Petrol-Diesel Price: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ; ಗ್ರಾಹಕರ ಜೇಬು ಸುಡುತ್ತಿರುವ ತೈಲದರ
ಕಳೆದ 13 ದಿನಗಳ ಪೈಕಿ 10 ದಿನ ಡೀಸೆಲ್ ಬೆಲೆ ಏರಿಕೆಯಾಗಿದ್ದರೆ, ಹಿಂದಿನ 9 ದಿನಗಳಲ್ಲಿ 7 ದಿನ ಪೆಟ್ರೋಲ್ ಬೆಲೆ ಏರಿಕೆಯಾಗಿದೆ.
ನವದೆಹಲಿ: ಜಾಗತಿಕ ತೈಲ ದರಗಳಲ್ಲಿ ಏರಿಳಿತದ ನಡುವೆ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೊಮ್ಮೆ ಏಕಕಾಲದಲ್ಲಿ ಏರಿಕೆಯಾಗಿದೆ. ಆಯಿಲ್ ಮಾರ್ಕೆಟಿಂಗ್ ಕಂಪನಿಗಳು (OMC) ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 30 ಪೈಸೆ ಹೆಚ್ಚಿಸಿವೆ ಮತ್ತು ಡೀಸೆಲ್ ದರವನ್ನು 35 ಪೈಸೆ ಹೆಚ್ಚಿಸಿವೆ. ಬೆಂಚ್‌ಮಾರ್ಕ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಿಂತ ಹೆಚ್ಚಾಗಿದೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ, ಡೀಸೆಲ್ ದರ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.94 ರೂ ಇದ್ದರೆ, ಡೀಸೆಲ್ ದರ 91.42 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 106.52 ರೂ. ಇದ್ದರೆ, ಡೀಸೆಲ್ ದರ 97.03 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಪೆಟ್ರೋಲ್ ದರ(Petrol price in Mumbai) ಪ್ರತಿ ಲೀಟರ್‌ಗೆ 108.96 ರೂ ಇದ್ದರೆ, ಡೀಸೆಲ್ ಬೆಲೆ 99.17 ರೂ. ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100.49 ರೂ. ಮತ್ತು ಡೀಸೆಲ್ ದರ 95.93 ರೂ ಆಗಿದೆ. ಕೋಲ್ಕತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.65 ರೂ. ಮತ್ತು ಡೀಸೆಲ್ ದರ 94.53 ರೂ. ಇದೆ.
ಇದನ್ನೂ ಓದಿ: Netflix New Feature: ತನ್ನ ಬಳಕೆದಾರರಿಗೆ ಜಬರ್ದಸ್ತ್ ಉಡುಗೊರೆ ನೀಡಿದ Netflix
ಕಳೆದ 13 ದಿನಗಳ ಪೈಕಿ 10 ದಿನ ಡೀಸೆಲ್ ಬೆಲೆ ಏರಿಕೆಯಾಗಿದ್ದರೆ, ಹಿಂದಿನ 9 ದಿನಗಳಲ್ಲಿ 7 ದಿನ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ತೈಲಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡುವ ಮೊದಲು ಜಾಗತಿಕ ತೈಲ ಪರಿಸ್ಥಿತಿಯ ಮೇಲೆ ಗಮನ ನೀಡುತ್ತವೆ. ಕಳೆದ 3 ವಾರಗಳಿಂದ ಪೆಟ್ರೋಲ್ ಬೆಲೆಯನ್ನು ಪರಿಷ್ಕರಿಸಿರಲಿಲ್ಲ. ಆದರೆ ಜಾಗತಿಕ ತೈಲ ಬೆಲೆ ತೀವ್ರ ಏರಿಳಿತದ ಪರಿಣಾಮ ಮತ್ತೆ ತೈಲ ಏರಿಕೆಯಾಗುತ್ತಿದೆ.
ಈ ವಾರದ ಆರಂಭದಲ್ಲಿ ಪ್ರತಿ ಬ್ಯಾರೆಲ್ ತೈಲದರವು 3 ವರ್ಷಗಳ ಗರಿಷ್ಠ ಮಟ್ಟ ಅಂದರೆ 80 ಡಾಲರ್‌ಗಳಷ್ಟು ಏರಿಕೆ ಕಂಡ ನಂತರ, ಜಾಗತಿಕ ಮಾನದಂಡದ ಆಧಾರದ ಮೇಲೆ ಪ್ರತಿ ಬ್ಯಾರೆಲ್‌ಗೆ 78 ಡಾಲರ್‌ಗೆ ಇಳಿದಿತ್ತು. ಈಗ ಮತ್ತೆ ಅದು 81 ಡಾಲರ್‌ಗಳಷ್ಟು ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ(Diesel Price)ವು ಗ್ರಾಹಕರ ಜೇಬು ಸುಡುತ್ತಿದ್ದು, ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.
ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.
ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ 7 ಲಕ್ಷಕ್ಕೆ ಏರಿಕೆ? ಪೂರ್ಣ ಲೆಕ್ಕಾಚಾರ ಪರಿಶೀಲಿಸಿ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.
ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.