ಈ ರೈತರು ತಕ್ಷಣ ಹಿಂದಿರುಗಿಸಬೇಕು ಪಿಎಂ ಕಿಸಾನ್ ಹಣ, ಇಲ್ಲವಾದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ
PM Kisan Yojana: ಪಂಚಾಯತ್ ಮಟ್ಟದಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆಯ ನಂತರ ಹಲವು ಹೆಸರುಗಳು ಮುನ್ನೆಲೆಗೆ ಬಂದಿದ್ದು, ಪಿಎಂ ಕಿಸಾನ್ ಯೋಜನೆಯ ಲಾಭವನ್ನು ಹಲವರು ತಪ್ಪಾಗಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅಂತಹವರ ವಿರುದ್ಧ ಸರಕಾರದಿಂದ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಲಾಗುತ್ತಿದೆ.
PM Kisan Yojana : ರೈತರ ಅನುಕೂಲಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದಲೇ ಸರ್ಕಾರ ಈ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರಿಗಾಗಿ ಆರಂಭಿಸಿರುವ ವಿವಿಧ ಯೋಜನೆಗಳಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪ್ರಮುಖವಾದುದು. ಈ ಯೋಜನೆಯಡಿ ದೇಶಾದ್ಯಂತ 10 ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಅನರ್ಹರ ಪಾಲಾಗುತ್ತಿರುವುದು ಕೂಡಾ ಬೆಳಕಿಗೆ ಬಂದಿದೆ.
ಪಂಚಾಯತ್ ಮಟ್ಟದಲ್ಲಿ ಸಾಮಾಜಿಕ ಲೆಕ್ಕಪರಿಶೋಧನೆ :
ಪಿಎಂ ಕಿಸಾನ್ ಯೋಜನೆಯ ಹಣ ಅನರ್ಹರ ಪಾಲಾಗುತ್ತಿರುವ ವಿಚಾರ ಮಾಧ್ಯಮಗಳಲ್ಲಿ ಬಯಲಾಗುತ್ತಿದ್ದಂತೆಯೇ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಪಂಚಾಯತ್ ಮಟ್ಟದಲ್ಲಿ ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಪ್ರಾರಂಭಿಸಿದೆ. . ಇದರಲ್ಲಿ, ಪಿಎಂ ಕಿಸಾನ್ ಯೋಜನೆಗೆ ಅರ್ಹರಲ್ಲದವರ ಹೆಸರನ್ನು ಬಹಿರಂಗಪಡಿಸಲಾಗಿದೆ. ಅಂಥವರಿಗೆ ಹಣ ವಾಪಸ್ ಕೊಡುವಂತೆ ಸರ್ಕಾರ ಸೂಚನೆ ನೀಡಿದೆ. ತಪ್ಪಿದಲ್ಲಿ ಸರ್ಕಾರದಿಂದ ಅನರ್ಹರ ವಿರುದ್ಧ ನೋಟಿಸ್ ಜಾರಿ ಮಾಡುವ ಮೂಲಕ ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ : ರೇಶನ್ ಕಾರ್ಡ್ ಇದ್ದರೆ ಸರ್ಕಾರದ ವತಿಯಿಂದ ಸಿಗಲಿದೆ ಈ ಲಾಭ .!
ಶಿಕ್ಷೆ ತಪ್ಪಿಸಲು ಹಣವನ್ನು ಮರುಪಾವತಿಸಿ :
ಪಿಎಂ ಕಿಸಾನ್ ಯೋಜನೆಯ ಲಾಭವನ್ನು ಅನರ್ಹರೂ ಪಡೆದಿದ್ದಲ್ಲಿ ತ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕುಟುಂಬದ ಒಬ್ಬ ವ್ಯಕ್ತಿ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಬಹುದು. ಅಲ್ಲದೆ, ಸರ್ಕಾರಿ ಉದ್ಯೋಗ ಮಾಡುವ ಅಥವಾ ಆದಾಯ ತೆರಿಗೆ ಸಲ್ಲಿಸುವ ರೈತರು ಯೋಜನೆಯ ಲಾಭವನ್ನು ಪಡೆಯುವಂತಿಲ್ಲ. ನೀವು ಪಡೆದಿರುವ ಪಿಎಂ ಕಿಸಾನ್ ಯೋಜನೆಯ ಹಣವನ್ನು ಮರುಪಾವತಿ ಮಾಡಬೇಕೆ ಅಥವಾ ಬೇಡವೇ ಎನ್ನುವುದನ್ನು ಹೀಗೆ ಕಂಡು ಕೊಳ್ಳಿ ..
ಈ ಮಾಹಿತಿಗಾಗಿ, ಮೊದಲು ನೀವು PM ಕಿಸಾನ್ ವೆಬ್‌ಸೈಟ್‌ಗೆ ಹೋಗಿ. ಇಲ್ಲಿ ಕಾಣುವ ಫಾರ್ಮರ್ ಕಾರ್ನರ್‌ನಲ್ಲಿ ರಿಫಂಡ್ ಆನ್‌ಲೈನ್ ಆಯ್ಕೆಯು ಗೋಚರಿಸುತ್ತದೆ. ಇಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ. ಇಲ್ಲಿ You are not eligble for any refund amount ಎಂದು ಬಂದರೆ ಹಣವನ್ನು ಮರುಪಾವತಿಸಬೇಕಾಗಿಲ್ಲ. ಒಂದು ವೇಳೆ You are not eligble for any refund amount ಮೆಸೇಜ್ ಕಾಣಿಸದೆ ಹೋದರೆ ನೀವು ಪಡೆದಿರುವ ಮೊತ್ತವನ್ನು ವಾಪಸ್ ಮಾಡಬೇಕಾಗುತ್ತದೆ.
ಇದನ್ನೂ ಓದಿ : Bumper Discount on Cars: ಈ ಕಾರುಗಳ ಮೇಲೆ ಸಿಗುತ್ತಿದೆ 94,000 ರೂ.ವರೆಗಿನ ಭರ್ಜರಿ ಡಿಸ್ಕೌಂಟ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.