Petrol-Diesel Price Today 25th August 2022: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಣದುಬ್ಬರದಿಂದ ಕಂಗೆಟ್ಟಿರುವ ಜನತೆಗೆ ಮತ್ತೊಂದು ಆಘಾತಕಾರಿ ಸುದ್ದಿ ಪ್ರಕಟಗೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ
ಮತ್ತೊಮ್ಮೆ ಏರಿಕೆಯಾಗಿದೆ. ದೀರ್ಘಕಾಲ ಸ್ಥಿರವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೊಮ್ಮೆ ಏರಿಕೆಯಾಗತೊಡಗಿವೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ
ದೇಶದ ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ರಾಜ್ಯ ಸರ್ಕಾರಗಳು ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಲಾರಂಭಿಸಿವೆ. ಈ ಬಾರಿ ಮೇಘಾಲಯ ಸರ್ಕಾರ ಹಣದುಬ್ಬರದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ದೊಡ್ಡ ಹೊಡೆತ ನೀಡಿದೆ. ಮೇಘಾಲಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ರಾಜ್ಯ ತೆರಿಗೆ ಸಚಿವ ಜೇಮ್ಸ್ ಪಿಕೆ ಸಂಗ್ಮಾ ಈ ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ಈ ಹೆಚ್ಚಳಕ್ಕೆ, ನೆರೆಯ ರಾಜ್ಯ ಅಸ್ಸಾಂನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಾರಣ ಎಂದು ಸಂಗ್ಮಾ ಹೇಳಿದ್ದಾರೆ.
ಇದನ್ನೂ ಓದಿ-ಪಿಎಂ ಕಿಸಾನ್ ಪಟ್ಟಿಯಿಂದ ಲಕ್ಷಾಂತರ ಲಾಭಾರ್ಥಿಗಳ ಹೆಸರು ಮಾಯ. ! ನಿಮ್ಮ ಹೆಸರನ್ನೊಮ್ಮೆ ಪರಿಶೀಲಿಸಿ ನೋಡಿ
ಹೊಸ ದರ ಪಟ್ಟಿ ಕೆಳಗಿನಂತಿದೆ
ಹೊಸ ದರಗಳ ಪ್ರಕಾರ, ಇದೀಗ ಮೇಘಾಲಯದ ಬಿರ್ನಿಹಾಟ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 95.1 ಮತ್ತು ಶಿಲ್ಲಾಂಗ್‌ನಲ್ಲಿ 96.83 ರೂ.ಗೆ ಏರಿಕೆಯಾಗಿದೆ, ಆದರೆ ಡೀಸೆಲ್ ಬೆಲೆ ಬಿರ್ನಿಹಾಟ್‌ನಲ್ಲಿ ಲೀಟರ್‌ಗೆ 83.5 ರೂ. ಮತ್ತು ಶಿಲ್ಲಾಂಗ್‌ನಲ್ಲಿ 84.72 ರೂ.ಗೆ ಏರಿಕೆಯಾಗಿದೆ. ಅಂದರೆ, ಅದರಂತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 1.50 ರೂ. ಏರಿಕೆಯಾದಂತಾಗಿದೆ.
ಇದನ್ನೂ ಓದಿ-ರೈಲ್ವೆ ಪ್ರಯಾಣಿಕೆರಿಗೆ WhatsApp ನಿಂದ ಬಂಪರ್ ಫೀಚರ್
ನಿಮ್ಮ ನಗರದಲ್ಲಿ ಪೆಟ್ರೋಲ್-ಡಿಸೇಲ್ ಬೆಲೆ ಎಷ್ಟು ?
>> ದೆಹಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ
>> ಮುಂಬೈ ಪೆಟ್ರೋಲ್ 111.35 ರೂ ಮತ್ತು ಡೀಸೆಲ್ ಲೀಟರ್‌ಗೆ 97.28 ರೂ
>> ಚೆನ್ನೈ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ
>>ಕೋಲ್ಕತ್ತಾ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ
>> ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.96 ರೂ
>> ಲಖನೌದಲ್ಲಿ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.76 ರೂ.
>> ಜೈಪುರದಲ್ಲಿ ಪೆಟ್ರೋಲ್ 108.48 ರೂ ಮತ್ತು ಡೀಸೆಲ್ ಲೀಟರ್‌ಗೆ 93.72 ರೂ
>> ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ ಮತ್ತು ಡೀಸೆಲ್ ಲೀಟರ್‌ಗೆ 96.52 ರೂ.
>> ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ರೂ 84.10 ಮತ್ತು ಡೀಸೆಲ್ ಲೀಟರ್‌ಗೆ ರೂ 79.74
>> ಪಾಟ್ನಾದಲ್ಲಿ ಪೆಟ್ರೋಲ್ ರೂ 107.24 ಮತ್ತು ಡೀಸೆಲ್ ಲೀಟರ್‌ಗೆ ರೂ 94.04
>> ಗುರುಗ್ರಾಮದಲ್ಲಿ 97.18 ರೂ. ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 90.05 ರೂ
>> ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ ಮತ್ತು ಡೀಸೆಲ್ ಲೀಟರ್‌ಗೆ 87.89 ರೂ.
>> ಭುವನೇಶ್ವರದಲ್ಲಿ ಪೆಟ್ರೋಲ್ ರೂ 103.19 ಮತ್ತು ಡೀಸೆಲ್ ಲೀಟರ್‌ಗೆ ರೂ 94.76
>> ಚಂಡೀಗಢದಲ್ಲಿ ಪೆಟ್ರೋಲ್ 96.20 ರೂ ಮತ್ತು ಡೀಸೆಲ್ ಲೀಟರ್‌ಗೆ 84.26 ರೂ
>> ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ ಮತ್ತು ಡೀಸೆಲ್ ಲೀಟರ್‌ಗೆ 97.82 ರೂ
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.