ನವದೆಹಲಿ: ಇಂದು ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಗಿಫ್ಟ್ ನೀಡಲಿದ್ದಾರೆ. ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’(Pradhan Mantri Kisan Samman  Nidhi Scheme) ಯೋಜನೆಯಡಿ ಫಲಾನುಭವಿ ರೈತರಿಗೆ 10ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.


COMMERCIAL BREAK
SCROLL TO CONTINUE READING

ಶನಿವಾರ(ಜ.1)ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪಿಎಂ-ಕಿಸಾನ್ ಯೋಜನೆ’(PM Kisan)ಯ 10ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ. ರೈತರು pmindiawebcast.nic.in ಅಥವಾ ದೂರದರ್ಶನ ಮೂಲಕ ಈ ಕಾರ್ಯಕ್ರಮಕ್ಕೆ ಸೇರಿಕೊಳ್ಳಬಹುದು.


ಇದನ್ನೂ ಓದಿ: LPG Cylinder Price : ಹೊಸ ವರ್ಷದ ದಿನವೇ ಭರ್ಜರಿ ಗಿಫ್ಟ್ : LPG ಸಿಲಿಂಡರ್ ಬೆಲೆಯಲ್ಲಿ ₹100 ಇಳಿಕೆ!


‘ಪ್ರಧಾನ ಮಂತ್ರಿ ಕಿಸಾನ್ ಯೋಜನೆ’ಯಡಿ ದೇಶಾದ್ಯಂತ ರೈತರು ವರ್ಷಕ್ಕೆ 6000 ರೂ. ಪಡೆಯುತ್ತಾರೆ. ದೇಶದಲ್ಲಿನ 10 ಕೋಟಿಗೂ ಹೆಚ್ಚಿನ ರೈತರ ಕುಟುಂಬಗಳಿಗೆ ಸುಮಾರು 20,000 ಸಾವಿರ ಕೋಟಿ ರೂ. ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಪಿಎಂಒ ಕಚೇರಿಯು ಮಾಹಿತಿ ನೀಡಿದೆ.


4th Quarter 2022: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆಯಿಲ್ಲ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.