PM Kisan Yojana Update: ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ಈ ಮಹತ್ವದ ಸುದ್ದಿ ನಿಮಗಾಗಿ. ಸರ್ಕಾರ ಶೀಘ್ರದಲ್ಲೇ ನಿಮ್ಮ ಖಾತೆಗೆ 2 ಸಾವಿರ ರೂ. ಹಣ ವರ್ಗಾಯಿಸಲಿದೆ. ಆದರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತುಗಳಿಗೆ ಕೆವೈಸಿ ಹೊಂದಿರುವುದು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ. ನೀವು KYC ಅನ್ನು ಆಫ್‌ಲೈನ್‌ನಲ್ಲಿ ಮಾಡಿದರೆ, ನೀವು ಅದಕ್ಕೆ ಹಣ ಪಾವತಿಸಬೇಕಾಗಲಿದೆ. ನೀವು ಇ-ಕೆವೈಸಿಯನ್ನು ಕೂಡ ಮಾಡಬಹುದು. ಎರಡೂ ಪ್ರಕ್ರಿಯೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-DL New Rules : ವೈಯಕ್ತಿಕ, ವಾಣಿಜ್ಯ 'ಡ್ರೈವಿಂಗ್ ಲೈಸೆನ್ಸ್'ಗೆ ಜಾರಿಯಗಲಿವೆ ಹೊಸ ನಿಯಮಗಳು!

ಇ-ಕೆವೈಸಿ ಮಾಡುವುದು ಹೇಗೆ?
ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಆನ್‌ಲೈನ್ ಕೆವೈಸಿ ಮಾಡುವ ಆಯ್ಕೆಯನ್ನು ನೀಡಲಾಗಿದೆ. ಆಧಾರ್ ಆಧಾರಿತ OTP ದೃಢೀಕರಣಕ್ಕಾಗಿ ರೈತರು ಕಿಸಾನ್ ಕಾರ್ನರ್‌ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಆಯ್ದುಕೊಳ್ಳಬೇಕು ಎಂದು ಈ ಪೋರ್ಟಲ್‌ನಲ್ಲಿ ಹೇಳಲಾಗಿದೆ. ಆದರೆ, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ, ನೀವು ನಿಮ್ಮ ಹತ್ತಿರದ CSC ಕೇಂದ್ರಕ್ಕೆ ಭೇಟಿ ನೀಡಬೇಕಾಗಲಿದೆ. ಮನೆಯಲ್ಲಿ ಕುಳಿತು ಕೂಡ ನೀವು ಇ-ಕೆವೈಸಿ ಪ್ರಕ್ರಿಯೆಯನ್ನು ಹೇಗೆ ಪೂರ್ಣಗೊಳಿಸಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,


ಇದನ್ನೂ ಓದಿ-PPF ಯೋಜನೆಯಲ್ಲಿ ₹1,000 ಹೂಡಿಕೆ ಮಾಡಿ ₹18 ಲಕ್ಷಕ್ಕಿಂತ ಹೆಚ್ಚು ಲಾಭ ಪಡೆಯಿರಿ! 

ಇ-ಕೆವೈಸಿ ಪ್ರಕ್ರಿಯೆಯ ಬಗ್ಗೆ ಇಲ್ಲಿದೆ ಮಾಹಿತಿ
1. ನಿಮ್ಮ ಮೊಬೈಲ್, ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ಸಹಾಯದಿಂದ ನೀವು ಮನೆಯಲ್ಲಿಯೇ ಕುಳಿತು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
2. ಇದಕ್ಕಾಗಿ, ನೀವು ಮೊದಲು https://pmkisan.gov.in/ ಪೋರ್ಟಲ್‌ಗೆ ಭೇಟಿ ನೀಡಿ.
3. ಈಗ ನೀವು ಈ ಹೋಂಪೇಜ್  ಬಲಭಾಗದಲ್ಲಿ ಟ್ಯಾಬ್‌ಗಳನ್ನು ನೋಡಬಹುದು.
4. ಈ ಟ್ಯಾಬ್ ಗಳಲ್ಲಿ  E-KYC ಟ್ಯಾಬ್ ಕೂಡ ನೀಡಲಾಗಿದೆ, ಅದರ ಮೇಲೆ ಕ್ಲಿಕ್ ಮಾಡಿ.
5. ಇಲ್ಲಿ ನೀವು ನಿಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
6. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಹತ್ತಿರದ CSC ಕೇಂದ್ರಗಳನ್ನು ಸಂಪರ್ಕಿಸಿ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.