PM Kisan 12th Installment Update : ಪಿಎಂ ಕಿಸಾನ್ ಯೋಜನೆಯ 12 ನೇ ಕಂತನ್ನು ಪ್ರಧಾನಿ ಮೋದಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಕೇಂದ್ರ ಸರ್ಕಾರವು ನಡೆಸುತ್ತಿರುವ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ, ಪ್ರಧಾನಿ ಮೋದಿ ಅವರೇ ಹಲವು ವೇದಿಕೆಗಳಲ್ಲಿ  ರೈತರ ಹಿತಾಸಕ್ತಿಯ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಯ 11 ಕಂತು ಬಿಡುಗಡೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ 12 ನೇ ಕಂತು ಕೂಡಾ ಬಿಡುಗಡೆಯಾಗಲಿದೆ. 12 ನೇ ಕಂತಿನ ಹಣಕ್ಕಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದರು. 'ದೇಶವು ನಮ್ಮ ರೈತ ಸಹೋದರ ಸಹೋದರಿಯರ ಬಗ್ಗೆ ಹೆಮ್ಮೆಪಡುತ್ತದೆ. ರೈತರು ಎಷ್ಟು ಬಲಿಷ್ಠರಾಗುತ್ತಾರೆಯೋ ನವ ಭಾರತ ಕೂಡಾ ಹೆಚ್ಚು ಸಮೃದ್ಧವಾಗಿರುತ್ತದೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿರುವುದು ಸಂತೋಷ್ ನೀಡಿದೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : Gold Price Today : ವರಮಹಾಲಕ್ಷ್ಮಿ ಹಬ್ಬದಂದು ಭಾರೀ ದುಬಾರಿಯಾಯಿತು ಚಿನ್ನ


12ನೇ ಕಂತಿನ ಹಣ ಯಾವಾಗ ಸಿಗಲಿದೆ ? 
ಪಿಎಂ ಕಿಸಾನ್‌ನ ಮುಂದಿನ ಅಂದರೆ 12ನೇ ಕಂತಿನ ಹಣ ಯಾವಾಗ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರಿಗೆ ವರ್ಷದ ಮೊದಲ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರ ನಡುವೆ ನೀಡಲಾಗುತ್ತದೆ. ಎರಡನೇ ಕಂತು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ ನೀಡಲಾಗುತ್ತದೆ. ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ಮತ್ತು ಮಾರ್ಚ್ 31 ರ ನಡುವೆ ವರ್ಗಾಯಿಸಲಾಗುತ್ತದೆ. ಅದರಂತೆ ಪಿಎಂ ಕಿಸಾನ್ ನ 12ನೇ ಕಂತು ಮುಂದಿನ ತಿಂಗಳಲ್ಲಿ ರೈತರ ಖಾತೆಗೆ ಬರಬಹುದು.


ನಿಮ್ಮ ಅಪ್ಲಿಕೇಶನ್ ಅನ್ನು ಅಪ್ಡೇಟ್ ಮಾಡಿಕೊಳ್ಳಿ : 
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅದನ್ನು ಶೀಘ್ರವಾಗಿ ಪರಿಹರಿಸಿಕೊಳ್ಳಿ .
1.ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಇ ಮೇಲ್ ಐಡಿಗೆ ಮೇಲ್ ಮಾಡುವ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.


2. ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಮೂಲಕ ಸಂಪರ್ಕಿಸಬಹುದು.


3. ಅಥವಾ ನಿಮ್ಮ ದೂರನ್ನು ( pmkisan-ict@gov.in ) ಇ-ಮೇಲ್ ಐಡಿ ಗೆ ಮೇಲ್ ಮಾಡಬಹುದು.
4. ಇನ್ನೂ ಕೂಡಾ ಯೋಜನೆಗೆ ಅರ್ಜಿ ಸಲ್ಲಿಸದಿದ್ದರೆ, ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡುವ ಮೂಲಕ  ನೋಂದಾಯಿಸಿಕೊಳ್ಳಿ. 


ಇದನ್ನೂ ಓದಿ : ಈರುಳ್ಳಿ ಕಣ್ಣೀರು ತರಿಸುತ್ತಿದೆ; ನಿಂಬೆ ಹುಳಿ ಅನುಭವ ನೀಡ್ತಿದೆ: ಹಬ್ಬದ ದಿನ ತರಕಾರಿ ಬೆಲೆ ಏರಿಕೆ!


ನಿಮ್ಮ  ಕಂತಿನ ಸ್ಟೇಟಸ್ ಅನ್ನು ಈ ರೀತಿ ಪರಿಶೀಲಿಸಿ :
1. ಕಂತಿನ ಸ್ಟೇಟಸ್ ನೋಡಲು, PM ಕಿಸಾನ್ ವೆಬ್‌ಸೈಟ್‌ಗೆ ಹೋಗಿ.
2. ಈಗ Farmers Corner ಮೇಲೆ ಕ್ಲಿಕ್ ಮಾಡಿ.
3. ಈಗ Beneficiary Status ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4. ಇಲ್ಲಿ ಹೊಸ ಪುಟ ತೆರೆದುಕೊಳ್ಳುತ್ತದೆ.
5. ಇಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
6. ಇದರ ನಂತರ ಕಂತಿನ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ. 


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.