ಪ್ರಧಾನ ಮಂತ್ರಿ ಆವಾಸ್ ಯೋಜನೆ: ಪ್ರತಿಯೊಬ್ಬರಿಗೂ ಮನೆ ಕಟ್ಟಲು ಆರ್ಥಿಕ ನೆರವು! ಸುಲಭವಾಗಿ ಅರ್ಜಿ ಸಲ್ಲಿಸಿ, ಉತ್ತಮ ಮನೆ ನಿರ್ಮಿಸಿ.

Pradhan Mantri Awas Yojana: ಈ ಯೋಜನೆಯಡಿ ನಗರ ಪ್ರದೇಶಗಳಲ್ಲಿ ʼಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರʼ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ʼಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣʼ ಎಂಬ ಎರಡು ಪ್ರತ್ಯೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.

Written by - Puttaraj K Alur | Last Updated : Mar 1, 2025, 05:44 PM IST
  • ಕೇಂದ್ರ ಸರ್ಕಾರದಿಂದ ದೇಶದ ಎಲ್ಲಾ ವರ್ಗದ ಜನರಿಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ
  • ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ವಸತಿ ಸೌಲಭ್ಯ
  • ಇದು ದೇಶದ ಎಲ್ಲಾ ನಾಗರಿಕರಿಗೆ ಸುರಕ್ಷಿತ ಮತ್ತು ಸುಭದ್ರ ವಸತಿ ಒದಗಿಸುವ ಗುರಿ ಹೊಂದಿದೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ: ಪ್ರತಿಯೊಬ್ಬರಿಗೂ ಮನೆ ಕಟ್ಟಲು ಆರ್ಥಿಕ ನೆರವು! ಸುಲಭವಾಗಿ ಅರ್ಜಿ ಸಲ್ಲಿಸಿ, ಉತ್ತಮ ಮನೆ ನಿರ್ಮಿಸಿ.
ಪ್ರಧಾನ ಮಂತ್ರಿ ಆವಾಸ್ ಯೋಜನೆ

Pradhan Mantri Awas Yojana: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಎಲ್ಲಾ ವರ್ಗದ ಜನರಿಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಪೈಕಿ ವಸತಿ ಸೌಲಭ್ಯಗಳನ್ನು ಒದಗಿಸುವ ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯು ಒಂದು ಪ್ರಮುಖ ಯೋಜನೆಯಾಗಿದೆ. ದೇಶದ ಎಲ್ಲಾ ನಾಗರಿಕರಿಗೆ ಸುರಕ್ಷಿತ ಮತ್ತು ಸುಭದ್ರ ವಸತಿ ಒದಗಿಸುವ ಗುರಿಯನ್ನು ಇದು ಹೊಂದಿದೆ. 

Add Zee News as a Preferred Source

ಪ್ರಧಾನ ಮಂತ್ರಿ ಆವಾಸ್ ಯೋಜನೆ 

ಈ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಈ ಯೋಜನೆಯು ವಸತಿ ಸಮಸ್ಯೆಯನ್ನು ಪರಿಹರಿಸುವುದಲ್ಲದೆ, ಜನರ ಜೀವನ ಗುಣಮಟ್ಟವನ್ನು ಸುಧಾರಿಸುತ್ತದೆ. ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯ ಮೂಲಕ, ಸರ್ಕಾರವು ಜನರಿಗೆ ತಮ್ಮ ಕನಸಿನ ಮನೆಯನ್ನು ನಿರ್ಮಿಸಲು ಆರ್ಥಿಕ ಸಹಾಯವನ್ನು ನೀಡುತ್ತದೆ. ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯಿಂದ ಯಾರು ಪ್ರಯೋಜನ ಪಡೆಯಬಹುದು? ಈ ಕಾರ್ಯಕ್ರಮದ ಷರತ್ತುಗಳೇನು? ಈ ಎಲ್ಲಾ ವಿವರಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...

ಇದನ್ನೂ ಓದಿ: ತಿಂಗಳ ಮೊದಲ ದಿನವೇ ಆಘಾತ.. LPG ಸಿಲಿಂಡರ್ ಬೆಲೆ ಏರಿಕೆ! ಇಲ್ಲಿದೆ ನೋಡಿ ಇತ್ತೀಚಿನ ಬೆಲೆ..

ಈ ಯೋಜನೆಯಡಿ ನಗರ ಪ್ರದೇಶಗಳಲ್ಲಿ ʼಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರʼ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ʼಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣʼ ಎಂಬ ಎರಡು ಪ್ರತ್ಯೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ವಸತಿ ರಹಿತ ಕುಟುಂಬಗಳಿಗೆ ಶಾಶ್ವತ ವಸತಿ ಒದಗಿಸುವುದು ಈ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ. ಇದಲ್ಲದೆ ಈ ಯೋಜನೆಯು ದೇಶದ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ.

ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಗೆ ಅರ್ಹತಾ ಮಾನದಂಡಗಳು 

- ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.
- ಅರ್ಜಿದಾರರು ಈಗಾಗಲೇ ಶಾಶ್ವತ ಮನೆಯನ್ನು ಹೊಂದಿರಬಾರದು.
- ಈ ಯೋಜನೆಯಡಿ ನಗರ ಪ್ರದೇಶಗಳಲ್ಲಿ ಆದಾಯ ಮಿತಿಗಳು EWS (3 ಲಕ್ಷ ರೂ.), LIG (3-6 ಲಕ್ಷ ರೂ.) ಮತ್ತು MIG (6-9 ಲಕ್ಷ ರೂ.) ಆಗಿರುತ್ತದೆ.
- ಅರ್ಜಿದಾರರು ಮಾನ್ಯವಾದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು 

- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್‌ಬುಕ್
- ವಿಳಾಸ ಪುರಾವೆ
- ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ
- ಭೂ ದಾಖಲೆಗಳು (ಅನ್ವಯಿಸಿದರೆ)
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

- ಮೊದಲು ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- "ಹೊಸ ನೋಂದಣಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ಅಗತ್ಯವಿರುವ ಮಾಹಿತಿಯನ್ನು ನಮೂದಿಸಿ.
- ನೋಂದಣಿ ಪೂರ್ಣಗೊಂಡ ನಂತರ ನಿಮಗೆ ಲಾಗಿನ್ ವಿವರಗಳು ಸಿಗುತ್ತವೆ.
- ನಿಮ್ಮ ಲಾಗಿನ್ ಮಾಹಿತಿಯನ್ನು ಬಳಸಿಕೊಂಡು ಪೋರ್ಟಲ್‌ಗೆ ಲಾಗಿನ್ ಮಾಡಿ.
- ಅಗತ್ಯವಿರುವ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
- ಎಲ್ಲಾ ಮಾಹಿತಿ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ, ಫಾರ್ಮ್ ಅನ್ನು Submit ಮಾಡಿ.
- ಅರ್ಜಿಯನ್ನು Submit ಮಾಡಿದ ನಂತರ, ರಶೀದಿ ಅಥವಾ ಅರ್ಜಿ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿರಿ

ಇದನ್ನೂ ಓದಿ: ಶೀಘ್ರವೇ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಬಿಡುಗಡೆ; ಆಕರ್ಷಕ ವಿನ್ಯಾಸ, ಹತ್ತಾರು ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ!!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News