ಹೇಗಿರಲಿದೆ ಈ ಬಾರಿಯ ಬಜೆಟ್? ಪ್ರಧಾನಿ ಮೋದಿ ಹೇಳಿದ್ದೇನು ?

PM Narendra Modi on Budget Session:  ಈ ಬಾರಿಯ ಬಜೆಟ್ ಹೇಗಿರುತ್ತದೆ ಎನ್ನುವುದನ್ನು ಪ್ರಧಾನ ಮಂತ್ರಿ  ವಿವರಿಸಿದ್ದಾರೆ. ಈ ಬಾರಿಯ ಬಜೆಟ್ ಭರವಸೆಯ ಕಿರಣವನ್ನು ಹೊತ್ತು ತರುತ್ತಿದೆ ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ. 

Written by - Ranjitha R K | Last Updated : Jan 31, 2023, 01:09 PM IST
  • ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ
  • ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ.
  • ಈ ಬಾರಿಯ ಬಜೆಟ್ ಹೇಗಿರುತ್ತದೆ ?
ಹೇಗಿರಲಿದೆ ಈ ಬಾರಿಯ ಬಜೆಟ್? ಪ್ರಧಾನಿ ಮೋದಿ ಹೇಳಿದ್ದೇನು ?  title=

PM Narendra Modi on Budget Session:  ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ  ಆರಂಭವಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಬಜೆಟ್  ಹೇಗಿರುತ್ತದೆ ಎನ್ನುವುದನ್ನು ವಿವರಿಸಿದ್ದಾರೆ. ಈ ಬಾರಿಯ ಬಜೆಟ್ ಭರವಸೆಯ ಕಿರಣವನ್ನು ಹೊತ್ತು ತರುತ್ತಿದೆ ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ. 

ಈ ಬಾರಿಯ ಬಜೆಟ್ ಹೇಗಿರುತ್ತದೆ  ? :
ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ  ಬಜ್ಹೆತ್ ಬಗ್ಗೆ ಮಾತನಾಡಿದ್ದಾರೆ. 'ಇಂದು ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಆರ್ಥಿಕ ಜಗತ್ತಿನ ವಿಶ್ವಾಸಾರ್ಹ ಧ್ವನಿ, ಸಕಾರಾತ್ಮಕ ಸಂದೇಶ, ಭರವಸೆ ಮತ್ತು ಉತ್ಸಾಹದ ಕಿರಣ ಹೊರಹೊಮ್ಮಲಿದೆ ಎಂದು ಹೇಳಿದ್ದಾರೆ. ಈ ಬಾರಿಯ ಬಜೆಟ್  ಹೊಸ ಭರವಸೆಯ ಕಿರಣವನ್ನು, ಹೊಸ ಭರವಸೆಗಳನ್ನು ಹೊತ್ತು ತರುತ್ತಿದೆ ಎಂದು ಹೇಳಿದ್ದಾರೆ.  ಭಾರತದ ಬಜೆಟ್ ಮೇಲೆ ಇಡೀ ವಿಶ್ವವೇ ತನ್ನ ದೃಷ್ಟಿಯನ್ನು ನೆಟ್ಟಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ :  ಮನೆ ಖರೀದಿಸುವವರಿಗೆ ಈ ಬಾರಿ ಆಗುವುದು ಲಾಭ! ಬಜೆಟ್ ಮುನ್ನಾ ದಿನ ಹೊರ ಬಿತ್ತು ಮಾಹಿತಿ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಬಜೆಟ್ ಮಂಡಿಸುತ್ತಿದ್ದಾರೆ. ಭಾರತ ಮಾತ್ರವಲ್ಲ, ವಿಶ್ವವೇ ಈ ಬಜೆಟ್‌ನತ್ತ ಗಮನ ಹರಿಸುತ್ತಿದೆ. ಭಾರತದ ಈ ಬಜೆಟ್ ವಿಶ್ವದ ಆರ್ಥಿಕತೆಯ ಮೇಲೆ ಕೂಡಾ ಬೆಳಕು ಚೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ನಿರ್ಮಲಾ  ಸೀತಾರಾಮನ್  ಸಫಲರಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ವಿರೋಧ ಪಕ್ಷಗಳಿಂದ ಪ್ರಧಾನಿ ಮೋದಿ ನಿರೀಕ್ಷೆ :
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಭಾಗವಹಿಸುವತೆ ಮತ್ತುಈ  ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಪ್ರತಿಪಕ್ಷದ ಸದಸ್ಯರೆಲ್ಲರೂ ಉತ್ತಮ ಸಿದ್ಧತೆಯೊಂದಿಗೆ ಆಗಮಿಸಿ ಸದನದಲ್ಲಿ ತಮ್ಮ ವಿಷಯವನ್ನು  ಮಂಡಿಸಲಿದ್ದಾರೆ ಎನ್ನುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ :  Budget 2023: ವಾಹನ ಖರೀದಿಸಬೇಕೆ? ಎರಡೇ ಎರಡು ದಿನ ವೇಟ್ ಮಾಡಿ, ಸಿಗಲಿದೆ ಈ ಸಂತಸದ ಸುದ್ದಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News