Petrol & Diesel Price: ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ

ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತಾ ಸೇರಿ ದೇಶದ ವಿವಿಧ ನಗರಗಳಲ್ಲಿ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Written by - Puttaraj K Alur | Last Updated : Nov 8, 2021, 08:45 AM IST
  • ಸತತ 4ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ
  • ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 100.58, ಡೀಸೆಲ್ 85.01 ರೂ. ಇದೆ
  • ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಂಚ ರಿಲೀಫ್ ನೀಡಿದ್ದವು
Petrol & Diesel Price: ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ title=
ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸತತ 4ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol, Diesel Prices Today)ಯನ್ನು ಪರಿಷ್ಕರಿಸಿಲ್ಲ. ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ(Petrol Price) ಲೀಟರ್‌ಗೆ 103.97 ರೂ. ಮತ್ತು ಡೀಸೆಲ್‌ನ ಬೆಲೆ ಲೀಟರ್‌ಗೆ 86.67 ರೂ. ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ  ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 109.98 ರೂ. ಮತ್ತು 94.14 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್  100.58 ರೂ. ಇದ್ದರೆ ಮತ್ತು ಡೀಸೆಲ್ ಬೆಲೆ 85.01 ರೂ. ಇದೆ.

ಇದನ್ನೂ ಓದಿ: Bajaj Pulsar: ಕೇವಲ ರೂ.1000 ನೀಡಿ ಬುಕ್ ಮಾಡಿ Bajaj Pulsar, ಮುಂದಿನ ವಾರವೇ ನಿಮ್ಮ ಮನೆ ತಲುಪಲಿದೆ ಬೈಕ್

ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್(Diesel Price)ಕ್ರಮವಾಗಿ 104.67 ರೂ. ಮತ್ತು ₹89.79 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.40 ರೂ. ಇದ್ದರೆ, ಡೀಸೆಲ್ 91.43 ರೂ. ಇದೆ. ಹೈದರಾಬಾದ್‌ನಲ್ಲಿ 1 ಲೀಟರ್ ಪೆಟ್ರೋಲ್ 108.20 ರೂ. ಮತ್ತು 1 ಲೀಟರ್ ಡೀಸೆಲ್‌ಗೆ 94.62 ರೂ. ಇದೆ. ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚವನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ದೇಶದ ಜನರಿಗೆ ಕೊಂಚ ರಿಲೀಫ್ ನೀಡಿದ್ದ ಕೇಂದ್ರ ಸರಕಾರ ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕವನ್ನು 5 ರೂ. ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿತ್ತು. ಇದಾದ ಬೆನ್ನಿಗೆ ರಾಜ್ಯ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತಲಾ 7 ರೂ. ಕಡಿತಗೊಳಿಸಿತ್ತು. ಇದರಿಂದ ಜನಸಾಮಾನ್ಯರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ.   

ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರ(Fuel Rates)ಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.

ಇದನ್ನೂ ಓದಿ: Indian Railways New Rules: ಟಿಕೆಟ್ ಕಾಯ್ದಿರಿಸುವಾಗ ಈ ವಿಶೇಷ ಕೋಡ್ ನೆನಪಿನಲ್ಲಿಡಿ, ಇಲ್ಲದಿದ್ದರೆ ಸೀಟು ಸಿಗುವುದಿಲ್ಲ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price)ಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News