PM Kisan: ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ 11ನೇ ಕಂತು

PM Kisan 11th Installment: ಪಿಎಂ ಕಿಸಾನ್ ಯೋಜನೆಯ ಫಲಾನುಭವಿ ರೈತರಿಗೆ ಸಂತಸದ ಸುದ್ದಿಯಿದೆ. ಪಿಎಂ ಕಿಸಾನ್‌ನ 11 ನೇ ಕಂತನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ. ಈ ಕುರಿತಂತೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಟ್ವೀಟ್ ಮಾಡುವ ಮೂಲಕ ಪ್ರಮುಖ ವಿಷಯವನ್ನು ಹಂಚಿಕೊಂಡಿದ್ದಾರೆ.

Written by - Yashaswini V | Last Updated : Apr 12, 2022, 09:58 AM IST
  • ಪಿಎಂ ಕಿಸಾನ್ ಫಲಾನುಭವಿಗಳಿಗೆ ಪ್ರಮುಖ ಸುದ್ದಿ
  • 11ನೇ ಕಂತು ಈ ತಿಂಗಳು ಅಂದರೆ ಏಪ್ರಿಲ್‌ನಲ್ಲಿ ಬಿಡುಗಡೆಯಾಗಲಿದೆ
  • ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಪ್ರಮುಖ ವಿಷಯವನ್ನು ತಿಳಿಸಿದ್ದಾರೆ
PM Kisan: ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ 11ನೇ ಕಂತು  title=
PM Kisan Narendra Modi Tweet

ನವದೆಹಲಿ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿಯಿದೆ. ಪಿಎಂ ಕಿಸಾನ್‌ನ 11 ನೇ ಕಂತನ್ನು ಪಿಎಂ ನರೇಂದ್ರ ಮೋದಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ. ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ  ಮೋದಿ ಅವರು ರೈತರಿಗಾಗಿ ದೊಡ್ಡ ವಿಷಯ ಹೇಳಿದ್ದಾರೆ. 

'ದೇಶವು ನಮ್ಮ ರೈತ ಸಹೋದರ ಸಹೋದರಿಯರ ಬಗ್ಗೆ ಹೆಮ್ಮೆಪಡುತ್ತದೆ. ಅವರು ಬಲಿಷ್ಠರಾಗಿದ್ದರೆ, ನವ ಭಾರತವು ಹೆಚ್ಚು ಸಮೃದ್ಧವಾಗಿರುತ್ತದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿರುವುದು ನನಗೆ ಖುಷಿ ತಂದಿದೆ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ. 

ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಹಣ ಯಾವಾಗ ಬರುತ್ತದೆ?
ಪಿಎಂ ಕಿಸಾನ್ ಯೋಜನೆಯಡಿ, ವರ್ಷದ ಮೊದಲ ಕಂತಿನ ಹಣವನ್ನು ಏಪ್ರಿಲ್ 1 ರಿಂದ ಜುಲೈ 31 ರ ನಡುವೆ ರೈತರಿಗೆ ನೀಡಲಾಗುತ್ತದೆ ಎಂಬುದು ಗಮನಿಸಬೇಕಾದ ಸಂಗತಿ. ಅದೇ ಸಮಯದಲ್ಲಿ, ಎರಡನೇ ಕಂತಿನ ಹಣವನ್ನು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ ನೀಡಲಾಗುತ್ತದೆ. ಇದಲ್ಲದೇ ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ರಿಂದ ಮಾರ್ಚ್ 31 ರ ನಡುವೆ ವರ್ಗಾಯಿಸಲಾಗುತ್ತದೆ. ಅಂದರೆ ಈ ತಿಂಗಳಲ್ಲೇ ಮುಂದಿನ ಅಂದರೆ ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಹಣ ರೈತರ ಖಾತೆಗೆ ಜಮಾ ಆಗಲಿದೆ. 

