕಂಪನಿಗಳು ಇಂಧನ ದರವನ್ನು ಪರಿಷ್ಕರಿಸಿಲ್ಲ. ಮೆಟ್ರೋ ನಗರಗಳಲ್ಲಿ ಮಾತ್ರ ಪೆಟ್ರೋಲ್ ಬೆಲೆ(Petrol price)ಅತ್ಯಧಿಕ ಮಟ್ಟದಲ್ಲಿದೆ.


COMMERCIAL BREAK
SCROLL TO CONTINUE READING

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ(Petrol price) 103.97 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 86.67 ರೂ.ನಷ್ಟಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.98 ರೂ. ಇದ್ದರೆ, ಡೀಸೆಲ್ 94.14 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 100.58 ರೂ. ಇದ್ದರೆ, ಡೀಸೆಲ್ ಬೆಲೆ 85.01 ರೂ. ಇದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 104.67 ರೂ. ಇದ್ದರೆ, ಡೀಸೆಲ್ ಬೆಲೆ(Diesel Price) 89.79 ರೂ. ಇದೆ. ತಮಿಳುನಾಡಿನ ಚೆನ್ನೈನಲ್ಲಿ ಪೆಟ್ರೋಲ್ ದರ 1 ಲೀಟರ್‌ಗೆ 101.40 ರೂ.ಇದ್ದರೆ, ಡೀಸೆಲ್ 91.43 ರೂ. ಇದೆ. ಹೈದರಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 108.20 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.62 ರೂ. ಇದೆ. ಭೋಪಾಲ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.23 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 90.87 ರೂ. ಇದೆ.


ಇದನ್ನೂ ಓದಿ: Willful Defaluters: ಉದ್ದೇಶಪೂರ್ವಕವಾಗಿ ಸಾಲ ಮರುಪಾವತಿಸದೆ ಹೋದರೆ ಎಚ್ಚರ! ಇಲ್ಲಿದೆ ಕೇಂದ್ರ ವಿತ್ತ ಸಚಿವೆ ನೀಡಿರುವ ಎಚ್ಚರಿಕೆ


ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್(Diesel price) ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 5 ರೂ. ಮತ್ತು 10 ರೂ.ನಷ್ಟು ಕಡಿತಗೊಳಿಸಿತ್ತು. ಪರಿಣಾಮ ಅಗತ್ಯವಸ್ತುಗಳು ಸೇರಿದಂತೆ ಬೆಲೆ ಏರಿಕೆಯಿಂದ ತತ್ತರಿಸಿದ್ದ ದೇಶದ ಜನಸಾಮಾನ್ಯರಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ಕೇಂದ್ರದ ಅಬಕಾರಿ ಸುಂಕ ಕಡಿತದ ನಿರ್ಧಾರದ ಬಳಿಕ ಇದುವರೆಗೆ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್‌ ಅನ್ನು ಕಡಿತಗೊಳಿಸಿವೆ. ಇದರಿಂದ ದೇಶದ ಜನರು ನಿಟ್ಟುಸಿರು ಬಿಡುವಂತಾಗಿದೆ. ಎಎಪಿ ಆಡಳಿತವಿರುವ ದೆಹಲಿ, ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಳ, ಎಡಪಕ್ಷಗಳ ಆಡಳಿತವಿರುವ ಕೇರಳ, ಟಿಆರ್‌ಎಸ್ ನೇತೃತ್ವದ ತೆಲಂಗಾಣ ಮತ್ತು ವೈಎಸ್‌ಆರ್ ಕಾಂಗ್ರೆಸ್ ಆಡಳಿತದ ಆಂಧ್ರಪ್ರದೇಶ ವ್ಯಾಟ್ ಅನ್ನು ಕಡಿತಗೊಳಿಸಿಲ್ಲ. 


ನಿಮ್ಮ ನಗರದ ಪೆಟ್ರೋಲ್-ಡೀಸೆಲ್ ದರ ತಿಳಿಯಿರಿ


ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.


ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.


ಇದನ್ನೂ ಓದಿ: ZEEL-Sony ವಿಲೀನವು ಅಂತಿಮ ಹಂತದಲ್ಲಿದೆ: ZEEL MD ಮತ್ತು CEO ಪುನೀತ್ ಗೋಯೆಂಕಾ


ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price)ಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.