PM Kisan 16th Installment: ಈ ರೈತರಿಗೆ ಸಿಗಲ್ಲ 16ನೇ ಕಂತಿನ ₹2000, ಕಾರಣ ಇಲ್ಲಿದೆ!
PM Kisan 16th Installment: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ರೈತರಿಗೆ ಸ್ವಾಭಿಮಾನದ ಬದುಕು ಕಲ್ಪಿಸುವ ಒಂದು ಯೋಜನೆಯಾಗಿದೆ. ಶೀಘ್ರದಲ್ಲಿಯೇ ಪ್ರಧಾನಿ ಮೋದಿ ಈ ಯೋಜನೆಯ 16ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. (Business News In Kannada)
PM Kisan Yojana 2024: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ರೈತರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸುವ ಒಂದು ಯೋಜನೆಯಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಈಗಾಗಲೇ ಪ್ರಕಟಿಸಲಾಗಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 16 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು 28 ಫೆಬ್ರವರಿ 2024 ರಂದು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಿಂದ ರೈತರ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಿದ್ದಾರೆ.
9 ಕೋಟಿ ರೈತ ಕುಟುಂಬಗಳಿಗೆ ಪ್ರಯೋಜನ ಸಿಗಲಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆ ಮೂಲಕ ಎಲ್ಲಾ ಫಲಾನುಭವಿ ರೈತರಿಗೆ ವಾರ್ಷಿಕ ₹ 6000 ಆರ್ಥಿಕ ನೆರವು ಒದಗಿಸಲಾಗುತ್ತದೆ, ಈ ಮೂಲಕ 11 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ₹ 2.81 ಲಕ್ಷ ಕೋಟಿಯನ್ನು ವರ್ಗಾಯಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 28 ರಂದು 16 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಇದರ ಅಡಿಯಲ್ಲಿ ಸುಮಾರು 9 ಕೋಟಿ ರೈತ ಕುಟುಂಬಗಳು 21 ಸಾವಿರ ಕೋಟಿ ರೂ. ಪಡೆಯಲಿವೆ.
ಈ ರೈತರಿಗೆ ಪ್ರಯೋಜನ ಸಿಗುವುದಿಲ್ಲ
ಪಿಎಂ ಕಿಸಾನ್‌ನ 16 ನೇ ಕಂತಿನ ಪ್ರಯೋಜನವನ್ನು ಪಡೆಯಲು, ಭೂಮಿಯ ದಾಖಲೆಗಳನ್ನು ಅಪ್‌ಲೋಡ್ ಮಾಡುವುದು, ಸಕ್ರಿಯ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಮಾಡುವುದು ಮತ್ತು ಇ-ಕೆವೈಸಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಕೆಲಸ ಮಾಡದ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಸಿಗುವುದಿಲ್ಲ. ಅಂದರೆ ರೈತರಿಗೆ 16ನೇ ಕಂತಿನ 2 ಸಾವಿರ ರೂ. ಸಿಗುವುದಿಲ್ಲ. ಈ ಕೆಲಸ ಮಾಡದೆ ಇದ್ದರೆ ಮತ್ತು ನೀವು ಪಿಎಮ್ ಕಿಸಾನ್ ಯೋಜನೆಯ ಅರ್ಹ ಫಲಾನುಭವಿಗಳಾಗಿದ್ದರೆ, ಈ ಕೆಲಸವನ್ನು ಬೇಗನೇ ಪೂರ್ಣಗೊಳಿಸಿ.
ಪಿಎಂ ಕಿಸಾನ್ ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. ಒಟಿಪಿ ಆಧಾರಿತ ಇ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಗಾಗಿ ಹತ್ತಿರದ ಸಿಎಸ್‌ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ http://pmkisan.gov.in ಗೆ ಭೇಟಿ ನೀಡಿ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.