ಇದನ್ನೂ ಓದಿ- Indian Railways: ಚಾರ್ಟ್ ಸಿದ್ಧಪಡಿಸಿದ ನಂತರವೂ ಕ್ಯಾನ್ಸಲ್ ರೈಲ್ವೆ ಟಿಕೆಟ್‌ಗೆ ಸಿಗುತ್ತೆ ರೀಫಂಡ್

ಪಿಎಂ ಕಿಸಾನ್ ಯೋಜನೆಯಲ್ಲಿ ಯಾವುದೇ ಸಮಸ್ಯೆಯಿದ್ದರೆ ಈ ರೀತಿ ಪರಿಹರಿಸಿ :
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ನಿಮಗೆ ಯಾವುದೇ ಸಂದೇಹಗಳಿದ್ದರೆ ಅಥವಾ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಮೇಲ್ ಐಡಿಗೆ ಮೇಲ್ ಮಾಡುವ ಮೂಲಕ ನೀವು ಪರಿಹಾರವನ್ನು ಪಡೆಯಬಹುದು. ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ನಲ್ಲಿ ಸಂಪರ್ಕಿಸಬಹುದು. ನಿಮ್ಮ ದೂರನ್ನು ನೀವು ಇ-ಮೇಲ್ ಐಡಿ ( pmkisan-ict@gov.in ) ಗೆ ಮೇಲ್ ಮಾಡಬಹುದು.

ಇದಲ್ಲದೆ, ಈ ಯೋಜನೆಯ ಪ್ರಯೋಜನವನ್ನು ಇನ್ನೂ ಪಡೆಯದ ರೈತರು,  ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ, ನಂತರ ನೀವು ಪಟ್ಟಿಯಲ್ಲಿ ನಿಮ್ಮ ಕಂತಿನ ಸ್ಥಿತಿಯನ್ನು ಪರಿಶೀಲಿಸಬಹುದು. ಅದಕ್ಕಾಗಿ ಹಂತ-ಹಂತದ ಪ್ರಕ್ರಿಯೆಯನ್ನು ಇಲ್ಲಿ ನೋಡಿ. 

ಈ ರೀತಿಯ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ:
1. ಮೊದಲನೆಯದಾಗಿ ನೀವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ https://pmkisan.gov.in ಗೆ ಹೋಗಿ .
2. ಮುಖಪುಟದಲ್ಲಿ, ನೀವು ರೈತರ ಕಾರ್ನರ್ ಆಯ್ಕೆಯನ್ನು ನೋಡುತ್ತೀರಿ. 
3. ರೈತರ ಕಾರ್ನರ್ ವಿಭಾಗದಲ್ಲಿ, ಫಲಾನುಭವಿಗಳ ಪಟ್ಟಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. 
4. ಈಗ ನೀವು ಡ್ರಾಪ್ ಡೌನ್ ಪಟ್ಟಿಯಿಂದ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
5. ಇದರ ನಂತರ ನೀವು 'Get Report' ಮೇಲೆ ಕ್ಲಿಕ್ ಮಾಡಿ. 
6. ಇದರ ನಂತರ ಫಲಾನುಭವಿಗಳ ಸಂಪೂರ್ಣ ಪಟ್ಟಿ ಕಾಣಿಸಿಕೊಳ್ಳುತ್ತದೆ, ಅದರಲ್ಲಿ ನೀವು ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಇದನ್ನೂ ಓದಿ- 7th Pay Commission: ಹೊಸ ಫಾರ್ಮುಲಾ ಅಡಿ DA ಘೋಷಣೆ, ಜುಲೈನಿಂದ ಬದಲಾಗಲಿದೆ ಲೆಕ್ಕಾಚಾರ

ನಿಮ್ಮ ಕಂತಿನ ಸ್ಥಿತಿಯನ್ನು ಈ ರೀತಿ ಪರಿಶೀಲಿಸಿ :
1. ನಿಮ್ಮ ಕಂತಿನ ಸ್ಥಿತಿಯನ್ನು ನೋಡಲು, ನೀವು ಮೊದಲು ಪಿಎಂ ಕಿಸಾನ್ ವೆಬ್‌ಸೈಟ್‌ಗೆ ಹೋಗಿ.
2. ಈಗ ಬಲಭಾಗದಲ್ಲಿರುವ ರೈತರ ಕಾರ್ನರ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
3. ಇದರ ನಂತರ ನೀವು ಬೆನಿಫಿಶಿಯರಿ ಸ್ಟೇಟಸ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4. ಈಗ ನಿಮ್ಮ ಮುಂದೆ ಹೊಸ ಪುಟ ತೆರೆದುಕೊಳ್ಳುತ್ತದೆ.
5. ಇಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
6. ಇದರ ನಂತರ ನೀವು ನಿಮ್ಮ ಕಂತಿನ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News